ಬೆಂಗಳೂರು ರಿಯಲ್ ಎಸ್ಟೇಟ್ ಮಾರುಕಟ್ಟೆಯಲ್ಲಿ ಹೊಸ ಮೈಲಿಗಲ್ಲನ್ನು ಸಾಧಿಸಿದೆ. ನಗರದ ಪ್ರೀಮಿಯಂ ವಸತಿ ಆಸ್ತಿಗಳ ಬೆಲೆ ಏರಿಕೆಯು ವಿಶ್ವದ ಪ್ರಮುಖ ನಗರಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ನೈಟ್ ಫ್ರಾಂಕ್ ರಿಯಲ್ ಎಸ್ಟೇಟ್ ಸಲಹಾ ಸಂಸ್ಥೆಯ ‘ಪ್ರೈಮ್ ಗ್ಲೋಬಲ್ ಸಿಟೀಸ್ ಇಂಡೆಕ್ಸ್ 2025’ ವರದಿಯ ಪ್ರಕಾರ, ವಿಶ್ವದ 46 ನಗರಗಳ ಪೈಕಿ ಬೆಂಗಳೂರು 4ನೇ ಸ್ಥಾನದಲ್ಲಿದೆ.
ಕಳೆದ ಒಂದು ವರ್ಷದಲ್ಲಿ ಬೆಂಗಳೂರಿನಲ್ಲಿ ಐಷಾರಾಮಿ ಮನೆಗಳ ಬೆಲೆ ಶೇ. 10.2 ರಷ್ಟು ಹೆಚ್ಚಾಗಿದೆ ಎಂದು ವರದಿ ತಿಳಿಸಿದೆ. ಈ ಪಟ್ಟಿಯಲ್ಲಿ ಭಾರತದ ಇತರ ನಗರಗಳಾದ ಮುಂಬೈ ಮತ್ತು ದೆಹಲಿ ಬೆಂಗಳೂರಿನ ಹಿಂದಿವೆ. ಮುಂಬೈ 6ನೇ ಸ್ಥಾನದಲ್ಲಿದ್ದರೆ, ದೆಹಲಿ 15ನೇ ಸ್ಥಾನದಲ್ಲಿದೆ.
ಬೆಂಗಳೂರು ಮತ್ತು ಅದರ ಸುತ್ತಮುತ್ತ ನಡೆಯುತ್ತಿರುವ ಅಭಿವೃದ್ಧಿ ಯೋಜನೆಗಳು ಭೂಮಿಯ ಬೆಲೆ ಏರಿಕೆಗೆ ಪ್ರಮುಖ ಕಾರಣಗಳಾಗಿವೆ. ಇದರೊಂದಿಗೆ ಐಷಾರಾಮಿ ಮನೆಗಳ ಬೆಲೆಯೂ ಹೆಚ್ಚಾಗುತ್ತಿರುವುದರಿಂದ, ಮುಂದಿನ ದಿನಗಳಲ್ಲಿ ಬೆಂಗಳೂರು ಮತ್ತಷ್ಟು ದುಬಾರಿಯಾಗುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಜಾಗತಿಕ ರ‍್ಯಾಂಕಿಂಗ್‌ನಲ್ಲಿ ಬೆಂಗಳೂರಿಗೆ ಉನ್ನತ ಸ್ಥಾನ
ಸಿಯೋಲ್ (ದಕ್ಷಿಣ ಕೊರಿಯಾ): ಶೇ. 25.2
ಟೋಕಿಯೊ (ಜಪಾನ್): ಶೇ. 16.3
ದುಬೈ (ಯುಎಇ): ಶೇ. 15.8
ಬೆಂಗಳೂರು (ಭಾರತ): ಶೇ. 10.2
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯುತ್ತಿರುವ ಅಭಿವೃದ್ಧಿ ಯೋಜನೆಗಳು ಮತ್ತು ಹೆಚ್ಚಿನ ಬೇಡಿಕೆಯಿಂದಾಗಿ ಭೂಮಿ ಹಾಗೂ ಮನೆಗಳ ಬೆಲೆ ಗಣನೀಯವಾಗಿ ಏರುತ್ತಿವೆ. ಈ ಪ್ರವೃತ್ತಿಯು ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಾಗಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಆಪಲ್‌ನ ಬೃಹತ್ ಯೋಜನೆ: 1010 ಕೋಟಿ ರೂ. ವೆಚ್ಚದಲ್ಲಿ ಹೊಸ ಕಚೇರಿ!
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


