ಬೆಂಗಳೂರು: ಇಂದು (ಫೆಬ್ರವರಿ 20) ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಗ್ರೂಪ್ ಹಂತದ ಎರಡನೇ ಪಂದ್ಯ ನಡೆಯಲಿದ್ದು, ದುಬೈ ಕ್ರೀಡಾಂಗಣದಲ್ಲಿ ಭಾರತ ಹಾಗೂ ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಲಿವೆ.
ಪಾಕಿಸ್ತಾನ ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಆತಿಥ್ಯವನ್ನು ವಹಿಸಿಕೊಂಡಿದ್ದು, ಭಾರತ ಪಾಕ್ ಪ್ರವೇಶಿಸಲು ಒಪ್ಪದ ಕಾರಣ ಟೂರ್ನಿಯಲ್ಲಿನ ಭಾರತದ ಪಂದ್ಯಗಳು ದುಬೈನಲ್ಲಿ ನಡೆಯುತ್ತಿವೆ ಹಾಗೂ ಉಳಿದೆಲ್ಲಾ ಪಂದ್ಯಗಳು ಪಾಕ್ ನೆಲದಲ್ಲೇ ನಡೆಯಲಿವೆ.
ಇನ್ನು ಟೂರ್ನಿಯ ಆತಿಥ್ಯ ವಹಿಸಿಕೊಂಡಿರುವ ಪಾಕ್ ನಿನ್ನೆ ನಡೆದ ಉದ್ಘಾಟನಾ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 60 ರನ್ಗಳ ಸೋಲನ್ನು ಕಾಣುವ ಮೂಲಕ ಕೆಟ್ಟ ಆರಂಭ ಪಡೆದುಕೊಂಡಿದೆ. ಇದೊಂದು ಸೋಲು ಪಾಕ್ ಸೆಮಿಫೈನಲ್ ಪ್ರವೇಶದ ಪ್ರಶ್ನೆಯನ್ನೇ ಹುಟ್ಟುಹಾಕಿದೆ.
ಹೌದು, ಇಂದು ನಡೆಯಲಿರುವ ಪಂದ್ಯದಲ್ಲಿ ಭಾರತ ಗೆದ್ದರೆ ಪಾಕಿಸ್ತಾನ ಸೆಮಿಫೈನಲ್ ಪ್ರವೇಶಿಸಲು ತನ್ನ ಇನ್ನುಳಿದ ಎರಡೂ ಪಂದ್ಯಗಳನ್ನೂ ಗೆಲ್ಲಲೇಬೇಕಿದೆ. ಇದನ್ನು ಹೊರತುಪಡಿಸಿ ಪಾಕಿಸ್ತಾನಕ್ಕೆ ಸೆಮಿಫೈನಲ್ ಪ್ರವೇಶಿಸಲು ಇನ್ಯಾವುದೇ ದಾರಿ ಇಲ್ಲ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


