ಲೀಡ್ಸ್: ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ಇಂದು ( ಜೂನ್ 20 ) ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ( India vs England ) ತಂಡಗಳ ನಡುವಿನ ಪ್ರಥಮ ಪಂದ್ಯದ ಮೂಲಕ ಐದು ಪಂದ್ಯಗಳ ಟೆಸ್ಟ್ ಸರಣಿ ಆರಂಭಗೊಂಡಿವೆ.
ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆರಿಸಿಕೊಂಡು ಟೀಮ್ ಇಂಡಿಯಾವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿರುವ ಟೀಮ್ ಇಂಡಿಯಾ ಪರ ಆರಂಭಿಕನಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ 152 ಎಸೆತಗಳಲ್ಲಿ ಶತಕ ಪೂರೈಸಿ ಅಬ್ಬರಿಸಿದ್ದಾರೆ. 16 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 100 ರನ್ ಬಾರಿಸಿ ತಮ್ಮ ಆಟ ಮುಂದುವರಿಸಿದ್ದಾರೆ.
ಈ ಮೂಲಕ ಯಶಸ್ವಿ ಜೈಸ್ವಾಲ್ ಇಂಗ್ಲೆಂಡ್‌ನಲ್ಲಿ ಆಡಿದ ಮೊದಲ ಇನ್ನಿಂಗ್ಸ್‌ನಲ್ಲೇ ಶತಕ ಬಾರಿಸಿದ ಐದನೇ ಭಾರತೀಯ ಆಟಗಾರ ಎನಿಸಿಕೊಂಡರು.
ಅತ್ತ ಯಶಸ್ವಿ ಜೈಸ್ವಾಲ್ ಜೊತೆ ಮತ್ತೊಬ್ಬ ಆರಂಭಿಕ ಆಟಗಾರನಾಗಿ ಕಣಕ್ಕಿಳಿದ ಕೆಎಲ್ ರಾಹುಲ್ 78 ಎಸೆತಗಳಲ್ಲಿ 42 ರನ್ ಬಾರಿಸಿದರೆ, ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸಾಯಿ ಸುದರ್ಶನ್ ಡಕ್‌ಔಟ್ ಆದರು. ಈ ಮೂಲಕ ಭಾರತ 92 ರನ್‌ಗೆ ತನ್ನೆರಡು ವಿಕೆಟ್ ಕಳೆದುಕೊಂಡಿತು. ಬಳಿಕ ಮೂರನೇ ವಿಕೆಟ್‌ಗೆ ಜತೆಯಾದ ಜೈಸ್ವಾಲ್ ಹಾಗೂ ನಾಯಕ ಶುಭ್‌ಮನ್ ಗಿಲ್ ಅಮೂಲ್ಯ ಜತೆಯಾಟವನ್ನಾಡಿದ್ದಾರೆ. ಶುಭ್‌ಮನ್ ಗಿಲ್ ಅರ್ಧಶತಕ ಬಾರಿಸಿ ಆಟ ಮುಂದುವರಿಸಿದ್ದಾರೆ.

ಭಾರತ vs ಇಂಗ್ಲೆಂಡ್ ( india vs england ) ಆಡುವ ಬಳಗ
ಇಂಗ್ಲೆಂಡ್ ಆಡುವ ಬಳಗ: ಜಾಕ್ ಕ್ರಾಲಿ, ಬೆನ್ ಡಕೆಟ್, ಒಲಿವರ್ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೇಮಿ ಸ್ಮಿತ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಬ್ರೈಡನ್ ಕಾರ್ಸ್, ಜೋಶ್ ಟಂಗ್, ಶೋಯೆಬ್ ಬಶೀರ್
ಭಾರತ ಆಡುವ ಬಳಗ: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಶುಭ್ಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಕರುಣ್ ನಾಯರ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ
ಕೃಷಿ ಎಐ ಕನ್ನಡ ವೆಬ್‌ಸೈಟ್‌ಗೆ ಇಲ್ಲಿ ಕ್ಲಿಕ್ ಮಾಡಿ
Kichcha Sudeep : ಡಿಕೆಶಿ ನಟ್ಟು-ಬೋಲ್ಟು ಹೇಳಿಕೆಗೆ ಸುದೀಪ್ ಖಡಕ್ ತಿರುಗೇಟು!
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


