ಕರ್ನಾಟಕದಲ್ಲಿ ಇಂದು ಮಳೆ ಅಬ್ಬರ ಮುಂದುವರಿಯಲಿದ್ದು, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇನ್ನು ಐದು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಧಾರವಾಡ, ಹಾವೇರಿ, ಉತ್ತರ ಕನ್ನಡ, ಬೆಳಗಾವಿ, ಯಾದಗಿರಿ, ಬೀದರ್, ಬಾಗಲಕೋಟೆ ಜಿಲ್ಲೆಗಳಲ್ಲಿ ಶಾಲೆ ಕಾಲೇಜಿಗೆ ಇಂದು ರಜೆ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಗದಗ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಿಗೆ ಎರಡು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಗಾಳಿಯ ವೇಗ ಗಂಟೆಗೆ 40-50ಕಿ.ಮೀ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಸಹ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವು ದಿನಗಳಿಂದ ನಗರದಲ್ಲಿ ಮೋಡ ಕವಿದ ವಾತಾವರಣ ಇದ್ದು, ಆಗಾಗ ತುಂತುರು ಮಳೆಯಾಗುತ್ತಿದೆ.
,ಬೆಂಗಳೂರಿನಲ್ಲಿ ಆಪಲ್‌ನ ಬೃಹತ್ ಯೋಜನೆ: 1010 ಕೋಟಿ ರೂ. ವೆಚ್ಚದಲ್ಲಿ ಹೊಸ ಕಚೇರಿ!
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


