Tuesday, November 3, 2026
spot_img
More
    spot_img
    HomeLatest newsನವೆಂಬರ್‌ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ; ಚಾಮರಾಜನಗರದಲ್ಲಿ ನಿಂತು ಸಿದ್ದರಾಮಯ್ಯ ಭರ್ಜರಿ ಕೌಂಟರ್

    ನವೆಂಬರ್‌ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ; ಚಾಮರಾಜನಗರದಲ್ಲಿ ನಿಂತು ಸಿದ್ದರಾಮಯ್ಯ ಭರ್ಜರಿ ಕೌಂಟರ್

    ಚಾಮರಾಜನಗರ: ರಾಜ್ಯದಲ್ಲಿ ಯಾವ ನವೆಂಬರ್‌ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಅಲ್ಲದೇ ಚಾಮರಾಜನಗರಕ್ಕೆ ಬಂದರೆ ಅಧಿಕಾರಕ್ಕೆ ಹೋಗುತ್ತೆ ಎನ್ನುತ್ತಾರೆ, ಆದರೆ ಅಧಿಕಾರ ಗಟ್ಟಿಯಾಗಿದೆ ಎಂದು ಹೇಳುತ್ತೇನೆ ಎನ್ನುತ್ತಾ ಮತ್ತೊಮ್ಮೆ ಮೂಢನಂಬಿಕೆಗೆ ಚಾಟಿ ಬೀಸಿದರು.

    ಈ ಕುರಿತು ಚಾಮರಾಜನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಾಶೀರ್ವಾದ ಇರುವವರೆಗೂ ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ. ನವೆಂಬರ್‌ ಕ್ರಾಂತಿಯ ಬಗ್ಗೆ ಅನವಶ್ಯಕ ಚರ್ಚೆ ನಡೆಯುತ್ತಿದೆ. 5 ವರ್ಷ ಆದ ಮೇಲೆ ಚುನಾವಣೆ ನಡೆಯುತ್ತದೆ. ಆಗಲೂ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಇನ್ನು ಸಚಿವ ಸಂಪುಟ ಪುನರ್‌ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸಂಪುಟ ಪುನಾರಚನೆ ಬಗ್ಗೆ ಯಾವುದೇ ತೀರ್ಮಾನ ಆಗಿಲ್ಲ.‌ ಹೈಕಮಾಂಡ್‌ ಈ ಕುರಿತು ಚರ್ಚಿಸಬೇಕು ಎಂದು ಹೇಳಿದರು.

    ಇನ್ನು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಈ ಬಾರಿ ಮಳೆ ಜಾಸ್ತಿ ಆಗಿರುವ ಪರಿಣಾಮ ಪ್ರವಾಹದಿಂದ ಬೆಳೆಗಳು ನಾಶವಾಗಿವೆ. ಇದಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಮನವಿ ಮಾಡಿದ್ದೇನೆ. ಜೊತೆಗೆ ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಚರ್ಚೆ ನಡೆಸಿದ್ದೇನೆ ಎಂದರು.

    ಇನ್ನು ಬೆಂಗಳೂರಿನಲ್ಲಿ 7 ಕೋಟಿ ದರೋಡೆಯಾಗಿರುವ ಪ್ರಕರಣ ಸಂಬಂಧ ಮಾತನಾಡಿದ ಅವರು, ಆರೋಪಿಗಳ ಸುಳಿವು ಸಿಕ್ಕಿದೆ. ಕೃತ್ಯಕ್ಕೆ ಬಳಸಿದ್ದ ಕಾರು ಆಂಧ್ರದಲ್ಲಿ ಸಿಕ್ಕಿದೆ. ದರೋಡೆಕೋರರನ್ನು ಬಿಡುವ ಮಾತೇ ಇಲ್ಲ ಎಂದು ಎಚ್ಚರಿಕೆ ನೀಡಿದರು.

    ‌ಚಳಿಗಾಲದ ಸೂಪರ್‌ಫುಡ್: ಪಾಲಕ್ ಸೊಪ್ಪು ತಿನ್ನುವುದರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಅದ್ಭುತ ಲಾಭಗಳಿವೆ ಗೊತ್ತಾ?


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search