ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹನೂರು ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಪುದೂರು ಗ್ರಾಮದ ನಿವಾಸಿಮಣಿಕಂಠ ಅಲಿಯಾಸ್ ಮಣಿ, ಮಂಡ್ಯ ಮೂಲದ ರಾಜು ಬಂಧಿತ ಆರೋಪಿಯಾಗಿದ್ದಾರೆ.
ಘಟನೆ ವಿವರ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪುದೂರು ಗ್ರಾಮದ ನಿವಾಸಿ ಮಣಿ ತನ್ನ ವಾಸದ ಮನೆಯಲ್ಲಿ ಅಕ್ರಮ ಮದ್ಯದ ಪೌಚ್ ಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಜಗದೀಶ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಅಕ್ರಮವಾಗಿ ಶೇಖರಣೆ ಮಾಡಿದ್ದ 90 ಎಂ ಎಲ್ ನ 76 ಐ ವಾಡ್ಸ್ ವಿಸ್ಕಿ 3040 ಮೌಲ್ಯದ ಪೌಚ್ ಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಬೇಲಿಯ ಎದ್ದು ಹೊಲ ಮೇದಂತೆ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಹನೂರು ವಿಧಾನಸಭಾ ಕ್ಷೇತ್ರದ ಮಂಜುನಾಥ್ ರವರು ಅಕ್ರಮ ಮಧ್ಯ ಮಾರಾಟ ತಡೆಗಟ್ಟುವಲ್ಲಿ ಅಧಿಕಾರಿಗಳ ಜೊತೆ ಹಲವಾರು ಸಭೆ ನಡೆಸಿದ್ದಾರೆ ಆದರೆ ತಮ್ಮದೇ ಪಕ್ಷದ ಮುಖಂಡ ಶ್ರೀ ಕ್ಷೇತ್ರದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವುದು ಸರಿಯೇ ಎಂಬ ಪ್ರಶ್ನೆಯನ್ನು ಅಲ್ಲಿನ ನಿವಾಸಿಗಳು ಪ್ರಶ್ನೆ ಮಾಡಿದ್ದಾರೆ.
ಗಡಿಪಾರು ಮಾಡುವಂತೆ ಒತ್ತಾಯ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಪುದೂರು ಗ್ರಾಮದ ನಿವಾಸಿ ಮಣಿಕಂಠ ಅಕ್ರಮವಾಗಿ ಮಧ್ಯ ಮಾರಾಟ ಮಾಡುವುದನ್ನು ವೃತ್ತಿಯನ್ನಾಗಿ ಮಾಡಿಕೊಂಡಿದ್ದಾನೆ. ಈತನ ವಿರುದ್ಧ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಆರು ಪ್ರಕರಣಗಳು ದಾಖಲಾಗಿವೆ. ಇದಲ್ಲದೆ ದೇವಸ್ಥಾನದ ಪಾವಿತ್ರ್ಯತೆಗೆ ದಕ್ಕೆ ತರುತ್ತಿರುವುದರಿಂದ ಈಗಾಗಲೇ ರೌಡಿಶೀಟರ್ ತೆರೆಯಲಾಗಿದೆ. ಈ ನಿಟ್ಟಿನಲ್ಲಿ ಈ ವ್ಯಕ್ತಿಯನ್ನು ಗಡಿಪಾರು ಮಾಡುವಂತೆ ಮಲೆ ಮಾದೇಶ್ವರ ಭಕ್ತಾದಿಗಳು ಒತ್ತಾಯಿಸಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


