ಚಿತ್ರದುರ್ಗ ;ರಾಜ್ಯದಲ್ಲಿ ಮತ್ತೊಂದು ಘೋರ ಕೃತ್ಯ ಬೆಳಕಿಗೆ ಬಂದಿದ್ದು, ಚಿತ್ರದುರ್ಗದಲ್ಲಿ ಪದವಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಕೋವೇರಹಟ್ಟಿ ಮೂಲದ 19 ವರ್ಷದ ವಿದ್ಯಾರ್ಥಿನಿ ವರ್ಷಿತಾ ಮೃತದೇಹವು ನಿನ್ನೆ ರಾಷ್ಟ್ರೀಯ ಹೆದ್ದಾರಿ ಬಳಿ ಪತ್ತೆಯಾಗಿದೆ.
ವರ್ಷಿತಾ ಅವರು ಚಿತ್ರದುರ್ಗ ನಗರದ ಬಾಲಕಿಯರ ವಸತಿ ಶಾಲೆಯಲ್ಲಿ ಓದುತ್ತಿದ್ದರು. ಅತ್ಯಾಚಾರ ಮತ್ತು ಕೊಲೆಯ ನಂತರ ಮೃತದೇಹಕ್ಕೆ ಬೆಂಕಿ ಹಚ್ಚಲಾಗಿದೆ ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಈ ಪೈಶಾಚಿಕ ಕೃತ್ಯವು ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಬೆಂಗಳೂರಿನ ರಿಯಲ್ ಎಸ್ಟೇಟ್‌ನಲ್ಲಿ ಹೊಸ ಮೈಲಿಗಲ್ಲು: ವಿಶ್ವದಲ್ಲೇ 4ನೇ ದುಬಾರಿ ನಗರ!
ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


