ಮಂಡ್ಯ: ಇಂದಿನಿಂದ ( ಡಿಸೆಂಬರ್ 20 ) ಮೂರು ದಿನಗಳ ಕಾಲ ನಡೆಯಲಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ದೊರೆತಿದೆ.
ಬೆಳಗ್ಗೆ 6.30ಕ್ಕೆ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಗೊ.ರು. ಚನ್ನಬಸಪ್ಪ ನೇತೃತ್ವದಲ್ಲಿ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಎನ್ ಚಲುವರಾಯಸ್ವಾಮಿ ಅವರು ರಾಷ್ಟ್ರ ಧ್ವಜಾರೋಹಣ ಮಾಡಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಹಾಗೂ ಸಮ್ಮೇಳನ ಸ್ವಾಗತ ಸಮಿತಿಯ ಗೌರವ ಕಾರ್ಯಾಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣ ನೆರವೇರಿಸಿದರು. ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಚಾಲಕಿ ಮೀರಾ ಶಿವಲಿಂಗಯ್ಯ ನಾಡ ಧ್ವಜಾರೋಹಣ ಮಾಡಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


