Friday, August 7, 2026
spot_img
More
    spot_img
    HomeTop StoryIPL 2025: ರೋಹಿತ್‌, ಸೂರ್ಯಕುಮಾರ್‌ ಅಬ್ಬರಕ್ಕೆ ನಲುಗಿದ ಸಿಎಸ್‌ಕೆ; ಮುಂಬೈಗೆ ಪ್ರಚಂಡ ಗೆಲುವು

    IPL 2025: ರೋಹಿತ್‌, ಸೂರ್ಯಕುಮಾರ್‌ ಅಬ್ಬರಕ್ಕೆ ನಲುಗಿದ ಸಿಎಸ್‌ಕೆ; ಮುಂಬೈಗೆ ಪ್ರಚಂಡ ಗೆಲುವು

    ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ಹಾಗೂ ಮುಂಬೈ ಇಂಡಿಯನ್ಸ್‌ ತಂಡಗಳ ನಡುವೆ ನಡೆದ ಐಪಿಎಲ್‌ನ 38ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ 9 ವಿಕೆಟ್‌ಗಳ ಪ್ರಚಂಡ ಗೆಲುವು ಕಂಡಿದೆ.

    Advertisement

    ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಚೆನ್ನೈ ಸೂಪರ್‌ ಕಿಂಗ್ಸ್‌ ಆಯುಷ್‌ ಮ್ಹಾತ್ರೆ, ರವೀಂದ್ರ ಜಡೇಜಾ ಹಾಗೂ ಶಿವಮ್‌ ದುಬೆ ಉತ್ತಮ ಬ್ಯಾಟಿಂಗ್‌ ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 176 ರನ್‌ ಕಲೆಹಾಕಿ ಮುಂಬೈ ಇಂಡಿಯನ್ಸ್‌ ತಂಡಕ್ಕೆ 177 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ಮುಂಬೈ ಇಂಡಿಯನ್ಸ್‌ ರೋಹಿತ್‌ ಶರ್ಮಾ ಹಾಗೂ ಸೂರ್ಯಕುಮಾರ್‌ ಯಾದವ್‌ ಅಬ್ಬರದ ನೆರವಿನಿಂದ ಕೇವಲ 15.4 ಓವರ್‌ಗಳಲ್ಲಿ 1 ವಿಕೆಟ್‌ ನಷ್ಟಕ್ಕೆ 177 ರನ್‌ ಬಾರಿಸಿದೆ.

    ಚೆನ್ನೈ ಸೂಪರ್‌ ಕಿಂಗ್ಸ್‌ ಇನ್ನಿಂಗ್ಸ್:‌ ತಂಡದ ಪರ ಶೇಕ್‌ ರಶೀದ್‌ 19 (20), ರಚಿನ್‌ ರವೀಂದ್ರ 5 (9), ಆಯುಷ್‌ ಮ್ಹಾತ್ರೆ 32 (15), ಶಿವಮ್‌ ದುಬೆ 50 (32), ಎಂಎಸ್‌ ಧೋನಿ 4 (6), ಜೇಮಿ ಓವರ್‌ಟನ್‌ ಅಜೇಯ 4 (3) ರನ್‌ ಹಾಗೂ ರವೀಂದ್ರ ಜಡೇಜಾ ಅಜೇಯ 53 (35) ರನ್‌ ಬಾರಿಸಿದರು.

    ಮುಂಬೈ ಇಂಡಿಯನ್ಸ್‌ ಪರ ಜಸ್‌ಪ್ರೀತ್‌ ಬುಮ್ರಾ 2 ವಿಕೆಟ್‌, ಮಿಚೆಲ್‌ ಸ್ಯಾಂಟ್ನರ್‌, ಅಶ್ವನಿ ಕುಮಾರ್‌ ಹಾಗೂ ದೀಪಕ್‌ ಚಹರ್‌ ತಲಾ ಒಂದೊಂದು ವಿಕೆಟ್‌ ಪಡೆದರು.

    ಮುಂಬೈ ಇಂಡಿಯನ್ಸ್‌ ಇನ್ನಿಂಗ್ಸ್:‌ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ರಿಕಲ್ಟನ್‌ 24 (19) ರನ್‌ ಗಳಿಸಿದರೆ, ಎರಡನೇ ವಿಕೆಟ್‌ಗೆ ಜತೆಯಾದ ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್‌ ಯಾದವ್‌ ಜೋಡಿ 114 ರನ್‌ಗಳ ಜತೆಯಾಟವಾಡುವ ಮೂಲಕ ಚೆನ್ನೈ ಸೂಪರ್‌ ಕಿಂಗ್ಸ್‌ ಬೌಲರ್‌ಗಳನ್ನು ಬೆಂಡೆತ್ತಿ ತಂಡವನ್ನು ಗೆಲುವಿನ ದಡ ಸೇರಿಸಿದರು. ರೋಹಿತ್‌ ಶರ್ಮಾ 45 ಎಸೆತಗಳಲ್ಲಿ 4 ಬೌಂಡರಿ ಹಾಗೂ 6 ಸಿಕ್ಸರ್‌ ಸಹಿತ ಅಜೇಯ 76 ರನ್‌ ಬಾರಿಸಿದರು ಹಾಗೂ ಸೂರ್ಯಕುಮಾರ್‌ ಯಾದವ್‌ 30 ಎಸೆತಗಳಲ್ಲಿ 6 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ ಅಜೇಯ 68 ರನ್‌ ಗಳಿಸಿದರು.

    ಚೆನ್ನೈ ಸೂಪರ್‌ ಕಿಂಗ್ಸ್‌ ಪರ ರವೀಂದ್ರ ಜಡೇಜಾ ಒಂದು ವಿಕೆಟ್‌ ಪಡೆದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading