Thursday, November 5, 2026
spot_img
More
    spot_img
    HomeStateಯಡಿಯೂರಪ್ಪ ಜೈಲಿಗೆ ಹೋಗಿದ್ದು ಯಾರಿಂದ ಎಂದು ತಿಳಿಸಿದ ಬಸನಗೌಡ ಯತ್ನಾಳ್

    ಯಡಿಯೂರಪ್ಪ ಜೈಲಿಗೆ ಹೋಗಿದ್ದು ಯಾರಿಂದ ಎಂದು ತಿಳಿಸಿದ ಬಸನಗೌಡ ಯತ್ನಾಳ್

    ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾಡಿದ ತಪ್ಪುಗಳಿಂದಲೇ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಜೈಲಿಗೆ ಹೋಗಿದ್ದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ವಾಗ್ದಾಳಿ ನಡೆಸಿದ್ದಾರೆ.

    ವಿಜಯಪುರದಲ್ಲಿ ಇಂದು‌ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರಿಗೆ ಮನೆಯಲ್ಲಿ ಕಿಂಚಿತ್ತೂ ಕಿಮ್ಮತ್ತಿಲ್ಲ. ಅವರು ಮೊದಲು ಪುತ್ರ ವ್ಯಾಮೋಹವನ್ನು ಬಿಡಬೇಕು. ಏಕೆಂದರೆ ವಿಜಯೇಂದ್ರ ಅವರು ಹೊರಗಡೆ ಮಾತ್ರ ಪೂಜ್ಯ ತಂದೆ ಎನ್ನುತ್ತಾರೆ. ಆದರೆ ಮನೆಯಲ್ಲಿ ಯಡಿಯೂರಪ್ಪಗೆ ಮುದಿಯಾ ಎಂದು ಕರೆಯುತ್ತಾರೆ. ಯಡಿಯೂರಪ್ಪ ಅವರು ತಮ್ಮ ಸ್ವಾರ್ಥಕ್ಕಾಗಿ ಅನೇಕರನ್ನು ಮಣ್ಣಲ್ಲಿ ಇಟ್ಟಿದ್ದು, ಬಿ.ಬಿ.ಶಿವಪ್ಪ ಮತ್ತು ಮಲ್ಲಿಕಾರ್ಜುನಯ್ಯ ಸೇರಿದಂತೆ ಹಲವರಿಗೆ ಅನ್ಯಾಯ ಮಾಡಿದ್ದಾರೆ. ಈಗಲಾದರೂ ಅವರು ಸುಮ್ಮನೆ ಮೊಮ್ಮಕ್ಕಳ ಜೊತೆ ಆಟ ಆಡುತ್ತಾ ಕೂರಲಿ ಎಂದು ಲೇವಡಿ ಮಾಡಿದರು.

    ಇನ್ನೂ ರಮೇಶ್‌ ಜಾರಕಿಕೊಳಿ ಅವರ ಪರ ನಾನು ಸದಾಕಾಲ ಇರುತ್ತೇನೆ. ಆದರೆ ನಮ್ಮ ವಿರುದ್ಧ ಎರಡು ಹಂದಿಗಳನ್ನು ಹೊರತು ಪಡಿಸಿ ಬೇರೆ ಯಾರೂ ಮಾತನಾಡಲ್ಲ. ಆ ಹಂದಿಗಳ ಹೇಳಿಕೆಗಳಿಗೆಲ್ಲಾ ನಾವು ತಲೆಕೆಡಿಸಿಕೊಳ್ಳಲು ಆಗುವುದಿಲ್ಲ. ಹೊಗಳು ಭಟ್ಟರು ವಿಜಯೇಂದ್ರ ಪರ ಮಾತನಾಡುತ್ತಾರೆ ಎಂದು ಟೀಕಿಸಿದರು.

    ವಿಜಯೇಂದ್ರಗೆ ರಾಜ್ಯಾಧ್ಯಕ್ಷನಾಗಲು ಲಾಯಕ್ಕಿಲ್ಲ, ಅವರನ್ನು ನಾವ್ಯಾರು ರಾಜ್ಯಾಧ್ಯಕ್ಷನೆಂದು ಒಪ್ಪುವುದಿಲ್ಲ. ಅವನಿಂದಲೇ ಪಾಪ ಸುನೀಲ್‌ ಕುಮಾರ್‌ ಕಾರ್ಯದರ್ಶಿ ಸ್ಥಾನದಿಂದ ಬಿಡುಗಡೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆಂದು ಅನ್ನಿಸುತ್ತದೆ. ಹೀಗಾಗಿ ರಮೇಶ್‌ ಜಾರಕಿಹೊಳಿ ಮಾತನಾಡಿರುವುದರಲ್ಲಿ ತಪ್ಪೇನಿಲ್ಲ. ಮೊದಲೇ ನಾವು ಉತ್ತರ ಕರ್ನಾಟಕದವರು. ಆ ಕಾರಣಕ್ಕೆ ನಾವು ಯಾರಿಗೂ ಹೆದರಲ್ಲ ಎಂದು ಕಿಡಿಕಾರಿದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search