ಚಾಮರಾಜನಗರ: ಜಿಲ್ಲೆಯ ಹನೂರು ಪಟ್ಟಣದ ಹೊರವಲಯದಲ್ಲಿ ಆಂಬುಲೆನ್ಸ್‌ನಲ್ಲಿ ಗರ್ಭಿಣಿಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಎಲ್ಲೆಮಾಳ ಮುಖ್ಯರಸ್ತೆಯ ಕಣಿವೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ.
ಕುರಟ್ಟಿ ಹೊಸೂರು ಗ್ರಾಮದ ಶಿಲ್ಪಾ ಅವರಿಗೆ ಮಂಗಳವಾರ ಸಂಜೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಆಂಬುಲೆನ್ಸ್‌ನಲ್ಲಿ ಕೌದಳ್ಳಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು.
ಅಲ್ಲಿನ ವೈದ್ಯರ ಸಲಹೆಯಂತೆ ಕೊಳ್ಳೇಗಾಲಕ್ಕೆ ಹೋಗುವಾಗಲೇ ಮಾರ್ಗ ಮಧ್ಯದಲ್ಲಿ ಆಂಬುಲೆನ್ಸ್‌ನಲ್ಲಿ ಹೆರಿಗೆಯಾಗಿದೆ.
ಆಂಬುಲೆನ್ಸ್ ಸಿಬ್ಬಂದಿ ರಾಣಿ, ನಾಗರಾಜು ಅವರು ಸಕಾಲಕ್ಕೆ ಚಿಕಿತ್ಸೆ ನೀಡಿ ಸುಸೂತ್ರವಾಗಿ ಹೆರಿಗೆ ಮಾಡಿಸಿದ್ದಾರೆ. ತಾಯಿ, ಮಗು ಆರೋಗ್ಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಜೆಡಿಎಸ್ ಪಕ್ಷಕ್ಕೆ 25 ವರ್ಷ: ಬೆಳ್ಳಿಹಬ್ಬ ಆಚರಣೆಗೆ ನಿರ್ಧಾರ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


