ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ದಲಿತ ಸಮುದಾಯಕ್ಕೆ ಒಳ ಮೀಸಲಾತಿ ಬಹುತೇಕ ಅಂತಿಮವಾಗಿದೆ. ಎಲ್ಲಾ ಪರಿಶಿಷ್ಟ ಜಾತಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ವೈಜ್ಞಾನಿಕವಾಗಿ ಒಳ ಮೀಸಲಾತಿಯನ್ನು ಜಾರಿಗೊಳಿಸುವ ತೀರ್ಮಾನವಾಗಿದ್ದು ಇಂದು ಆಗಸ್ಟ್ 20ರಂದು ಸದನದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಲಿದ್ದಾರೆ.
ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯಲ್ಲಿ 5 ವಿಂಗಡಣೆ ಮಾಡಲಾಗಿತ್ತು. ಆದರೆ ಸರ್ಕಾರ ಇದನ್ನು 3 ಗುಂಪುಗಳಾಗಿ ವರ್ಗೀಕರಣ ಮಾಡಿದೆ. ಅದರಂತೆ 18 ಜಾತಿಗಳಿರುವ ಎಡಗೈ ಸಮುದಾಯಕ್ಕೆ ಶೇಕಡ 6ರಷ್ಟು ಮೀಸಲಾತಿ ಹಾಗೂ 20 ಜಾತಿಗಳಿರುವ ಬಲಗೈ ಸಮುದಾಯಕ್ಕೆ ಶೇಕಡ 6ರಷ್ಟು ಮೀಸಲಾತಿ. ಇನ್ನು 63 ಜಾತಿಗಳಿರುವ ಇತರ ಸಮುದಾಯಕ್ಕೆ ಶೇಕಡ 5ರಷ್ಟು ಮೀಸಲಾತಿ ನೀಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಬಹುತೇಕ ಅಂತಿಮವಾಗಿದೆ.
ದಲಿತ ಎಡಗೈ ಜಾತಿಗಳಿಗೆ 6ರಷ್ಟು ಮೀಸಲಾತಿ
ಭಾಂಬಿ, ಅಸದರು, ಅಸೋಡಿ, ಚಮಡಿಯಾ, ಚಮರ್, ಚಂಬರ, ಚಮಗಾರ, ಹರಳಯ್ಯ, ಹರಳಿ, ಖಾಲ್ಪ, ಮಚಿಗಾರ, ಮೋಚಿಗಾರ, ಮಾದರ, ಮಾದಿಗ, ಮೋಚಿ, ಮುಚ್ಚಿ, ತೆಲುಗು ಮೋಚಿ, ಕಾಮತಿ ಮೋಚಿ, ರಾಣಿಗಾರ್, ರೋಹಿದಾಸ್, ರೋಹಿತ್, ಸಮ್ಗರ್, ಹಕ್ಕಳಯ್ಯ, ಧೋರ್ಕ, ಹಕ್ಕಳಯ್ಯ, ಧೋರ್ಕಾ ಹಲಸ್ವರ, ಹಸ್ಲ, ಕಡಯ್ಯನ್, ಕೆಪ್ಮರಿಸ್, ಕೊಲುಪುಲ್ವಂಡಿಯು, ಕುಟುಂಬನ್, ಮಾದಿಗ, ಮಾವಿಲನ್, ಮೊಗೇರ್, ಪಂಚಮ, ಪನ್ನಿಯಾಂಡಿ, ಪರಯ್ಯನ್, ಪರಯ, ಸಮಗಾರ, ಸಾಂಬನ್
ದಲಿತ ಬಲಗೈ ಜಾತಿಗಳಿಗೆ 6% ಮೀಸಲಾತಿ
ಅಣಮುಕ್, ಅರೆ ಮಾಳ, ಅರವ ಮಾಳ, ಬಲಗೈ, ಛಲವಾದಿ, ಚಲವಾದಿ, ಚನ್ನಯ್ಯ, ಪಲ್ಲನ್, ಹೊಲಯ, ಹೊಲೆಯ, ಹೊಲೆಯ, ಮಹ್ಯವಂಶಿ, ಧೇಡ್, ವಂಕರ್, ಮಾರು ವಂಕರ್, ಮಾಳ, ಮಲ ಹಣ್ಣಾಯಿ, ಮಾಳ ಜಂಗಮ, ಮಾಳ ಮಾಸ್ತಿ, ಮಲ ಮಾರಾಟ, ನೆಟ್ಕಣಿ, ಮಹಾರ್, ತರಲ್, ಧೇಳು, ದೇಗುಲ ಮೇಗುಂದ,ಆದಿ ಆಂಧ್ರ, ಆದಿ ದ್ರಾವಿಡ, ಆದಿ ಕರ್ನಾಟಕ.
ಇತರೆ 5% ಮೀಸಲಾತಿ ಒಳಪಡುವ ಜಾತಿಗಳು
ಬಕುಡ; ಬಂಜಾರ, ಲಂಬಾಣಿ, ಲಂಬಾಡ, ಲಂಬಾಡಿ, ಲಮಾಣಿ, ಸುಗಾಲಿ, ಸುಕಾಲಿ; ಭೋವಿ, ಓಡ್, ಒಡ್ಡೆ, ವಡ್ಡರ, ವಡ್ಡರ, ವಡ್ಡರ, ವಡ್ಡರ, ಕಲ್ಲುವಡ್ಡರ, ಬೋವಿ (ಬೆಸ್ತರಲ್ಲದ), ಮಣ್ಣುವಡ್ಡರ; ಎಲ್ಲಮಾಳ್ವಾರ್, ಯೆಲ್ಲಮ್ಮಲವಾಂಡ್ಲು; ಕೊರಚ, ಕೊರಚಾರ್; ಕೊರಮ, ಕೊರವ, ಕೊರವರ; ಲಿಂಗಾಡರ್; ಮುಕ್ರಿ; ಮುಂಡಾಲ; ಪಂಬದ; ಸಪಾರಿ; ತಿರ್ಗರ್, ತಿರ್ಬಂದ.
ಒಳಮೀಸಲಾತಿ ಸಂಬಂಧ ಇಂದು ಸಚಿವ ಸಂಪುಟ ಕೈಗೊಂಡ ನಿರ್ಧಾರಕ್ಕೆ ದಲಿತ ಬಲಗೈ ಹಾಗೂ ದಲಿತ ಎಡಗೈ ನಾಯಕರು ಒಪ್ಪಿಕೊಂಡಿದ್ದು, ಸಿದ್ದರಾಮಯ್ಯನವರ ನಿರ್ಧಾರವನ್ನು ಸ್ವಾಗತ ಮಾಡಿದ್ದಾರೆ. ಆದ್ರೆ, ಇತರೆ ಸಮುದಾಯ ಜೊತೆ ಅಲೆಮಾರಿಗಳನ್ನ ಸೇರಿಸಿದ್ದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಇತರೆ ಸಮುದಾಯ ಜೊತೆ ಸೇರಿಸಿ ನಮ್ಮನ್ನ ಬೀದಿಗೆ ತಂದಿದ್ದಾರೆ ಎಂದು ಅಲೆಮಾರಿ ಸಮುದಾಯ ಆಕ್ರೋಶಗೊಂಡಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


