ಭಾರತ ಪ್ರವಾಸವನ್ನು ಕೈಗೊಂಡಿರುವ ದಕ್ಷಿಣ ಆಫ್ರಿಕಾ 2 ಪಂದ್ಯಗಳ ಟೆಸ್ಟ್ ಸರಣಿ, 3 ಪಂದ್ಯಗಳ ಏಕದಿನ ಸರಣಿ ಹಾಗೂ 5 ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಮೊದಲಿಗೆ ಟೆಸ್ಟ್ ಸರಣಿ ನಡೆಯುತ್ತಿದ್ದು, ಕೊಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಭಾರತ 30 ರನ್‌ಗಳ ಹೀನಾಯ ಸೋಲನ್ನು ಕಂಡಿದೆ.
ಈ ಪಂದ್ಯದ ಹೀನಾಯ ಸೋಲಿನಿಂದಾಗಿ ಸರಣಿಯಲ್ಲಿ ಹಿನ್ನಡೆ ಕಂಡಿರುವ ಭಾರತ ನವೆಂಬರ್ 22ರಿಂದ ಗುವಾಹಟಿಯಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಸೋಲಿನಿಂದ ಪಾರಾಗುವತ್ತ ಚಿತ್ತ ನೆಟ್ಟಿದೆ.
ಇನ್ನು ಮೊದಲ ಪಂದ್ಯದ ಸಮಯದಲ್ಲಿ ಕುತ್ತಿಗೆ ನೋವಿನಿಂದ ಬಳಲಿದ್ದ ಭಾರತ ತಂಡದ ನಾಯಕ ಶುಬ್‌ಮನ್ ಗಿಲ್ ಪಂದ್ಯದ ಎರಡೂ ಇನ್ನಿಂಗ್ಸ್‌ನಲ್ಲೂ ಸಹ ಕಣಕ್ಕಿಳಿಯದೇ ಉಳಿದುಕೊಂಡಿದ್ದರು. ಇದೀಗ ಗಿಲ್ ಇನ್ನೂ ಸಹ ಸಂಪೂರ್ಣವಾಗಿ ಗುಣಮುಖರಾಗದೇ ಇರುವ ಕಾರಣ ಎರಡನೇ ಟೆಸ್ಟ್ ಪಂದ್ಯದಿಂದಲೂ ಸಹ ಹೊರಬಿದ್ದಿದ್ದಾರೆ.
ಹೀಗಾಗಿ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವನ್ನು ನಾಯಕನಾಗಿ ರಿಷಬ್ ಪಂತ್ ಮುನ್ನಡೆಸಲಿದ್ದಾರೆ.
ಭಾರತದ ಸ್ಕ್ವಾಡ್: ಶುಭ್‌ಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್) (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುಧರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಆಕಾಶ್ ದೀಪ್
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


