ಬೆಂಗಳೂರು: ಬಡವರ ಬಳಿಯಿರುವ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಲ್ಲ ಎಂದು ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯದಲ್ಲಿಯೇ ಅತೀ ಹೆಚ್ಚು ರೇಷನ್ ಕಾರ್ಡ್‌ಗಳಿವೆ. ಬೇರೆ ರಾಜ್ಯದಲ್ಲಿ 40% ಕಾರ್ಡ್ ಇದ್ದರೆ ಇಲ್ಲಿ ಶೇಕಡಾ 80% ಬಿಪಿಎಲ್ ಕಾರ್ಡ್‌ಗಳಿವೆ ಎಂದರು.
ಯಾರು ತೆರಿಗೆ ಕಟ್ಟುತ್ತಾರೆಯೇ ಅಂತಹವರ ರೇಷನ್ ಕಾರ್ಡ್ ಕಟ್ ಆಗುತ್ತದೆ. ಉದಾಹರಣೆಗೆ ಸರ್ಕಾರಿ ನೌಕರರು ತೆರಿಗೆ ಕಟ್ಟುತ್ತಾರೆ. ಹಾಗಾಗಿ ಅವರ ರೇಷನ್ ಕಾರ್ಡ್ ರದ್ದು ಮಾಡಲಾಗುತ್ತದೆ. ಬಡವರ ರೇಷನ್ ಕಾರ್ಡ್‌ನ್ನು ಯಾವುದೇ ಕಾರಣಕ್ಕೂ ರದ್ದು ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


