ಬೆಂಗಳೂರು: ಕೇಂದ್ರ ಸರ್ಕಾರದ ನಿಯಮಾನುಸಾರ ಬಿಪಿಎಲ್ ಕಾರ್ಡ್ಗಳನ್ನು ಪರಿಶೀಲನೆ ಮಾಡಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಇರುವುದು ಬಡವರಿಗಾಗಿ, ಹಾಗಾಗಿ ಯಾರೂ ಕೂಡ ಗಾಬರಿ ಆಗುವ ಅವಶ್ಯಕತೆಯಿಲ್ಲ. ಸರ್ಕಾರಿ ನೌಕರರು ಹಾಗೂ ತೆರಿಗೆ ಕಟ್ಟುವವರ ಬಿಪಿಎಲ್ ಕಾರ್ಡ್ ಮಾತ್ರ ರದ್ದಾಗಲಿದೆ. 7 ಎಕರೆ ಜಮೀನು ಇದ್ದವರೆಲ್ಲಾ ಅನರ್ಹರೇ ಆಗ್ತಾರೆ. ಹಾಗಾಗಿ ಪ್ರತೀ ಕ್ಷೇತ್ರದ ಶಾಸಕರಿಗೆ ಮಾಹಿತಿ ನೀಡಲಾಗಿದೆ. ಮನೆ ಮನೆಗೆ ಹೋಗಿ ದಾಖಲೆ ಸರಿಪಡಿಸಲು ಹೇಳಿದ್ದೇವೆ. ಅನರ್ಹರ ಬಿಪಿಎಲ್ ಕಾರ್ಡ್ ರದ್ದು ಮಾಡುತ್ತೇವೆ. ಅರ್ಹರು ಯಾರೂ ಕೂಡ ಭಯಪಡುವ ಅಗತ್ಯವಿಲ್ಲ. ಪರಿಶೀಲನೆ ವೇಳೆ ಸ್ವಲ್ಪ ಹೆಚ್ಚು ಕಡಿಮೆ ಆಗಬಹುದು ಎಂದರು.
ಇನ್ನು ಸಿಎಂ ಸಿದ್ದರಾಮಯ್ಯ ದೆಹಲಿ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸಿಎಂ ದೆಹಲಿ ಭೇಟಿ ಮೊದಲೇ ನಿಗದಿಯಾಗಿತ್ತು. ನಂದಿನಿ ಹಾಲು ಮಾರ್ಕೆಟ್ ಮಾಡೋಕೆ ಹೋಗುತ್ತಿದ್ದಾರೆ. ನಂದಿನಿ ಹಾಲು ಮಾರ್ಕೆಟ್ನಿಂದ ರೈತರಿಗೆ ಅನುಕೂಲ ಆಗುತ್ತದೆ. ಹೀಗಾಗಿ ದೆಹಲಿಗೆ ಹೋಗುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


