ಕರ್ನಾಟಕ ಲೋಕಸೇವಾ ಆಯೋಗ ಕೃಷಿ ಇಲಾಖೆ ನೇಮಕಾತಿ ಅಧಿಸೂಚನೆಯೊಂದನ್ನು ರದ್ದುಗೊಳಿಸಿ ಆದೇಶಿಸಿದೆ. ಒಟ್ಟು 273 ಹುದ್ದೆಗಳಿಗೆ ಹೊರಡಿಸಲಾಗಿದ್ದ ಅಧಿಸೂಚನೆಯನ್ನು ರದ್ದುಗೊಳಿಸಲಾಗಿದೆ ಎಂದು ಡಾ.ವಿಶಾಲ್.ಆರ್, ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಆಯೋಗದ ಅಧಿಸೂಚನೆ ಸಂಖ್ಯೆ: ಪಿಎಸ್ ಸಿ 1 ಆರ್ ಟಿ ಬಿ 4/2024, ದಿನಾಂಕ 20-09-2024 ಮತ್ತು ತಿದ್ದುಪಡಿ ಅಧಿಸೂಚನೆ ದಿ: 31-12-2024, ಸರ್ಕಾರದ ಸುತ್ತೋಲೆ ಸಂಖ್ಯೆ: ಸಿಆಸುಇ 388 ಸೇನೆನಿ 2024ಭಾ-3 ದಿನಾಂಕ 04-09-2025 ಮತ್ತು ಆಯೋಗದ ಸಭೆಯ ನಡವಳಿಗಳ ದಿನಾಂಕ 28-10-2025 ಉಲ್ಲೇಖಿಸಿದ್ದಾರೆ.
ಅಧಿಸೂಚನೆ ರದ್ದು ವಿವರಗಳು: ಆಯೋಗದಿಂದ ಉಲ್ಲೇಖಿತ ಅಧಿಸೂಚನೆಯಲ್ಲಿ ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021ರನ್ವಯ ಹೈ.ಕ ವೃಂದದಲ್ಲಿನ ಇಲಾಖೆಯ ಕೆಳಕಂಡ ಗ್ರೂಪ್-‘ಬಿ’ ವೃಂದದ ಹುದ್ದೆಗಳಿಗೆ ದಿನಾಂಕ 20-09-2024ರಂದು ಮೂಲ ಅಧಿಸೂಚನೆಯನ್ನು ಮತ್ತು ದಿನಾಂಕ 31-12-2024ರಂದು ತಿದ್ದುಪಡಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು.
ಹುದ್ದೆಯ ಪದನಾಮ ಕೃಷಿ ಅಧಿಕಾರಿಗಳು 42 ಹುದ್ದೆ, ಸಹಾಯಕ ಕೃಷಿ ಅಧಿಕಾರಿಗಳು 231 ಹುದ್ದೆಗಳು. ಸರ್ಕಾರದ ಸುತ್ತೋಲೆ ಸಂಖ್ಯೆ ಸಿಆಸುಇ 388 ಸೇನನಿ 2024ಭಾ-3 ದಿನಾಂಕ 04-09-2025ರಲ್ಲಿ ಈ ಕೆಳಕಂಡಂತೆ ಆದೇಶಿಸಿರುತ್ತದೆ. ದಿನಾಂಕ 28-10-2024ರ ಹಿಂದೆ ನೇರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ, ದಿನಾಂಕ 28-10-2024ರ ನಂತರ ಸರ್ಕಾರದ ಯಾವುದೇ ಇಲಾಖೆ/ ಮಂಡಳಿ/ ನಿಗಮ/ ಸ್ವಾಯತ್ತ ಸಂಸ್ಥೆಗಳ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಸಂಬಂಧಿಸಿದ ನೇಮಕಾತಿ ಪ್ರಾಧಿಕಾರಗಳೂ ಯಾವುದಾದರೂ ತಿದ್ದುಪಡಿ ಅಧಿಸೂಚನೆಗಳನ್ನು ಹೊರಡಿಸಿದಲ್ಲಿ ಅಂತಹ ಎಲ್ಲಾ ನೇಮಕಾತಿ ಅಧಿಸೂಚನೆಗಳನ್ನೂ ಸಹ ರದ್ದುಗೊಳಿಸಬೇಕು.
ಪರಿಶಿಷ್ಟ ಜಾತಿ ಒಳ ಮೀಸಲಾತಿಯನ್ನು ಅಳವಡಿಸಿಕೊಂಡು ಹೊಸದಾಗಿ ನೇಮಕಾತಿ ಅಧಿಸೂಚನೆ ಹೊರಡಿಸಬೇಕೆಂದೂ ಸಹ ಹಾಗೂ ಕಾಲಬದ್ಧವಾಗಿ (Time Bound) ನೇಮಕಾತಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಆಯ್ಕೆ ಪ್ರಾಧಿಕಾರಗಳಿಗೆ ಸೂಚಿಸಲಾಗಿದೆ ಎಂದು ಹೇಳಿದೆ.
ಈ ಮೇಲ್ಕಂಡ ಸುತ್ತೋಲೆಯಂತೆ ದಿನಾಂಕ 28-10-2024ರ ನಂತರ ಹೊರಡಿಸಲಾಗಿರುವ ಅಧಿಸೂಚನೆ/ ತಿದ್ದುಪಡಿ ಅಧಿಸೂಚನೆಗಳನ್ನು ರದ್ದುಪಡಿಸಿ, ಹೊಸದಾಗಿ ಅಧಿಸೂಚನೆ ಹೊರಡಿಸಬೇಕಿರುವುದರಿಂದ, ಪ್ರಸ್ತುತ ಆಯೋಗದ ಅಧಿಸೂಚನೆ ಸಂಖ್ಯೆ: ಪಿಎಸ್ ಸಿ 1 ಆರ್ ಟಿಬಿ 4/2024, ದಿನಾಂಕ 20-09-2024 ಮತ್ತು ತಿದ್ದುಪಡಿ ಅಧಿಸೂಚನೆ ದಿ: 31-12-2024ರನ್ವಯ ಹೈ.ಕ ವೃಂದದಡಿ ಅಧಿಸೂಚಿಸಲಾಗಿದ್ದ ಕೃಷಿ ಅಧಿಕಾರಿ 42 ಮತ್ತು ಸಹಾಯಕ ಕೃಷಿ ಅಧಿಕಾರಿ 231 ಹುದ್ದೆಗಳ ಅಧಿಸೂಚನೆಯನ್ನು ರದ್ದುಪಡಿಸಲಾಗಿದೆ ಎಂದು ಸ್ಪಷ್ಟಪಡಿಸಲಾಗಿದೆ.
ಹೊಸ ಪರೀಕ್ಷಾ ವೇಳಾಪಟ್ಟಿ ಪ್ರಕಟ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊಸ ಪರೀಕ್ಷಾ ವೇಳಾಪಟ್ಟಿ ಕುರಿತು ಮಾಹಿತಿ ನೀಡಿದೆ. ಕರ್ನಾಟಕ ವಿದ್ಯುತ್ ನಿಗಮದಲ್ಲಿ ಖಾಲಿ ಇರುವ ಸಹಾಯಕ ಎಂಜಿನಿಯರ್, ಕಿರಿಯ ಎಂಜಿನಿಯರ್ ಸೇರಿದಂತೆ ಇತರ ಹುದ್ದೆಗಳಿಗೆ ನಡೆಸಲಾಗಿದ್ದ ಪರೀಕ್ಷೆಯನ್ನು ಸುಪ್ರೀಂಕೋರ್ಟ್ ರದ್ದುಪಡಿಸಿರುವ ಹಿನ್ನೆಲೆಯಲ್ಲಿ ಹೊಸದಾಗಿ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಹೇಳಿದೆ.
ಡಿಸೆಂಬರ್ 27 ಮತ್ತು 28ರಂದು ಮರು ಪರೀಕ್ಷೆ ನಡೆಸಲಾಗುತ್ತದೆ. ಅಭ್ಯರ್ಥಿಗಳು ವೆಬ್ ಸೈಟ್ ನಲ್ಲಿ ಬಿಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಯಾವ ಹುದ್ದೆಗೆ ಅರ್ಜಿ ಸಲ್ಲಿಸಲಾಗಿತ್ತು ಇತ್ಯಾದಿ ಮಾಹಿತಿಯನ್ನು ನಮೂದಿಸಬೇಕು.
ಹೆಚ್ಚಿನ ವಿವರಗಳಿಗೆ KEA ವೆಬ್ ಸೈಟ್ ನೋಡುವುದು ಎಂದು ಹೆಚ್.ಪ್ರಸನ್ನ, ಕಾರ್ಯನಿರ್ವಾಹಕ ನಿರ್ದೇಶಕರು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


