Saturday, August 8, 2026
spot_img
More
    spot_img
    HomeEntertainmentಖ್ಯಾತ ಗಾಯಕ ಎಆರ್‌ ರಹಮಾನ್‌ ದಾಂಪತ್ಯದಲ್ಲಿ ಬಿರುಕು

    ಖ್ಯಾತ ಗಾಯಕ ಎಆರ್‌ ರಹಮಾನ್‌ ದಾಂಪತ್ಯದಲ್ಲಿ ಬಿರುಕು

    ಮುಂಬೈ: ಖ್ಯಾತ ಸಂಗೀತ ಸಂಯೋಜಕ ಹಾಗೂ ಗಾಯಕ ಎ.ಆರ್.ರಹಮಾನ್ ಅವರ ದಾಂಪತ್ಯ ಜೀವನ ಮುರಿದು ಬಿದ್ದಿದೆ.

    Advertisement

    ರಹಮಾನ್ ಅವರು ತಮ ಪತ್ನಿ ಸೈರಾ ಬಾನು ಅವರಿಗೆ ವಿಚ್ಛೇದನ ನೀಡಿರುವುದರಿಂದ ಅವರು 29 ವರ್ಷಗಳ ದಾಂಪತ್ಯ ಜೀವನ ಕೊನೆಗೊಂಡಿದೆ.

    ರಹಮಾನ್ ಅವರು ಖ್ಯಾತ ಸಂಗೀತ ಸಂಯೋಜಕರು. ಮೊದಲು ಹಿಂದೂ ಆಗಿದ್ದ ಅವರು ನಂತರ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡುದ್ದರು ಹೀಗಾಗಿ ಅವರು ಮುಸ್ಲಿಂ ಹುಡುಗಿಯನ್ನೇ ಮದುವೆ ಆಗಿದ್ದರು. ಇಬ್ಬರೂ ಇನ್ನೇನು ಮೂರು ದಶಕಗಳ ದಾಂಪತ್ಯ ಸಂಭ್ರಮವನ್ನು ಆಚರಿಸಬೇಕಿತ್ತು. ಆದರೆ, ಅದಕ್ಕೂ ಮೊದಲೇ ಇಬ್ಬರೂ ಬೇರೆ ಆಗುವ ನಿರ್ಧಾರ ಮಾಡಿದ್ದಾರೆ. ಈ ವಿಚಾರವನ್ನು ಸೈರಾ ಬಾನು ಅವರು ಖಚಿತಪಡಿಸಿದ್ದರು. ಈಗ ರೆಹಮಾನ್ ಕೂಡ ವಿಚ್ಛೇದನದ ಬಗ್ಗೆ ಮೌನ ಮುರಿದಿದ್ದಾರೆ.

    ನಾವು ಇನ್ನೇನು 30 ವರ್ಷಗಳ ದಾಂಪತ್ಯಕ್ಕೆ ಕಾಲಿಡಬೇಕಿತ್ತು. ಆದರೆ, ಯಾರೂ ಊಹಿಸದ ಅಂತ್ಯ ಸಿಕ್ಕಿದೆ. ಮುರಿದ ಹದಯಗಳ ಭಾರಕ್ಕೆ ದೇವರ ಸಿಂಹಾಸನವೂ ನಡುಗಬಹುದು. ಆದರೂ, ಈ ಚೂರಾದ ಸಂಬಂಧದಲ್ಲೂ ನಾವು ಅರ್ಥವನ್ನು ಹುಡುಕುತ್ತೇವೆ. ಒಡೆದ ತುಣುಕುಗಳು ಮತ್ತೆ ಎಂದಿಗೂ ಒಂದಾಗಲಾರದು. ನಮ್ಮ ಖಾಸಗಿತನ ಗೌರವಿಸಿದ ಗೆಳೆಯರಿಗೆ ಧನ್ಯವಾದಗಳು ಎಂದು ರೆಹಮಾನ್ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

    1995ರಲ್ಲಿ ರಹಮಾನ್ ಹಾಗೂ ಸೈರಾ ವಿವಾಹ ಆಗಿದ್ದರು. ರಹಮಾನ್ ಅವರು ನಾಚಿಕೆ ಸ್ವಭಾವದವರು. ಹೀಗಾಗಿ, ಅವರಿಗೆ ಯಾರನ್ನೂ ಪ್ರೀತಿ ಮಾಡುವಷ್ಟು ಧೈರ್ಯ ಇರಲಿಲ್ಲ. ಹೀಗಾಗಿ ಅರೇಂಜ್ ವ್ಯಾರೇಜ್ ಆಗಬೇಕಾಯಿತು. ತಾಯಿ ನೋಡಿದ ಹುಡುಗಿಯನ್ನು ಅವರು ಮದುವೆ ಆದರು. ಆಗ ಅವರಿಗೆ 29 ವರ್ಷ ವಯಸ್ಸಾಗಿತ್ತು. ಈ ದಂಪತಿಗೆ ಮೂವರು ಮಕ್ಕಳು ಇದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading