Friday, August 7, 2026
spot_img
More
    spot_img
    HomeStateಕಾಂಗ್ರೆಸ್‌ ಸರ್ಕಾರದಿಂದ ಬರಲಿದೆ ಮತ್ತಷ್ಟು ಯೋಜನೆಗಳು; ಸೂಚನೆ ನೀಡಿದ ಡಿಕೆಶಿ

    ಕಾಂಗ್ರೆಸ್‌ ಸರ್ಕಾರದಿಂದ ಬರಲಿದೆ ಮತ್ತಷ್ಟು ಯೋಜನೆಗಳು; ಸೂಚನೆ ನೀಡಿದ ಡಿಕೆಶಿ

    ಬೆಂಗಳೂರು: ರಾಜ್ಯದಲ್ಲಿ ಮತ್ತಷ್ಟು ಹೊಸ ಯೋಜನೆಗಳನ್ನು ಜಾರಿ ಮಾಡುವ ಮೂಲಕ ಮುಂದಿನ ದಿನಗಳಲ್ಲೂ ಕಾಂಗ್ರೆಸ್ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರಲು ಅಗತ್ಯವಾದ ತಂತ್ರ-ಮಂತ್ರಗಳನ್ನು ಪಕ್ಷ ಹೊಂದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

    Advertisement

    ನಗರದ ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿಯವರ ಜನ ದಿನಾಚರಣೆಯಲ್ಲಿ ಮಾತನಾಡಿದ ಅವರು, ಎಲ್ಲಾ ಕಾರ್ಯಕರ್ತರು ಆಶಾಭಾವನೆಯಿಂದಿರಿ. ಪಕ್ಷವನ್ನು ಉಳಿಸಿ, ಬೆಳೆಸೋಣ. ಮತ್ತಷ್ಟು ಹೊಸ ಯೋಜನೆಗಳ ಮೂಲಕ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಮಂತ್ರ ಇದೆ, ತಂತ್ರ ಇದೆ, ಶಕ್ತಿ ಇದೆ, ನಾಯಕತ್ವವೂ ಇದೆ ಎಂದು ಹೇಳಿದರು.

    ಕಾಂಗ್ರೆಸ್ ಪಕ್ಷಕ್ಕೂ ಮತ್ತು ನೆಹರೂ ಕುಟುಂಬಕ್ಕೂ ಅವಿನಾಭಾವ ಸಂಬಂಧವಿದೆ. ಇಂದಿರಾಗಾಂಧಿಯವರು ದೇಶದ ಅಭಿವೃದ್ಧಿಗಾಗಿ ರೂಪಿಸಿದ ಕಾರ್ಯಕ್ರಮಗಳು ಸದಾ ಸರಣೀಯ ಹಾಗೂ ಆದರಣೀಐ ಎಂದರು.
    ಇಂದಿರಾಗಾಂಧಿಯವರು ಉಕ್ಕಿನ ಮಹಿಳೆ ಎಂದು ಕರೆಸಿಕೊಂಡಿದ್ದರು. ಅವರ ದಿಟ್ಟ ಹೋರಾಟ ಹಾಗೂ ಕಾರ್ಯಕ್ರಮಗಳನ್ನು ವಿಶ್ವವೇ ಗುರುತಿಸಿತ್ತು. ಗಾಂಧಿ ಕುಟುಂಬ ದೇಶದ ಸಮಗ್ರತೆಗಾಗಿ ಹಲವು ತ್ಯಾಗ, ಬಲಿದಾನಗಳನ್ನು ಮಾಡಿದೆ. ಇತ್ತೀಚೆಗೆ ರಾಹುಲ್ ಗಾಂಧಿಯವರು ಭಾರತ್ ಜೋಡೋ ಯಾತ್ರೆಯ ಮೂಲಕ ಆ ಪರಂಪರೆಯನ್ನು ಮುಂದುವರೆಸಿದರು ಎಂದು ಹೇಳಿದರು.

    ಕಾಂಗ್ರೆಸ್ ಕಾರ್ಯಕ್ರಮಗಳನ್ನು ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಬದಲಾವಣೆ ಮಾಡುವ ಶಕ್ತಿ ಹಾಗೂ ಧೈರ್ಯ ಹೊಂದಿಲ್ಲ. ವೃದ್ಧಾಪ್ಯ ವೇತನ ಸೇರಿದಂತೆ ನಾನಾ ರೀತಿಯ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಪಕ್ಷ ಜಾರಿಗೆ ತಂದಿದೆ ಎಂದು ಹೇಳಿದರು.

    ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಸಚಿವರಾದ ಕೆ.ಎಚ್.ಮುನಿಯಪ್ಪ, ಮುಖಂಡರಾದ ಬಿ.ಕೆ.ಹರಿಪ್ರಸಾದ್, ಸಲೀಂ ಅಹಮದ್, ರಾಣಿ ಸತೀಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


    ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ಪ್ರಶಸ್ತಿ ನೀಡಿ ಸನಾನಿಸಲಾಯಿತು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading