Friday, November 6, 2026
spot_img
More
    spot_img
    HomeStateDistrictಅಧಿಕಾರ ಈಗ ಮತ್ತು ಭವಿಷ್ಯದಲ್ಲಿಯೂ ಭದ್ರ: ಸಿದ್ದರಾಮಯ್ಯ

    ಅಧಿಕಾರ ಈಗ ಮತ್ತು ಭವಿಷ್ಯದಲ್ಲಿಯೂ ಭದ್ರ: ಸಿದ್ದರಾಮಯ್ಯ

    ಕರ್ನಾಟಕದ ಕಾಂಗ್ರೆಸ್ ಸರ್ಕಾರ ನವೆಂಬರ್ 20ಕ್ಕೆ ಎರಡೂವರೆ ವರ್ಷವನ್ನು ಪೂರ್ಣಗೊಳಿಸಿದೆ. 2023ರ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದ ಬಳಿಕ ಮೇ 20ರಂದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು.

    ಮುಖ್ಯಮಂತ್ರಿ ಗುರುವಾರ ಚಾಮರಾಜನಗರ ಪ್ರವಾಸದಲ್ಲಿದ್ದಾರೆ. ಅಲ್ಲಿ‌ ಆಯೋಜಿಸಿದ್ದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ಚಾಮರಾಜನಗರಕ್ಕೆ ಮುಖ್ಯಮಂತ್ರಿಗಳು ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮಾತನ್ನು ಅವರು ಈಗಾಗಲೇ ಸುಳ್ಳಾಗಿಸಿದ್ದಾರೆ. ಇಂದು ಚಾಮರಾಜನಗರದಲ್ಲಿ ಈ ಕುರಿತು ಸಹ ಸಿದ್ದರಾಮಯ್ಯ ಅವರು ಮಾತನಾಡಿದರು.

    ಸಿದ್ದರಾಮಯ್ಯ ಹೇಳಿದ್ದೇನು?: “ಮೂಢನಂಬಿಕೆ ಮತ್ತು ಕಂದಾಚಾರಗಳನ್ನು ನಂಬುವುದಿಲ್ಲವಾದ್ದರಿಂದ ಚಾಮರಾಜನಗರಕ್ಕೆ ಭೇಟಿ ನೀಡುತ್ತಿರುತ್ತೇನೆ. ರಾಜ್ಯದ ಎಲ್ಲ ಜಿಲ್ಲೆಗಳನ್ನೂ ಸಮಾನವಾಗಿ ಕಂಡು, ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡುತ್ತೇನೆ. ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಆ ಮೌಢ್ಯವನ್ನು ಹೋಗಲಾಡಿಸಲು ಇಲ್ಲಿಗೆ ಭೇಟಿ ನೀಡಿದ್ದು, ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರವಾಗಿರುತ್ತದೆ” ಎಂದರು.

    “ನವೆಂಬರ್ ಕ್ರಾಂತಿ ಎನ್ನುವುದು ಮಾಧ್ಯಮಗಳ‌ ಸೃಷ್ಟಿ. ಈ ಬಗ್ಗೆ ಯಾರ ಹೇಳಿಕೆಗೂ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ರಾಜ್ಯದಲ್ಲಿ ನಮ್ಮ ಪಕ್ಷವು ಐದು ವರ್ಷ ಆಡಳಿತ ನಡೆಸಲು ಜನಾದೇಶ ಇದೆ. ನಮ್ಮ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಭರವಸೆಯನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ನವೆಂಬರ್ ಕ್ರಾಂತಿ ಎಂಬ ವಿಷಯವನ್ನು ಮಾಧ್ಯಮದವರೇ ಸೃಷ್ಟಿಸಿದರು. ಜನರ ಆಸೆಯಂತೆ ಐದು ವರ್ಷ ಸರ್ಕಾರ ನಡೆಸಿ ನಂತರವೂ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

    “ಐದು ವರ್ಷವೂ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೀನೆ, ಇಲ್ಲವಾ ಎಂಬುದೇ ಅನಾವಶ್ಯಕ ಚರ್ಚೆ. ಎರಡೂವರೆ ವರ್ಷದ ನಂತರ ಸಂಪುಟ ಪುನರ್ ರಚನೆ ಮಾಡಬಹುದು ಎಂದು ತಿಳಿಸಿದ್ದೆ. ನಂತರವಷ್ಟೇ ಮುಖ್ಯಮಂತ್ರಿ ಬದಲಾವಣೆಯ ವಿಷಯ ಮುನ್ನಲೆಗೆ ಬಂದಿರುವುದು. ಸಂಪುಟ ಪುನರ್ ರಚನೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳಬೇಕಿದೆ. ಒಟ್ಟು 34 ಸಚಿವರ ಸ್ಥಾನವಿದ್ದು, ಅದರಲ್ಲಿ ಎರಡು ಸ್ಥಾನಗಳು ಖಾಲಿಯಿದೆ. ಸಂಪುಟ ಪುನರ್ ರಚನೆ ಸಂದರ್ಭದಲ್ಲಿ ಈ ಖಾಲಿ ಸಚಿವ ಸ್ಥಾನಗಳನ್ನು ಭರ್ತಿ ಮಾಡಲಾಗುವುದು” ಎಂದು ತಿಳಿಸಿದರು.

    “ಬೆಂಗಳೂರಿನಲ್ಲಿ ನಡೆದ ಎಟಿಎಂ ವಾಹನ ದರೋಡೆ ಬಗ್ಗೆ ಸುಳಿವು ಸಿಕ್ಕಿದ್ದು, ಘಟನೆಗೆ ಬಳಸಿದ ಕಾರು ಪೊಲೀಸರಿಗೆ ದೊರಕಿದೆ. ಬ್ಯಾಂಕ್ ದರೋಡೆಯ ಅಪರಾಧಿಗಳನ್ನು ಶೀಘ್ರದಲ್ಲಿ ಬಂಧಿಸಲಾಗುವುದು” ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರ ಕೊಟ್ಟರು.

    “ರಾಜ್ಯದಲ್ಲಿ ಅಧಿಕ ಮಳೆಯುಂಟಾಗಿದ್ದು, ಅದರಿಂದ ಹಾನಿಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಭೇಟಿಯ ಸಂದರ್ಭದಲ್ಲಿ ಪರಿಹಾರ ಕೇಳಲಾಗಿದೆ. ಕಬ್ಬು ಬೆಳೆಗಾರರ ಸಮಸ್ಯೆ ಹಾಗೂ ರೈತರು, ಕಾರ್ಖಾನೆ ಮಾಲೀಕರೊಂದಿಗೆ ನಡೆಸಿದ ಚರ್ಚೆಗಳ ಬಗ್ಗೆ ವಿವರಿಸಲಾಯಿತು. 11.25 ಇಳುವರಿಯಿರುವ ಕಬ್ಬು ಬೆಳೆಯ ಒಂದು ಟನ್ ಗೆ ( ಕಟಾವು ಮತ್ತು ಸಾಗಣೆ ವೆಚ್ಚ ಹೊರತುಪಡಿಸಿ) 3,300 ರೂ. ನೀಡುವ ತೀರ್ಮಾನಕ್ಕೆ ರೈತರು ಹಾಗೂ ಕಾರ್ಖಾನೆಯವರು ಸಮ್ಮತಿಸಿದ್ದಾರೆ” ಎಂದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search