ಬೆಂಗಳೂರು: ವಿದ್ಯಾರ್ಥಿಗಳು ಈಗಾಗಲೇ ಸಲ್ಲಿಸಿರುವ 2025ನೇ ಸಾಲಿನ ಸಿಇಟಿ ಅರ್ಜಿಯಲ್ಲಿ ಇನ್ನೂ ಏನಾದರೂ ತಪ್ಪುಗಳಿದ್ದು, ಅವುಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಇಚ್ಛಿಸುವವರಿಗೆ ಮೇ 2ರವರೆಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅವಕಾಶ ನೀಡಿದೆ.
ಮೀಸಲಾತಿ, ವಿಶೇಷ ಪ್ರವರ್ಗ, ಶೈಕ್ಷಣಿಕ ವಿವರಗಳು, ಕ್ಲಾಸ್ ಕೋಡ್ (ಎ, ಬಿ, ಸಿ, ಡಿ, ಇ, ಎಫ್, ಜಿ, ಎಚ್, ಐ, ಜೆ, ಕೆ, ಎಲ್, ಎಂ, ಎನ್, ಓ, ಝೆಡ್) ಇತ್ಯಾದಿ ತಪ್ಪಾಗಿದ್ದರೆ ಅವುಗಳನ್ನು ಸರಿ ಮಾಡಿಕೊಳ್ಳಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಅಭ್ಯರ್ಥಿಗಳ ಹೆಸರು, ತಂದೆ/ತಾಯಿ ಹೆಸರು, ಜನ ದಿನಾಂಕ, 10ನೇ ತರಗತಿ ಹಾಗೂ 12ನೇ ತರಗತಿಯ ನೋಂದಣಿ ಸಂಖ್ಯೆ ಇತ್ಯಾದಿ ಮಾಹಿತಿಗಳು ತಪ್ಪಾಗಿ ನಮೂದು ಮಾಡಿದ್ದಲ್ಲಿ ದಾಖಲೆ ಸಮೇತ ಪ್ರಾಧಿಕಾರಕ್ಕೆ ಬಂದು ಮನವಿ ಸಲ್ಲಿಸಬೇಕು ಎಂದು ಅವರು ಸೂಚಿಸಿದ್ದಾರೆ.
ಕೃಷಿಕರ ಕೋಟಾದಡಿ ಪ್ರಾಯೋಗಿಕ ಪರೀಕ್ಷೆ ಬರೆಯಲು ಸಿಇಟಿ ಅರ್ಜಿಯಲ್ಲಿ ನಮೂದಿಸದೇ ಇದ್ದಲ್ಲಿ ನಾಳೆಯೊಳಗೆ ತಿದ್ದುಪಡಿ ಮಾಡಿಕೊಳ್ಳಬೇಕು. ಹೊಸದಾಗಿ ಕೃಷಿಕರ ಕೋಟಾ ನಮೂದಿಸಿದವರು ಏ.21ರಂದು ತಮ ದಾಖಲೆಗಳನ್ನು ಕೆಇಎ ವೆಬ್‍ಸೈಟ್‍ನಲ್ಲಿ ಅಪ್‍ಲೋಡ್ ಮಾಡಬೇಕು ಎಂದು ಅವರು ತಿಳಿಸಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


