ಬೆಂಗಳೂರು: ಈಗಾಗಲೇ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಗೃಹಿಣಿಯರಿಗೆ ತಿಂಗಳಿಗೆ 2000 ರೂಪಾಯಿ ಹಣವನ್ನು ನೀಡುವ ಮೂಲಕ ಜನಮನ್ನಣೆ ಗಳಿಸಿ ಇತರೆ ರಾಜ್ಯಗಳು ಹಾಗೂ ಪಕ್ಷಗಳಿಗೆ ಮಾದರಿಯಾಗಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರ ಟೀಕೆ ಮಾಡಿದವರೇ ತಮ್ಮ ಯೋಜನೆಗಳನ್ನು ಅನುಸರಿಸುವ ಹಾಗೆ ಮಾಡಿ ಯಶಸ್ವಿಯಾಗಿದೆ.
ಇದೇ ಸರ್ಕಾರ ಇದೀಗ ಮತ್ತೊಮ್ಮೆ ಮಹಿಳಾ ಸಬಲೀಕರಣವನ್ನು ಬೆಂಬಲಿಸುವ ಕ್ರಮಕ್ಕೆ ಮುಂದಾಗಿದ್ದು, ಉದ್ಯಮಿ ಮಹಿಳೆಯರಿಗೆ 5 ಕೋಟಿವರೆಗೆ ಸಾಲ ನೀಡಲು ಮುಂದಾಗಿದೆ. ಹೌದು, ಮಹಿಳಾ ಉದ್ಯಮಿಗಳಿಗೆ ಅಥವಾ ಸ್ವಂತ ಉದ್ಯಮ ಆರಂಭಿಸಲು ಇಚ್ಛಿಸುವ ಮಹಿಳೆಯರಿಗೆ ರಾಜ್ಯ ಸರ್ಕಾರ ವಾರ್ಷಿಕ ಶೇ. 3ರ ಬಡ್ಡಿ ದರದಲ್ಲಿ 5 ಕೋಟಿ ರೂಪಾಯಿಗಳವರೆಗೆ ಸಾಲ ನೀಡಲಿದೆ ಎಂದು ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ನಿನ್ನೆ ( ನವೆಂಬರ್ 19 ) ನಗರದ ಎಫ್‌ಕೆಸಿಸಿಐ ಆವರಣದಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಮಹಿಳಾ ಉದ್ದಿಮೆದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್ ರಾಜ್ಯದ ಮಹಿಳೆಯರು ವ್ಯವಹಾರ, ಸಣ್ಣ ಪ್ರಮಾಣದ ಕೈಗಾರಿಕೆಗಳು ಹಾಗೂ ಉದ್ಯಮಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಆರ್ಥಿಕ ನೆರವು ನೀಡಲಿದೆ ಎಂದು ತಿಳಿಸಿದರು.
ಇತ್ತೀಚೆಗಿನ ದಿನಗಳಲ್ಲಿ ಮಹಿಳೆಯರು ಉದ್ಯೋಗಗಳನ್ನು ಹೆಚ್ಚಿನ ಮಟ್ಟದಲ್ಲಿ ತೆಗೆದುಕೊಳ್ಳುತ್ತಿದ್ದು, ಸ್ವಂತ ಉದ್ದಿಮೆಗಳನ್ನೂ ಸ್ಥಾಪಿಸುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದೆ, ಅಲ್ಲದೇ ಈ ಮೂಲಕ ಬೇರೆಯವರಿಗೂ ಸಹ ಉದ್ಯೋಗವನ್ನು ನೀಡುತ್ತಿದ್ದಾರೆ. ಈ ಮೂಲಕ ಮಹಿಳೆಯರು ಸ್ವಾವಲಂಬಿಗಳಾಗುತ್ತಿದ್ದಾರೆ. ಇಂತಹ ಚಿಂತನೆಗಳನ್ನು ರಾಜ್ಯ ಸರ್ಕಾರ ಹೆಚ್ಚಾಗಿ ಉತ್ತೇಜಿಸಲಿದ್ದು ಈ ಸವಲತ್ತನ್ನು ಒದಗಿಸುತ್ತಿದೆ ಎಂದು ಹೆಬ್ಬಾಳ್ಕರ್ ತಿಳಿಸಿದರು.
ಬೆಂಗಳೂರು: ದೇವಸ್ಥಾನಕ್ಕೆ ಬಂದ ತಾಯಿ, ಮಗಳು; ನಮಸ್ಕರಿಸಲು ಬಾಗಿದ ಮಗಳ ಮೇಲೆ ಮಚ್ಚು ಬೀಸಿದ ತಾಯಿ!
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


