ಕರಾಚಿ: ನಿನ್ನೆ ( ಫೆಬ್ರವರಿ 19 ) ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಉದ್ಘಾಟನಾ ಪಂದ್ಯದಲ್ಲಿ ನ್ಯೂಜಿಲೆಂಡ್ ಪಾಕಿಸ್ತಾನದ ವಿರುದ್ಧ 60 ರನ್‌ಗಳ ಭರ್ಜರಿ ಗೆಲುವು ಕಂಡಿದೆ.
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ವಿಲ್ ಯಂಗ್ ಹಾಗೂ ಟಾಮ್ ಲಾಥಮ್ ಶತಕಗಳ ನೆರವಿನಿಂದ 50 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 320 ರನ್ ಕಲೆಹಾಕಿ ಪಾಕಿಸ್ತಾನಕ್ಕೆ 321 ರನ್‌ಗಳ ಸವಾಲಿನ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಲು ಯತ್ನಿಸಿದ ಪಾಕಿಸ್ತಾನ 47.2 ಓವರ್‌ಗಳಲ್ಲಿ 260 ರನ್‌ಗಳಿಗೆ ಆಲ್‌ಔಟ್ ಆಯಿತು.
ನ್ಯೂಜಿಲೆಂಡ್ ಬ್ಯಾಟಿಂಗ್ ಮಾತ್ರವಲ್ಲದೇ ಬೌಲಿಂಗ್‌ನಲ್ಲೂ ಸಹ ಉತ್ತಮ ಪ್ರದರ್ಶನ ತೋರಿದರು. ಇನ್ನು ಆಟಗಾರರ ಫೀಲ್ಡಿಂಗ್ ಗೆಲುವಿಗೆ ಕಾರಣವಾದ ಪ್ರಮುಖ ಅಂಶಗಳಲ್ಲೊಂದು. ಅದರಲ್ಲಿಯೂ ಪಾಕ್ ನಾಯಕ ಮೊಹಮ್ಮದ್ ರಿಜ್ವಾನ್ ಅವರ ಕ್ಯಾಚ್ ಮೈನವಿರೇಳಿಸುವಂತಿದೆ.
ಶರವೇಗದಲ್ಲಿ ನುಗ್ಗುತ್ತಿದ್ದ ಚೆಂಡನ್ನು ಒಂದೇ ಕೈನಲ್ಲಿ ಹಿಡಿದ ಗ್ಲೆನ್ ಫಿಲಿಪ್ಸ್ ಯಾರೂ ನಂಬಲಾಗದ ರೀತಿಯಲ್ಲಿ ಗ್ಲೆನ್ ಫಿಲಿಪ್ಸ್ ಕ್ಯಾಚ್ ಪಡೆದಿದ್ದು, ಈ ವಿಡಿಯೊ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಗ್ಲೆನ್ ಫಿಲಿಪ್ಸ್ ಕ್ಯಾಚ್ ಕಂಡು ಇವನೇನು ಮನುಷ್ಯನಾ ಅಥವಾ ಪಕ್ಷಿನಾ ಎಂದು ಕಾಮೆಂಟ್ ಮಾಡಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


