ಬೆಂಗಳೂರು: ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಿರುವುದು ಕೇಂದ್ರ ಸರ್ಕಾರದ ಆದೇಶ. ರಾಜ್ಯ ಸರ್ಕಾರ ಅದನ್ನು ಅನುಮೋದಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ( laxmi hebbalkar ) ಸಮರ್ಥಿಸಿಕೊಂಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಸದಾಕಾಲ ಸುಳ್ಳುಗಳನ್ನೇ ಹೇಳಿ ಜನರನ್ನು ದಾರಿ ತಪ್ಪಿಸುವುದರಲ್ಲಿ ನಿಸ್ಸೀಮರು. ಅಲ್ಪಸಂಖ್ಯಾತರಿಗೆ ಮನೆ ನೀಡುವಾಗ ಮೀಸಲಾತಿ ನೀಡಲು ಕೇಂದ್ರ ಸರ್ಕಾರವು ಕಾನೂನು ರೂಪಿಸಿದೆ. ಅದನ್ನು ನಾವು ಜಾರಿ ಮಾಡುತ್ತಿದ್ದೇವೆ. ಆದರೆ ಈ ವೇಳೆ ಕಾಂಗ್ರೆಸ್ ಸರ್ಕಾರ ತುಷ್ಟೀಕರಣಕ್ಕಾಗಿ ಮುಸ್ಲಿಂ ಓಲೈಕೆಯಲ್ಲಿ ತೊಡಗಿದೆ ಎಂದು ಬಿಜೆಪಿ ಆರೋಪಿಸಿ ಜನರ ದಾರಿ ತಪ್ಪಿಸುತ್ತಿದೆ ಎಂದು ಕಿಡಿಕಾರಿದರು.
ಬಿಜೆಪಿ ಸದಾಕಾಲ ಜನರ ಭಾವನೆಗಳ ಜೊತೆ ಆಟವಾಡುತ್ತಿದೆ. ಅವರಿಗೆ ಮಾತನಾಡಲು ಬೇರೆ ವಿಚಾರಗಳಿಲ್ಲ. ಅದಕ್ಕಾಗಿ ಪ್ರತಿ ವಿಚಾರದಲ್ಲೂ ಜನರ ದಿಕ್ಕು ತಪ್ಪಿಸಲು ಹುಚ್ಚಾಟವಾಡುತ್ತದೆ ಎಂದು ವಾಗ್ದಾಳಿ ನಡೆಸಿದರು.
ಸೂಲಿಬೆಲೆ ವಿರುದ್ಧ ಲಕ್ಷ್ಮಿ ಹೆಬ್ಬಾಳ್ಕರ್ ( laxmi hebbalkar ) ಕಿಡಿ
ಇನ್ನು ಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಚಕ್ರವರ್ತಿ. ಬಾಯಿ ಬಿಟ್ಟರೆ ರಾಮಾಯಣ, ಭಗವದ್ಗೀತೆ, ಮಹಾಭಾರತ ಎಂದು ಹೇಳುತ್ತಾರೆ. ಅವರು ಯಾವ ಪ್ರಮಾಣದಲ್ಲಿ ಸುಳ್ಳು ಹೇಳುತ್ತಾರೆ ಎಂದು ಇಡೀ ಕರ್ನಾಟಕದ ಜನರಿಗೆ ಗೊತ್ತಿದೆ. ಸುಳ್ಳನ್ನು ಸತ್ಯ ಮಾಡುವಲ್ಲಿ ನಿಪುಣರು ಎಂದು ಕಿಡಿಕಾರಿದರು.

ಚಕ್ರವರ್ತಿ ಸೂಲಿಬೆಲೆಯಿಂದ ನಾವು ಪಾಠ ಕಲಿಯಬೇಕಿಲ್ಲ. ಆತನ ಪ್ರವಾಸ ಉಡುಪಿ ಜಿಲ್ಲೆಯಲ್ಲಿ 3 ದಿನಗಳ ಕಾಲ ಇತ್ತು. ಇದು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಯವರ ಗಮನಕ್ಕೆ ಬಂದಾಗ ಕೋಮು ಸೌಹಾರ್ದತೆಗೆ ಧಕ್ಕೆ ತರದಂತೆ ನಿರ್ಬಂಧ ಹೇರಲು ಅಗತ್ಯ ಕ್ರಮ ಕೈಗೊಂಡಿದ್ದಾರೆ. ಉಡುಪಿ ಜಿಲ್ಲೆಯ ಜನ ಶಾಂತಿಪ್ರಿಯರು. ಇಲ್ಲಿ ಸೌಹಾರ್ದತೆ ಕಾಣುವ ಪ್ರಯತ್ನಕ್ಕೆ ಸರ್ಕಾರ ಕ್ರಮ ಕೈಗೊಳ್ಳಲಿದೆ. ಉಳಿದಂತೆ ಯಾರ ಸ್ವಾತಂತ್ರ್ಯಕ್ಕೂ ನಾವು ಅಡ್ಡಿಪಡಿಸುವುದಿಲ್ಲ ಎಂದರು.
ಇನ್ನು ಬಿಜೆಪಿಯವರು ತಾವು ಕೋಮುವಾದ ಮಾಡುವುದಿಲ್ಲ ಎಂದು ಹೇಳುತ್ತಲೇ ಪ್ರಚೋದನಾಕಾರಿ ಭಾಷಣ ಮಾಡುತ್ತಾರೆ. ಮತ್ತೊಂದು ಕಡೆ ಕೋಮುನಿಗ್ರಹ ದಳಕ್ಕೆ ಅಡ್ಡಿಪಡಿಸುತ್ತಿದ್ದಾರೆ. ತಪ್ಪೇ ಮಾಡದಿದ್ದ ಮೇಲೆ ನಿಗ್ರಹ ದಳಕ್ಕೆ ಭಯ ಬೀಳುವುದೇಕೆ? ಎಂದು ಪ್ರಶ್ನೆ ಮಾಡಿದರು.
ಕೃಷಿ ಎಐ ವೆಬ್‌ಸೈಟ್‌ಗೆ ಇಲ್ಲಿ ಕ್ಲಿಕ್ ಮಾಡಿ
Nanda Kishore: ನಿರ್ದೇಶಕ ನಂದ ಕಿಶೋರ್ ವಿರುದ್ಧ ಗಂಭೀರ ಆರೋಪ! ಕಿಚ್ಚ ಸುದೀಪ್ ಹೆಸರು ಬಳಸಿ ವಂಚನೆ ಮಾಡಿದ್ರಾ?
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


