ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಜೆಡಿಎಸ್ ಪ್ರಾಬಲ್ಯವಿರುವ ಹಾಸನ ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಶಕ್ತಿ ಪ್ರದರ್ಶನ ನಡೆಸಲು ಮುಂದಾಗಿದ್ದಾರೆ.
ಮುಂದಿನ ತಿಂಗಳ ಡಿಸೆಂಬರ್.5ರಂದು ಹಾಸನ ಜಿಲ್ಲೆಯಲ್ಲಿ ಮೆಗಾ ರ್ಯಾಲಿ ನಡೆಸಲು ಕಾಂಗ್ರೆಸ್ ಪಕ್ಷ ಎಲ್ಲಾ ತಯಾರಿ ಮಾಡಿಕೊಂಡಿದ್ದು, ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಹಿರಿಯ ಸಚಿವರೊಂದಿಗೆ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸಹಕಾರ ಸಚಿವ ಕೆ.ಎನ್.ರಾಜಣ್ಣ ನೇತೃತ್ವದಲ್ಲಿ ಹಾಸನದಲ್ಲಿ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಜೊತೆಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರಿಗೂ ಕೂಡ ಇದರ ಉಸ್ತುವಾರಿ ವಹಿಸಲಾಗಿದೆ ಎನ್ನಲಾಗುತ್ತಿದೆ.
ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಗೃಹ ಸಚಿವ ಜಿ.ಪರಮೇಶ್ವರ್ ಅವರ ನೇತೃತ್ವದಲ್ಲಿ ಕಲ್ಪತರು ನಾಡು ತುಮಕೂರಿನಲ್ಲಿ ಡಿಸೆಂಬರ್.2ರಂದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ರ್ಯಾಲಿ ನಡೆಯಲಿದ್ದು, ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಜನತೆ ಮತ್ತಷ್ಟು ಮನವರಿಕೆ ಮಾಡಿಕೊಡಲಾಗುತ್ತದೆ.
ಈ ಸಮಾವೇಶದ ಮೂಲಕ ವಿರೋಧ ಪಕ್ಷಗಳಿಗೆ ರಾಜ್ಯ ಸಚಿವರು ಟಕ್ಕರ್ ಕೊಡಲಿದ್ದು, ಅಂದಿನ ಸಮಾವೇಶಕ್ಕೆ ಐದು ಜಿಲ್ಲೆಯ ಜನರು ಸೇರುವ ನಿರೀಕ್ಷೆಯಿದೆ ಎನ್ನಲಾಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


