Monday, November 2, 2026
spot_img
More
    spot_img
    HomeBreaking News10ನೇ ಬಾರಿಗೆ ಬಿಹಾರ ಸಿಎಂ ಆದ ನಿತೀಶ್ ಕುಮಾರ್: ಬಿಜೆಪಿಗೆ ಸಿಕ್ಕ ಸ್ಥಾನಗಳೇನು?

    10ನೇ ಬಾರಿಗೆ ಬಿಹಾರ ಸಿಎಂ ಆದ ನಿತೀಶ್ ಕುಮಾರ್: ಬಿಜೆಪಿಗೆ ಸಿಕ್ಕ ಸ್ಥಾನಗಳೇನು?

    ಬಿಹಾರ ವಿಧಾನಸಭೆ ಚುನಾವಣೆ 2025ರ ಬಳಿಕ ಎನ್‌ಡಿಎ ಮೈತ್ರಿಕೂಟದ ಹೊಸ ಸರ್ಕಾರ ಗುರುವಾರ ರಚನೆಯಾಗಿದೆ. ಚುನಾವಣೆಯಲ್ಲಿ ಜೆಡಿಯು-ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 202 ಸೀಟುಗಳಲ್ಲಿ ಜಯಗಳಿಸಿದ್ದು, ಗುರುವಾರ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು.

    ಗುರುವಾರ ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಜೆಡಿಯು ವರಿಷ್ಠ ನಿತೀಶ್ ಕುಮಾರ್ 10ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡುವ ಮೂಲಕ ಹೊಸ ದಾಖಲೆ ಬರೆದರು.

    ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 89, ಜೆಡಿಯು 85, ಎಲ್‌ಜೆಪಿ (ಆರ್‌ವಿ) 19, ಹೆಚ್‌ಎಎಂ(ಎಸ್) 5 ಮತ್ತು ಆರ್‌ಎಲ್‌ಎಂ 4 ಸೀಟುಗಳಲ್ಲಿ ಜಯಗಳಿಸಿವೆ. ಎನ್‌ಡಿಎ ಮೈತ್ರಿಕೂಟ 202 ಸ್ಥಾನಗಳಲ್ಲಿ ಜಯಗಳಿಸಿದ್ದು, ನೂತನ ಸರ್ಕಾರ ರಚನೆಯಾಗಿದೆ. ಬಿಜೆಪಿ ಅತಿ ದೊಡ್ಡ ಪಕ್ಷವಾದರೂ ಸಹ ಜೆಡಿಯುಗೆ ಮುಖ್ಯಮಂತ್ರಿ ಸ್ಥಾನ ಸಿಕ್ಕಿದೆ.

    ಬಿಜೆಪಿಗೆ ಎರಡು ಡಿಸಿಎಂ ಸ್ಥಾನಗಳು ಸಿಕ್ಕಿವೆ. ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಉಪಮುಖ್ಯಮಂತ್ರಿಗಳಾಗಿ ನಿತೀಶ್ ಕುಮಾರ್ ಸಂಪುಟವನ್ನು ಸೇರಿದ್ದಾರೆ. ಎಲ್‌ಜೆಪಿ (ಆರ್‌ವಿ) ಪಕ್ಷಕ್ಕೆ ಮತ್ತೊಂದು ಡಿಸಿಎಂ ಸ್ಥಾನ ನೀಡಬೇಕು ಎಂಬ ಬೇಡಿಕೆ ಇತ್ತು. ಆದರೆ ಅದಕ್ಕೆ ಮನ್ನಣೆ ಸಿಕ್ಕಿಲ್ಲ. ಎರಡು ಸಚಿವ ಸ್ಥಾನವನ್ನು ಪಕ್ಷಕ್ಕೆ ನೀಡಲಾಗಿದೆ.

    ನಿತೀಶ್ ಕುಮಾರ್ ಹೊಸ ಸರ್ಕಾರದಲ್ಲಿ ಬಿಜೆಪಿಗೆ 14 ಸಚಿವ ಸ್ಥಾನ, ಜೆಡಿಯುಗೆ 8, ಜಿತನ್ ರಾಮ್ ಮಾಂಝಿ ನೇತೃತ್ವದ ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಮತ್ತು ಉಪೇಂದ್ರ ಕುಶ್ವಾಹ ನೇತೃತ್ವದ ರಾಷ್ಟ್ರೀಯ ಲೋಕ ಮೋರ್ಚಾ (ಆರ್‌ಎಲ್‌ಎಂ) ತಲಾ ಒಬ್ಬ ಸಚಿವರನ್ನು ಹೊಂದಿದೆ.

    ಹಲವು ಗಣ್ಯರು ಭಾಗಿ: ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ವಿವಿಧ ಕೇಂದ್ರ ಸಚಿವರು, ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು.

    ನಿತೀಶ್ ಕುಮಾರ್ ಸಂಪುಟದಲ್ಲಿ ಒಟ್ಟು 26 ಸಚಿವರು ಇದ್ದಾರೆ. 14 ಬಿಜೆಪಿ, 8 ಜೆಡಿಯು, 2 ಎಲ್‌ಜೆಪಿ (ಆರ್‌ವಿ), ಹೆಚ್‌ಎಎಂ(ಎಸ್) ಮತ್ತು ಆರ್‌ಎಲ್‌ಎಂ ಪಕ್ಷದಿಂದ ತಲಾ ಒಬ್ಬರು ಸಚಿವರಾಗಿ ನಿತೀಶ್ ಕುಮಾರ್ ಸಂಪುಟ ಸೇರಿದ್ದಾರೆ.

    ಜೆಡಿಯು ಪಕ್ಷ ವಿಧಾನಸಭೆ ಸ್ಪೀಕರ್ ಸ್ಥಾನವನ್ನು ಬಿಜೆಪಿಗೆ ನೀಡಲಿದೆ. ಗಯಾ ನಗರ ಕ್ಷೇತ್ರದಲ್ಲಿ 9 ಬಾರಿ ಗೆಲುವು ಸಾಧಿಸಿರುವ ಬಿಜೆಪಿಯ ಪ್ರೇಮ್ ಕುಮಾರ್ ಸ್ಪೀಕರ್ ಆಗಲಿದ್ದಾರೆ ಎಂಬ ಮಾಹಿತಿ ಸದ್ಯಕ್ಕೆ ಲಭ್ಯವಾಗಿದೆ.

    ಆರ್‌ಎಲ್‌ಎಂ ಪಕ್ಷದ ಮುಖ್ಯಸ್ಥ ಉಪೇಂದ್ರ ಕುಶ್ವಾ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಆದರೆ ಅವರು ಶಾಸಕರು, ಪರಿಷತ್ ಸದಸ್ಯರು ಅಲ್ಲ. ಅವರು ವಿಧಾನ ಪರಿಷತ್ ಸದಸ್ಯರಾಗಿ ನೇಮಕವಾಗಬೇಕಿದೆ.

    ಸಿಎಂ ನಿತೀಶ್ ಕುಮಾರ್

    1. ಮಾರ್ಚ್ 2000. 7 ದಿನಗಳ ಕಾಲ ಸಿಎಂ
    2. ನವೆಂಬರ್ 2005. 1,827 ದಿನ
    3. ನವೆಂಬರ್ 2010. 1,270 ದಿನ
    4. ಫೆಬ್ರವರಿ 2015. 270 ದಿನ
    5. ನವೆಂಬರ್ 2015. 614 ದಿನ
    6. ಜುಲೈ 2017. 1,204 ದಿನ
    7. ನವೆಂಬರ್ 2020. 631 ದಿನ
    8. ಆಗಸ್ಟ್ 2022. 536 ದಿನ
    9. ಜನವರಿ 2024. 661 ದಿನ
    10. ನವೆಂಬರ್ 20, 2025 ಪ್ರಮಾಣ ವಚನ ಸ್ವೀಕಾರ

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search