Friday, October 23, 2026
spot_img
More
    spot_img
    HomeLatest newsನಗರ ಪ್ರದೇಶದ ಆಸ್ತಿಯಲ್ಲಿ ಎ ಮತ್ತು ಬಿ ಖಾತೆ ಗೊಂದಲ, ಸ್ಪಷ್ಟನೆಗಳು

    ನಗರ ಪ್ರದೇಶದ ಆಸ್ತಿಯಲ್ಲಿ ಎ ಮತ್ತು ಬಿ ಖಾತೆ ಗೊಂದಲ, ಸ್ಪಷ್ಟನೆಗಳು

    ನಗರ ಪ್ರದೇಶದಲ್ಲಿ ‘ಎ’ ಮತ್ತು ‘ಬಿ’ ಖಾತಾ ಎಂಬ ಮೂಲಕ ಆಸ್ತಿಗಳ ಕಾನೂನುಬದ್ಧತೆಯನ್ನು ನಿರ್ಧರಿಸಲಾಗುತ್ತದೆ. ಈ ಎರಡು ಖಾತಾಗಳು ಸಹ ಎರಡು ವಿಧದ ಆಸ್ತಿ ಖಾತೆಗಳಾಗಿವೆ. ಆದರೆ ‘ಎ’ ಖಾತಾ ಆಸ್ತಿಗಳು ಮತ್ತು ‘ಬಿ’ ಖಾತಾ ಆಸ್ತಿಗಳ ನಿಯಮಗಳ ಕುರಿತು ಹಲವು ಗೊಂದಲಗಳಿವೆ.

    ನಿರ್ದೇಶಕರ ಕಛೇರಿ, ಪೌರಾಡಳಿತ ನಿರ್ದೇಶನಾಲಯ ಜನರಲ್ಲಿ ‘ಎ’ ಮತ್ತು ‘ಬಿ’ ಖಾತಾ ಕುರಿತು ಇರುವ ಗೊಂದಲ ಬಗೆಹರಿಸಲು ಮುಂದಾಗಿದೆ. ಇದಕ್ಕಾಗಿಯೇ ‘ಎ’ ಮತ್ತು ‘ಬಿ’ ಖಾತಾ ಕುರಿತು ಸಾಮಾನ್ಯವಾಗಿ ಕೇಳಲಾಗುವ ಪ್ರಶ್ನೆಗಳು, ಉತ್ತರಗಳನ್ನು ಪಟ್ಟಿ ಮಾಡಿದೆ.

    ಪ್ರಶ್ನೋತ್ತರಗಳು ಹೀಗಿವೆ…

    ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಯಾವೆಲ್ಲಾ ಆಸ್ತಿಗಳನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ಒಳಪಡಿಸಬೇಕು?

    ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ಪ್ರಕರಣ 94 ಮತ್ತು ಕರ್ನಾಟಕ ಪೌರನಿಗಮಗಳ ಅಧಿನಿಯಮ 1976 ಪ್ರಕರಣ 110ರಲ್ಲಿ ವಿನಾಯಿತಿಗೊಳಪಟ್ಟ ಆಸ್ತಿಗಳನ್ನು ಹೊರತುಪಡಿಸಿ ಉಳಿದಂತಹ ಆಸ್ತಿಗಳನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ಒಳಪಡಿಸಬೇಕು.

    ‘ಎ’ ರಿಜಿಸ್ಟರ್‌ನಲ್ಲಿ ನಮೂದಿಸಬೇಕಾದ ಆಸ್ತಿಗಳು ಯಾವುವು?

    ಕೆಳಕಂಡ ಆಸ್ತಿಗಳನ್ನು ಅಧಿಕೃತ ಪರಿಗಣಿಸಿದ್ದು, ಸದರಿ ಆಸ್ತಿಗಳನ್ನು ‘ಎ’ ರಿಜಿಸ್ಟರ್‌ನಲ್ಲಿ ನಮೂದಿಸಬೇಕಾಗಿದೆ

    • ಗ್ರಾಮಠಾಣಾ
    • ಸರ್ಕಾರ ಅಥವಾ ಸರ್ಕಾರದ ನಿಗಮ ಮಂಡಳಿಗಳಿಂದ ನೀಡಲಾದ ಹಕ್ಕು ಪತ್ರಗಳು
    • ಕಂದಾಯ ಇಲಾಖೆಯಿಂದ 94 cc ಅಡಿ ನೀಡಲಾದ ಹಕ್ಕು ಪತ್ರ
    • ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ಬಡಾವಣೆಯಲ್ಲಿನ ಸ್ವತ್ತುಗಳು

    ‘ಬಿ’ ರಿಜಿಸ್ಟರ್‌ನಲ್ಲಿ ನಮೂದಿಬೇಕಾದ ಆಸ್ತಿಗಳು ಯಾವುವು?

    ಕೆಳಕಂಡ ಆಸ್ತಿಗಳನ್ನು ಅನಧಿಕೃತ ಆಸ್ತಿಗಳೆಂದು ಪರಿಗಣಿಸಿದ್ದು ಸದರಿ ಆಸ್ತಿಗಳನ್ನು ‘ಬಿ’ ರಿಜಿಸ್ಟರ್‌ನಲ್ಲಿ ನಮೂದಿಸಬೇಕಾಗಿರುತ್ತದೆ.

    • ಭೂ ಪರಿವರ್ತನೆಯಾಗಿ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾಗದ ಬಡಾವಣೆಗಳಲ್ಲಿನ ನಿವೇಶನಗಳು/ ಕಟ್ಟಡಗಳು
    • ಭೂ ಪರಿವರ್ತನೆಯಾಗದೇ ಉಪವಿಭಜನೆ ಮಾಡಿ ನಿವೇಶನಗಳಾಗಿ ಮಾರಾಟ ಮಾಡಿರುವ ನಿವೇಶನ/ ಕಟ್ಟಡಗಳು

    ‘ಬಿ’ ರಿಜಿಸ್ಟರ್‌ನಲ್ಲಿ ದಾಖಲಿಸಲಾದ ಆಸ್ತಿಗಳಿಗೆ ತೆರಿಗೆ ವಿಧಿಸಬೇಕೇ ಆಥವಾ ದಂಡ ವಿಧಿಸಬೇಕೇ?

    ‘ಬಿ’ ರಿಜಿಸ್ಟರ್ ನಲ್ಲಿ ದಾಖಲಿಸಲಾಗುವ ಆಸ್ತಿಗಳಿಗೆ ಮೊದಲ ಬಾರಿಗೆ ಸ್ವತ್ತು ತೆರಿಗೆಯ 2ರಷ್ಟು ತೆರಿಗೆಯನ್ನು ನಂತರ ವರ್ಷಗಳಲ್ಲಿ ಸ್ವತ್ತು ತೆರಿಗೆಯನ್ನು ಮಾತ್ರ ವಿಧಿಸುವುದು.

    ಯಾವ ದಿನಾಂಕದವರೆಗೆ ಸೃಜನೆಯಾದ ಆಸ್ತಿಗಳನ್ನು ‘ಬಿ’ ರಿಜಿಸ್ಟರ್‌ನಲ್ಲಿ ದಾಖಲಿಸಬೇಕು?

    ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ಪ್ರಕರಣ 106 ಮತ್ತು ಕರ್ನಾಟಕ ಪೌರನಿಗಮಗಳ ಅಧಿನಿಯಮ 1976 ಪ್ರಕರಣ 112 (ಬಿ)ಗೆ ದಿನಾಂಕ: 10-09- 2024ರಲ್ಲಿ ತಿದ್ದುಪಡಿ ತರಲಾಗಿದ್ದು ಸದರಿ ತಿದ್ದುಪಡಿಯ ಪೂರ್ವದಲ್ಲಿ ಸೃಜಿಸಲಾದ ಅನಧಿಕೃತ ಆಸ್ತಿಗಳಲ್ಲಿ ‘ಬಿ’ ರಿಜಿಸ್ಮರ್‌ನಲ್ಲಿ ದಾಖಲಿಸಬೇಕು.

    ‘ಬಿ’ ರಿಜಿಸ್ಟರ್‌ನಲ್ಲಿ ದಾಖಲಿಸಲು ಪಡೆಯಬೇಕಾದ ದಾಖಲೆಗಳು ಯಾವುವು?

    ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕತ್ವ ಸಾಬೀತುಪಡಿಸುವ ನೋಂದಾಯಿತ ಮಾರಾಟ ಪತ್ರಗಳು/ ದಾನಪತ್ರ/ ವಿಭಾಗ ಪತ್ರಗಳು.

    ಯಾವ ವರ್ಷದಿಂದ ‘ಬಿ’ ರಿಜಿಸ್ಟರ್‌ನಲ್ಲಿ ದಾಖಲಿಸುವ ಆಸ್ತಿಗಳಿಗೆ ಆಸ್ತಿ ತೆರಿಗೆ ವಿಧಿಸಬೇಕಾಗಿರುತ್ತದೆ?

    ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ಪ್ರಕರಣ 106 ಮತ್ತು ಕರ್ನಾಟಕ ಪೌರನಿಗಮಗಳ ಅಧಿನಿಯಮ 1976 ಪ್ರಕರಣ 112 (ಬಿ) ಗೆ ತಿದ್ದುಪಡಿ ದಿನಾಂಕ:10-09-2024ರಿಂದ ಜಾರಿಗೆ ಬಂದಿದ್ದು, 2024-25ನೇ ಸಾಲಿನಿಂದ ಆಸ್ತಿ ತೆರಿಗೆ ವಿಧಿಸಬೇಕಾಗಿರುತ್ತದೆ.

    ‘ಬಿ’ ರಿಜಿಸ್ಟರ್‌ನಲ್ಲಿ ನಮೂದಿಸಲು ಅವಕಾಶವಿಲ್ಲದಿರುವ ಸ್ವತ್ತುಗಳು ಯಾವುವು?

    • ಸರ್ಕಾರಿ ಜಾಗದಲ್ಲಿರುವ ಸ್ವತ್ತುಗಳು
    • ಸರ್ಕಾರದ ನಿಗಮ ಮಂಡಳಿಗಳ ಜಾಗಗಳು
    • ನಗರ ಸ್ಥಳೀಯ ಸಂಸ್ಥೆಗಳ ಜಾಗದಲ್ಲಿನ ಸ್ವತ್ತುಗಳು

    ‘ಬಿ’ ರಿಜಿಸ್ಟರ್‌ನಲ್ಲಿ ದಾಖಲಿರುವ ಆಸ್ತಿಗಳಿಗೆ ಉದೃತಾ/ ಖಾತಾ ನೀಡಬಹುದೇ?

    ‘ಬಿ’ ರಿಜಿಸ್ಟರ್‌ನಲ್ಲಿ ದಾಖಲಿಸಿರುವ ಆಸ್ತಿಗಳಿಗೆ ಇ-ಆಸ್ತಿ ತಂತ್ರಾಂಶದಲ್ಲಿ ನಮೂನೆ 2ಎ/ 3ಎ ಸೃಜಿಸಿ ನೀಡಬಹುದಾಗಿದೆ.

    ಅನಧಿಕೃತ ಸ್ವತ್ತುಗಳಿಗೆ ನಮೂನೆ 2ಎ/ 3ಎ ನೀಡಿದ್ದಲ್ಲಿ ಸಕ್ರಮಗೊಳಿಸಿದಂತಾಗುವುದೇ?

    ಇಲ್ಲ. ಆಸ್ತಿ ತೆರಿಗೆ ವಿಧಿಸುವ ಉದ್ದೇಶಕ್ಕಾಗಿ ಪ್ರತ್ಯೇಕ ವಹಿಯಲ್ಲಿ ಅನಧಿಕೃತ ಸ್ವತ್ತುಗಳನ್ನು ದಾಖಲಿಸಿ ನಿರ್ವಹಿಸಲಾಗುತ್ತಿದೆ.

    ಇ-ಖಾತಾ ಪಡೆಯಲು ಸಮಸ್ಯೆಗಳಿದ್ದಲ್ಲಿ ಯಾರನ್ನು ಸಂಪರ್ಕಿಸಬೇಕು?

    ಸಂಬಂಧಿಸಿದ ನಗರ ಸ್ಥಳೀಯ ಸಂಸ್ಥೆಯಲ್ಲಿ ಸ್ಥಾಪಿಸಲಾಗಿರುವ ಸಹಾಯವಾಣಿಯನ್ನು ಸಂಪರ್ಕಿಸುವುದು. ಇ-ಖಾತಾ ಪಡೆಯಲು ಸಮಸ್ಯೆಗಳಿದ್ದಲ್ಲಿ ರಾಜ್ಯ ಮಟ್ಟದಲ್ಲಿ ರಾಜ್ಯ ಮಟ್ಟದಲ್ಲಿ ಸ್ಥಾಪಿಸಲಾದ ಸಹಾಯವಾಣಿ 6366674001 ಸಂಪರ್ಕಿಸಬಹುದಾಗಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading