ದೂರುದಾರನ ಹೇಳಿಕೆ ಕುರಿತು: SIT ಸ್ಪಷ್ಟನೆ
ಧರ್ಮಸ್ಥಳ ಪ್ರಕರಣದಲ್ಲಿ ‘ಮಾಸ್ಕ್‌ಮ್ಯಾನ್’ ಎಂಬ ರಹಸ್ಯ ವ್ಯಕ್ತಿ ಯಾರು ಎಂಬುದರ ಬಗ್ಗೆ ಹಲವು ಊಹಾಪೋಹಗಳು ನಡೆಯುತ್ತಿದ್ದವು. ಈ ಕುರಿತಂತೆ ತನಿಖೆ ನಡೆಸುತ್ತಿರುವ SIT ಈಗ ಸ್ಪಷ್ಟನೆ ನೀಡಿದೆ.
2014ರ ನಂತರ ನಾನು ತಮಿಳುನಾಡಿನಲ್ಲಿ ವಾಸಿಸುತ್ತಿದ್ದೆ. 2023ರಲ್ಲಿ ಒಂದು ಗುಂಪು ನನ್ನನ್ನು ಸಂಪರ್ಕಿಸಿ ಧರ್ಮಸ್ಥಳದಲ್ಲಿ ಪತ್ತೆಯಾದ ಶವಗಳ ಬಗ್ಗೆ ಕೇಳಿತು. ಆ ಸಮಯದಲ್ಲಿ ತಪ್ಪು ಹೇಳಿಕೆ ನೀಡುವಂತೆ ಒತ್ತಡ ಹಾಕಲಾಯಿತು ಎಂದು ದೂರುದಾರರು ನೀಡಿದ ಹೇಳಿಕೆಯ ಕುರಿತು ಮಾಧ್ಯಮಗಳಲ್ಲಿ ಸುದ್ದಿ ಹರಡಿತ್ತು.
ಧರ್ಮಸ್ಥಳದಲ್ಲಿ ಶವ ಹೂತಿರುವ ಬಗ್ಗೆ ನನ್ನನ್ನು ಕೇಳಿತ್ತು. ನಾನು ಕಾನೂನು ಪ್ರಕಾರವೇ ಶವಗಳನ್ನು ಹೂತಿರುವುದಾಗಿ ಹೇಳಿದ್ದೇ. ಆದರೆ ಈ ಗುಂಪು ತಪ್ಪು ಹೇಳಿಕೆ ನೀಡುವಂತೆ ಒತ್ತಡ ಹಾಕಿತ್ತು ಎಂದು ಸಾಕ್ಷಿ ಹಾಗೂ ದೂರುದಾರ ಹೇಳಿಕೆ ನೀಡಿದ್ದಾನೆಂಬ ಸುದ್ದಿ ಸಾಕಷ್ಟು ಚರ್ಚೆಗಳಿಗೆ ಗ್ರಾಸವಾಗಿದೆ.
SIT ಅಧಿಕಾರಿಗಳ ಪ್ರಕಾರ, ದೂರುದಾರ ತಮ್ಮ ಹೇಳಿಕೆಯಲ್ಲಿ ತಮಿಳುನಾಡಿನಲ್ಲಿ ಇದ್ದಾಗ ಗುಂಪೊಂದು ಅವರನ್ನು ಸಂಪರ್ಕಿಸಿದೆ ಎಂಬ ಮಾಹಿತಿ ನೀಡಿಲ್ಲ. SIT ಸ್ಪಷ್ಟನೆ ನೀಡಿದ್ದು, ದೂರುದಾರನ ನಿಜವಾದ ಹೇಳಿಕೆಯಲ್ಲಿ ತಮಿಳುನಾಡಿನಲ್ಲಿ ಇದ್ದ ವೇಳೆ ಯಾವುದೇ ಗುಂಪು ಸಂಪರ್ಕಿಸಿದೆ ಎಂದು ಉಲ್ಲೇಖವಾಗಿಲ್ಲ ಎಂದು ತಿಳಿಸಿದೆ. ಇದರಿಂದ ‘ಮಾಸ್ಕ್‌ಮ್ಯಾನ್’ ಹಿಂದಿರುವವರು ಯಾರು ಎಂಬ ಬಗ್ಗೆ ಇನ್ನೂ ಸ್ಪಷ್ಟತೆ ಬರದೇ ಉಳಿದಿದೆ.
ದೂರುದಾರನ ಅಂತಹ ಯಾವುದೇ ಹೇಳಿಕೆ ನಮಗೆ ಸಿಕ್ಕಿಲ್ಲ. ಪ್ರಸ್ತುತ, ನಾವು ಅವರನ್ನು ದೂರುದಾರ ಎಂದು ಪರಿಗಣಿಸುತ್ತೇವೆ. ಸೆಕ್ಷನ್ 164 ರ ಅಡಿಯಲ್ಲಿ ಅವರು ನೀಡಿರುವ ಹೇಳಿಕೆಯನ್ನು ದಾಖಲಿಸಿಕೊಳ್ಳುವುದನ್ನು ಮುಂದುವರೆಸುತ್ತೇವೆಂದು ಎಸ್‌ಐಟಿ ಅಧಿಕಾರಿಯೊಬ್ಬರು ಹೇಳಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


