ಬ್ಯಾಂಕ್ ಆಫ್ ಬರೋಡಾ (Bank of Baroda – BoB) ದೇಶಾದ್ಯಂತ ಇರುವ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಒಟ್ಟು 82 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನವೆಂಬರ್ 19, 2025 ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಮ್ಯಾನೇಜರ್ ಮತ್ತು ಡೆಪ್ಯೂಟಿ ಮ್ಯಾನೇಜರ್ ಸೇರಿದಂತೆ ವಿವಿಧ ವಿಭಾಗಗಳ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ,ಯಾವುದೇ ಲಿಖಿತ ಪರೀಕ್ಷೆಯಿಲ್ಲದೆ ಶೈಕ್ಷಣಿಕ ಅರ್ಹತೆ, ಅನುಭವ ಮತ್ತು ಸಂದರ್ಶನದ ಆಧಾರದ ಮೇಲೆ ಅಂತಿಮ ಆಯ್ಕೆಯನ್ನು ಮಾಡಲಾಗುತ್ತದೆ.
ಬ್ಯಾಂಕ್ ಆಫ್ ಬರೋಡಾ (Bank of Baroda – BoB) 2025ರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ.
ಒಟ್ಟು ಹುದ್ದೆಗಳು: 82
ಹುದ್ದೆಗಳ ಹೆಸರು: ಫ್ಲೋರ್ ಮ್ಯಾನೇಜರ್ (Floor Manager), ಪ್ರೊಸೆಸ್ ಮ್ಯಾನೇಜರ್ (Process Manager) ಮತ್ತು ಇತರ ಹುದ್ದೆಗಳು.
ವಿದ್ಯಾರ್ಹತೆ: ಯಾವುದೇ ಪದವಿ (Any Graduate), MBA/PGDM, PG ಡಿಪ್ಲೋಮಾ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ದಿನಾಂಕಗಳು:
ಆನ್‌ಲೈನ್ ಅರ್ಜಿ ಪ್ರಾರಂಭ: 19-11-2025
ಆನ್‌ಲೈನ್ ಅರ್ಜಿ ಮುಕ್ತಾಯ: 09-12-2025
ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಬ್ಯಾಂಕ್ ಆಫ್ ಬರೋಡಾದ ಅಧಿಕೃತ ವೆಬ್‌ಸೈಟ್ ಆದ bankofbaroda.bank.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.
ಅರ್ಜಿ ಶುಲ್ಕ;ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್ ಅಭ್ಯರ್ಥಿಗಳು ರೂ. 850 ಶುಲ್ಕವನ್ನು ಪಾವತಿಸಬೇಕಾಗುತ್ತದೆ, ಎಸ್‌ಸಿ, ಎಸ್‌ಟಿ, ಪಿಡಬ್ಲ್ಯೂಬಿಡಿ ಮತ್ತು ಮಹಿಳಾ ಅಭ್ಯರ್ಥಿಗಳು ತಲಾ ರೂ. 175 ಶುಲ್ಕವನ್ನು ಪಾವತಿಸಬೇಕಾಗುತ್ತದೆ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


