ಬೆಂಗಳೂರು: ಕರ್ನಾಟಕದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ ಚಿಕಿತ್ಸಾ ವೆಚ್ಚ ಪರಿಷ್ಕರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಶೀಘ್ರದಲ್ಲೇ ಪ್ರಾಥಮಿಕ ಆರೋಗ್ಯ ಕೇಂದ್ರಗಳ ( PHC) ಚಿಕಿತ್ಸಾ ದರ ವೆಚ್ಚವನ್ನು ಶೇಕಡಾ 15 ರಿಂದ 20 ಹೆಚ್ಚಿಸಲು ನಿರ್ಧಾರ ಮಾಡಲಾಗಿದ್ದು, ಬಡವರ ಪಾಲಿನ ಆರೋಗ್ಯ ಕೇಂದ್ರಗಳು ಇನ್ಮೇಲೆ ದುಬಾರಿಯಾಗಲಿವೆ.
ಸರ್ಕಾರ ಕಳೆದ ಕೆಲ ದಿನಗಳ ಹಿಂದೆಯಷ್ಟೇ ಮೆಡಿಕಲ್ ಕಾಲೇಜ್ ವ್ಯಾಪ್ತಿಯ ಆಸ್ಪತ್ರೆಗಳಲ್ಲಿನ ಚಿಕಿತ್ಸಾ ದರ ಪರಿಷ್ಕರಣೆ ಮಾಡಿತ್ತು. ಇದರ ಬೆನ್ನಲ್ಲೆ ಇದೀಗ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಚಿಕಿತ್ಸಾ ದರ ಪರಿಷ್ಕರಣೆ ಮಾಡಲು ಮುಂದಾಗಿದೆ.
ಈ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ “ಗ್ಯಾರಂಟಿ ಯೋಜನೆಗಳಿಗೆ ಹಣ ಒದಗಿಸಲು ದರ ಪರಿಷ್ಕರಣೆ ಮಾಡುತ್ತಿಲ್ಲ. ಪ್ರತೀ ಎರಡರಿಂದ ಮೂರು ವರ್ಷಕ್ಕೊಮ್ಮೆ ಆಸ್ಪತ್ರೆಗಳಲ್ಲಿ ಚಿಕಿತ್ಸಾ ವೆಚ್ಚ ಪರಿಷ್ಕರಣೆ ಮಾಡಲಾಗುತ್ತದೆ. ಅದರಂತೆ, ಈ ವರ್ಷವೂ ದರ ಪರಿಷ್ಕರಣೆ ಮಾಡಲಾಗುತ್ತೆ” ಎಂದು ಹೇಳಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


