Friday, August 7, 2026
spot_img
More
    spot_img
    HomeTop StoryIPL 2025: ಆಡಿದ ಮೊದಲ ಐಪಿಎಲ್ ಪಂದ್ಯದ ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸಿದ 14 ವರ್ಷದ...

    IPL 2025: ಆಡಿದ ಮೊದಲ ಐಪಿಎಲ್ ಪಂದ್ಯದ ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸಿದ 14 ವರ್ಷದ ಬಾಲಕ! ವಿಡಿಯೊ

    ಜೈಪುರ: ನಿನ್ನೆ ( ಏಪ್ರಿಲ್ 19 ) ಜೈಪುರದ ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆದ 36ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ 2 ರನ್‌ಗಳ ರೋಚಕ ಗೆಲುವನ್ನು ಕಂಡಿತು.

    Advertisement

    ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 180 ರನ್ ಕಲೆಹಾಕಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 181 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ರಾಜಸ್ಥಾನ್ ರಾಯಲ್ಸ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 178 ರನ್ ಕಲೆಹಾಕಿತು. ಈ ಮೂಲಕ ಲಕ್ನೋ ಸೂಪರ್ ಜೈಂಟ್ಸ್ 2 ರನ್‌ಗಳ ರೋಚಕ ಜಯವನ್ನು ಸಾಧಿಸಿತು.

    ಲಕ್ನೋ ಸೂಪರ್ ಜೈಂಟ್ಸ್ ಪರ ಅವೇಶ್ ಖಾನ್ ಅಮೋಘ ಪ್ರದರ್ಶನ ನೀಡುವ ಮೂಲಕ ತಂಡದ ಗೆಲುವಿಗೆ ಕಾರಣಕರ್ತರಾದರು. ರಾಜಸ್ಥಾನ್ ರಾಯಲ್ಸ್ ಈ ಮುಖ್ಯವಾದ ಪಂದ್ಯವನ್ನು ಸೋಲುವ ಮೂಲಕ ಪ್ಲೇಆಫ್ ರೇಸ್‌ನಿಂದ ಬಹುತೇಕ ಹೊರಬಿದ್ದಿದೆ ಎಂದು ಹೇಳಬಹುದು.

    ಹೀಗೆ ರಾಜಸ್ಥಾನ್ ರಾಯಲ್ಸ್ ಮುಖಭಂಗ ಅನುಭವಿಸಿದರೆ, ತಂಡದ ಪರ ಕಣಕ್ಕಿಳಿದು ತನ್ನ ಚೊಚ್ಚಲ ಐಪಿಎಲ್ ಪಂದ್ಯವನ್ನಾಡಿದ 14 ವರ್ಷ ವಯಸ್ಸಿನ ವೈಭವ್ ಸೂರ್ಯವಂಶಿ ಟ್ರೆಂಡಿಂಗ್ ಪಟ್ಟಿ ಸೇರಿದ್ದಾರೆ.

    ತನ್ನ ವಯಸ್ಸಿನಿಂದಲೇ ಎಲ್ಲರ ಗಮನ ಸೆಳೆದಿದ್ದ ಈ ಬಾಲಕ ಏನು ಮಾಡುತ್ತಾನೆ ನೋಡಬೇಕು ಎಂದು ಅನೇಕರು ಕಾತರರಾಗಿದ್ದರು. ಶಾರ್ದೂಲ್ ಠಾಕೂರ್ ಎಸೆದ ಇನ್ನಿಂಗ್ಸ್‌ನ ನಾಲ್ಕನೇ ಎಸೆತವನ್ನು ಎದುರಿಸಿದ ವೈಭವ್ ಸೂರ್ಯವಂಶಿ ತನ್ನ ಮೊದಲ ಐಪಿಎಲ್ ಎಸೆತದಲ್ಲೇ ಸಿಕ್ಸರ್ ಚಚ್ಚಿದರು. ಈ ಮೂಲಕ ತಾನು ಎದುರಿಸಿದ ಮೊದಲ ಎಸೆತದಲ್ಲೇ ಕುತೂಹಲದಿಂದ ಕಾಯತ್ತಿದ್ದವರಿಗೆ ತನ್ನ ಸಾಮರ್ಥ್ಯವನ್ನು ಅರ್ಥ ಮಾಡಿಸಿದರು.

    ಇನ್ನು ಒಟ್ಟು 20 ಎಸೆತಗಳನ್ನು ಎದುರಿಸಿದ ವೈಭವ್ ಸೂರ್ಯವಂಶಿ 2 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 34 ರನ್ ಚಚ್ಚಿ ಮನೆಮಾತಾಗಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading