Tuesday, March 24, 2026
spot_img
More
    spot_img
    HomeLatest newsಪುನರ್ವಸತಿ ಕಾರ್ಯಕರ್ತರಿಗೆ ಗುಡ್‌ನ್ಯೂಸ್;‌ ಹೆಚ್ಚಿನ ಗೌರವಧನ ಘೋಷಿಸಿದ ಲಕ್ಷ್ಮಿ ಹೆಬ್ಬಾಳ್ಕರ್‌

    ಪುನರ್ವಸತಿ ಕಾರ್ಯಕರ್ತರಿಗೆ ಗುಡ್‌ನ್ಯೂಸ್;‌ ಹೆಚ್ಚಿನ ಗೌರವಧನ ಘೋಷಿಸಿದ ಲಕ್ಷ್ಮಿ ಹೆಬ್ಬಾಳ್ಕರ್‌

    ಬೆಂಗಳೂರು: ಗ್ರಾಮೀಣ ಪುನರ್ವಸತಿ ಯೋಜನೆಯಡಿ ಪುನರ್ವಸತಿ ಕಾರ್ಯಕರ್ತರನ್ನು ನಿಯಮಾನುಸಾರ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಂಡಿದ್ದು, ಅವರನ್ನು ಖಾಯಂಗೊಳಿಸಲು ನಿಯಮಗಳಲ್ಲಿ ಅವಕಾಶವಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.

    ಈ ಬಗ್ಗೆ ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 9 ಸಾವಿರ ರೂಪಾಯಿಯಿಂದ 10 ಸಾವಿರ ರೂಪಾಯಿಗಳಿಗೆ ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 15 ಸಾವಿರ ರೂಪಾಯಿಯಿಂದ 16 ಸಾವಿರ ರೂಪಾಯಿಗೆ ಹೆಚ್ಚಿಸಲಾಗಿದೆ ಎಂದರು.

    ಪ್ರಸ್ತುತ 5601 ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, 450 ನಗರ ಪುನರ್ವಸತಿ ಕಾರ್ಯಕರ್ತರು ಹಾಗೂ 172 ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

    ಗ್ರಾಮೀಣ ಪುನರ್ವಸತಿ ಯೋಜನೆಯಡಿಯಲ್ಲಿ ಗೌರವಧನ ಆಧರದ ಮೇರೆಗೆ ಕರ್ತವ್ಯ ನಿರ್ವಹಣೆ ಮಾಡುತ್ತಿರುವ ವಿಕಲಚೇತನ ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರು ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದು ಮಾಹಿತಿ ನೀಡಿದರು.

    ಇನ್ನು ಕಾರ್ಯಕರ್ತರನ್ನು ಕಾರ್ಮಿಕ ಇಲಾಖೆಯ ಕನಿಷ್ಠ ವೇತನಕ್ಕೊಳಪಡಿಸಲು ಪ್ರಸ್ತಾವನೆ ಸಲ್ಲಿಸಲಾಗಿದ್ದು, ಆರ್ಥಿಕ ಇಲಾಖೆಯ ಅನುಮೋದನೆಯಂತೆ ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 9 ಸಾವಿರ ರೂಪಾಯಿಯಿಂದ 10 ಸಾವಿರ ರೂಪಾಯಿಗಳಿಗೆ ಹಾಗೂ ವಿವಿಧೊದ್ದೇಶ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 15 ಸಾವಿರ ರೂಪಾಯಿಯಿಂದ 16 ಸಾವಿರ ರೂಪಾಯಿಗೆ ಹೆಚ್ಚಿಸಲಾಗಿದೆ ಎಂದು ಉತ್ತರಿಸಿದರು.

    ನಟ ದರ್ಶನ್ ಮತ್ತು ಗ್ಯಾಂಗ್‌ಗೆ 7ನೇ ದಿನದ ಜೈಲುವಾಸ: ಹೇಗಿದೆ ಪರಪ್ಪನ ಅಗ್ರಹಾರದ ದಿನಚರಿ?

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಬ್ರೇಕಿಂಗ್! ರೂಪಾಯಿ ಕುಸಿತ—ಮೊದಲ ಬಾರಿಗೆ ₹93 ದಾಟಿದ ಡಾಲರ್, ಆರ್ಥಿಕತೆಗೆ ಶಾಕ್!

    “ರೂಪಾಯಿ ಕುಸಿತ 93” ಇದೀಗ ದೇಶದ ಆರ್ಥಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪಶ್ಚಿಮ ಏಷ್ಯಾದ ಉದ್ವಿಗ್ನತೆ ಹೆಚ್ಚಾಗುತ್ತಿರುವ ಹಿನ್ನೆಲೆ, ಭಾರತೀಯ ರೂಪಾಯಿ ಇತಿಹಾಸದಲ್ಲೇ ಮೊದಲ ಬಾರಿಗೆ ಡಾಲರ್ ಎದುರು ₹93 ಗಡಿ...

    ತೆಲಂಗಾಣ ಬಜೆಟ್ 2026: ಆರೋಗ್ಯ ಕ್ಷೇತ್ರಕ್ಕೆ ಭಾರೀ ಉತ್ತೇಜನ—₹1286 ಕೋಟಿ ಹೆಚ್ಚಳ!

    “ತೆಲಂಗಾಣ ಆರೋಗ್ಯ ಬಜೆಟ್ 2026” ಈಗ ರಾಜ್ಯ ರಾಜಕೀಯ ಹಾಗೂ ಸಾರ್ವಜನಿಕರಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಆರೋಗ್ಯ ಸೇವೆಗಳನ್ನು ಬಲಪಡಿಸಲು ಸರ್ಕಾರ ದೊಡ್ಡ ಮಟ್ಟದ ಹೂಡಿಕೆ ಮಾಡಿದ್ದು, ಹೆಚ್ಚುವರಿ ₹1286 ಕೋಟಿ ಅನುದಾನ...

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading