ಬೆಂಗಳೂರು: ಲೋನ್ ಕಟ್ಟಲು ನಾಲ್ಕು ದಿನ ತಡವಾಗಿದ್ದಕ್ಕೆ ಸಾಲ ಪಡೆದಿದ್ದ ದಂಪತಿಯ ಮಗುವನ್ನು ಮೈಕ್ರೋ ಫೈನಾನ್ಸ್ ( microfinance ) ಸಿಬ್ಬಂದಿ ಕರೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಮೈಕ್ರೋ ಫೈನಾನ್ಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.
ಲೋನ್ ಕಟ್ಟಲು ತಡವಾಗಿದ್ದಕ್ಕೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಮಗುವನ್ನು ಕರೆದೊಯ್ದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದೆಲ್ಲೆಡೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಮೈಕ್ರೋ ಫೈನಾನ್ಸ್ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂಬ ಆಗ್ರಹ ಕೇಳಿಬರುತ್ತಿದೆ.
ಈ ಬೆನ್ನಲ್ಲೇ ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಮೈಕ್ರೋ ಫೈನಾನ್ಸ್‌ಗಳಿಗೆ ಕಡಿವಾಣ ಹಾಕಲು ಈಗಾಗಲೇ ಕಠಿಣ ಕಾನೂನು ತಂದಿದ್ದೇವೆ. ಆದರೂ ಕೆಲವೆಡೆ ಇಂತಹ ದುರ್ವರ್ತನೆ ನಡೆಯುತ್ತಿದೆ. ಇದು ಸರಿಯಲ್ಲ. ಮಗುವನ್ನು ಕರೆದೊಯ್ದವರು ಕಠಿಣ ಹೃದಯಿಗಳು. ಮಾನವೀಯತೆ ಇಲ್ಲದವರು ಮಗುವನ್ನು ಅಪಹರಣ ಮಾಡಿದ್ದಾರೆ. ಈ ಬಗ್ಗೆ ಇಂದು ಮೈಸೂರು ಪೊಲೀಸ್ ಕಮಿಷನರ್ ಅಥವಾ ಐಜಿ ಬಳಿ ಮಾತನಾಡುತ್ತೇನೆ. ಇದಕ್ಕೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಪೊಲೀಸರಿಗೆ ಸೂಚನೆ ನೀಡುತ್ತೇನೆ ಎಂದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


