Saturday, August 8, 2026
spot_img
More
    spot_img
    HomeStateದೇಶವನ್ನು ಹಿಂದೂ ರಾಷ್ಟ್ರವಾಗಿ ಪರಿವರ್ತಿಸಲು ನಾವು ಬಿಡಲ್ಲ ಎಂದ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ

    ದೇಶವನ್ನು ಹಿಂದೂ ರಾಷ್ಟ್ರವಾಗಿ ಪರಿವರ್ತಿಸಲು ನಾವು ಬಿಡಲ್ಲ ಎಂದ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ

    ಮೈಸೂರು: ಭಾರತ ದೇಶವನ್ನು ಕೇವಲ ಒಂದೇ ಒಂದು ಧರ್ಮದ ರಾಷ್ಟ್ರವಾಗಿ ಮಾಡಲು ನಾವು ಯಾವುದೇ ಕಾರಣಕ್ಕೂ ಬಿಡಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ಹಿಂದೂ ರಾಷ್ಟ್ರ ಪರಿಕಲ್ಪನೆಗೆ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.

    Advertisement

    ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಭಾರತವು ವಿವಿಧ ಜಾತಿ, ಧರ್ಮ, ಸಂಸ್ಕೃತಿಯಿಂದ ಕೂಡಿರುವ ದೇಶವಾಗಿದೆ. ಆದರೆ ಕೆಲ ರಾಜಕೀಯ ಗುಂಪುಗಳು ಕೇವಲ ರಾಜಕೀಯ ಲಾಭಕ್ಕಾಗಿ ಹಿಂದೂ ಧರ್ಮದ ರಾಷ್ಟ್ರವನ್ನಾಗಿಸಲು ಹೊರಟಿದ್ದಾರೆ. ಅದನ್ನು ನಾವೆಲ್ಲರೂ ವಿರೋಧಿಸಬೇಕು. ಇಲ್ಲವಾದರೆ ಭಾರತವು ಒಂದು ಧರ್ಮದ ರಾಷ್ಟ್ರವಾಗಿ ಉಳಿಯುತ್ತದೆ ಎಂದರು.

    ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ರಚಿಸಿರುವ ಸಂವಿಧಾನದಲ್ಲಿ ಹಿಂದೂ ರಾಷ್ಟ್ರ ನಿರ್ಮಾಣ ಅಸಾಧ್ಯ. ಏಕೆಂದರೆ ಸಂವಿಧಾನದ ಪೀಠಿಕೆಯಲ್ಲಿ ಎಲ್ಲಾ ಜನಾಂಗದ ಹಾಗೂ ಧರ್ಮದ ಹಕ್ಕು ಮತ್ತು ಸ್ವಾತಂತ್ರ್ಯವನ್ನು ರಕ್ಷಿಸುತ್ತದೆ ಎಂಬಂತೆ ಉಲ್ಲೇಖಿಸಿದೆ. ಭಾರತವನ್ನು ಒಂದು ಧರ್ಮದ ರಾಷ್ಟ್ರ ಮಾಡಲು ಹೊರಟಿರುವುದು ಅಪಾಯಕಾರಿಯಾಗಿದೆ. ಹೀಗಾಗಿ ಸಂವಿಧಾನವನ್ನು ರಕ್ಷಣೆ ಮಾಡಬೇಕು ಎಂದು ಕರೆ ನೀಡಿದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading