ಬೆಂಗಳೂರು: ರಾಜ್ಯದಲ್ಲಿ ಅನರ್ಹರು ಪಡೆದಿರುವ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಲು ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ರಾಜ್ಯದಲ್ಲಿ ಅನರ್ಹರು ಪಡೆದಿರುವ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತಿದ್ದು, ಇದಕ್ಕೆ ವಿರೋಧ ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಯೋಜನೆಗಳು ನಿಂತುಹೋಗಿವೆ ಎಂದು ವಿರೋಧ ಪಕ್ಷದ ನಾಯಕರು ಪದೇ ಪದೇ ಆರೋಪಿಸುತ್ತಿರುವ ಬೆನ್ನಲ್ಲೇ ಈಗ ಬಿಪಿಎಲ್ ಕಾರ್ಡ್ ರದ್ದು ಮಾಡುವ ಪ್ರಕ್ರಿಯೆ ನಡೆಸಲಾಗುತ್ತಿದೆ.
ರಾಜ್ಯದಲ್ಲಿ ಸುಮಾರು 14 ಲಕ್ಷ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ರಾಜ್ಯ ಸರ್ಕಾರ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.
ಬಿಪಿಎಲ್ ಕಾರ್ಡ್ ರದ್ದು ಪ್ರಕ್ರಿಯೆ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಕಾರ್ಡ್ ರದ್ದತಿ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅನರ್ಹ ಕಾರ್ಡ್‌ಗಳನ್ನು ರದ್ದು ಮಾಡಲು ಸೂಚನೆ ನೀಡಲಾಗಿದೆ. ಅದರಲ್ಲಿ ಕೆಲವು ಲೋಪಗಳಾಗಿದ್ದರೆ ಪರಿಶೀಲನೆ ನಡೆಸಲಾಗುತ್ತದೆ ಹಾಗೂ ಅಧಿಕಾರಿಗಳು ಲೋಪ ಮಾಡಿದ್ದರೆ ಅದನ್ನು ಸರಿಪಡಿಸುತ್ತಾರೆ ಎಂದು ಸ್ಪಷ್ಟಪಡಿಸಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


