Thursday, March 19, 2026
spot_img
More
    spot_img
    HomeLatest newsಬ್ಯಾಂಬೂ ಆರ್ಕಿಡ್ಸ್ ಪರಿಕಲ್ಪನೆ: ಮೋದಿ ಉದ್ಘಾಟಿಸಿದ ಗುವಾಹಟಿ ಏರ್‌ಪೋರ್ಟ್‌ ಟರ್ಮಿನಲ್ ವಿಶೇಷತೆಗಳು

    ಬ್ಯಾಂಬೂ ಆರ್ಕಿಡ್ಸ್ ಪರಿಕಲ್ಪನೆ: ಮೋದಿ ಉದ್ಘಾಟಿಸಿದ ಗುವಾಹಟಿ ಏರ್‌ಪೋರ್ಟ್‌ ಟರ್ಮಿನಲ್ ವಿಶೇಷತೆಗಳು

    ಪ್ರಧಾನಿ ನರೇಂದ್ರ ಮೋದಿ ಅಸ್ಸಾಂನ ಗುವಾಹಟಿ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಉದ್ಘಾಟಿಸಿದರು. ಬ್ಯಾಂಬೂ ಆರ್ಕಿಡ್ಸ್ ಪರಿಕಲ್ಪನೆಯಲ್ಲಿ ನಿರ್ಮಾಣಗೊಂಡಿರುವ ಲೋಕಪ್ರಿಯ ಗೋಪಿನಾಥ್ ಬೊರ್ಡೊಲೋಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡ ವಿಶೇಷ ವಿನ್ಯಾಸದ ಮೂಲಕ ಗಮನ ಸೆಳೆಯುತ್ತಿದೆ.

    ಡಿಸೆಂಬರ್ 20 ಮತ್ತು 21ರಂದು ನರೇಂದ್ರ ಮೋದಿ ಅಸ್ಸಾಂ ಪ್ರವಾಸ ಕೈಗೊಂಡಿದ್ದಾರೆ. ಶನಿವಾರ ಅವರು ವಿಮಾನ ನಿಲ್ದಾಣದ ಟರ್ಮಿನಲ್ ಲೋಕಾರ್ಪಣೆ ಮಾಡಿದ್ದಾರೆ. ಭಾನುವಾರ ಬೆಳಗ್ಗೆ ಅವರು ಗುವಾಹಟಿಯ ಬೊರಗಾಂನಲ್ಲಿರುವ ಸ್ವಾಹಿದ್ ಸ್ಮಾರಕ ಕ್ಷೇತ್ರಕ್ಕೆ ಭೇಟಿ ನೀಡಿ ಹುತಾತ್ಮರಿಗೆ ಗೌರವ ನಮನ ಸಲ್ಲಿಸಲಿದ್ದಾರೆ. ನಂತರ ದಿಬ್ರುಗಢ ಜಿಲ್ಲೆಯ ನಮ್ರೂಪ್‌ನಲ್ಲಿ ‘ಅಸ್ಸಾಂ ವ್ಯಾಲಿ ಫರ್ಟಿಲೈಸರ್ ಅಂಡ್ ಕೆಮಿಕಲ್ ಕಂಪನಿ ಲಿಮಿಟೆಡ್’ನ ಅಮೋನಿಯಾ-ಯೂರಿಯಾ ಯೋಜನೆಗೆ ಶಂಕು ಸ್ಥಾಪನೆ ಮಾಡಲಿದ್ದಾರೆ.

    ವಿಮಾನ ನಿಲ್ದಾಣದ ವಿಶೇಷತೆಗಳು: ಶನಿವಾರ ಮಧ್ಯಾಹ್ನ ನರೇಂದ್ರ ಮೋದಿ ಗುವಾಹಟಿಯ ಲೋಕಪ್ರಿಯ ಗೋಪಿನಾಥ್ ಬೋರ್ಡೊಲೊಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಕಟ್ಟಡ ಉದ್ಘಾಟಿಸಿದರು. ಇದು ಅಸ್ಸಾಂನ ಸಂಪರ್ಕ ವ್ಯವಸ್ಥೆ, ಆರ್ಥಿಕ ವಿಸ್ತರಣೆ ಮತ್ತು ಜಾಗತಿಕ ಸಹಭಾಗಿತ್ವದಲ್ಲಿ ಒಂದು ಪರಿವರ್ತನಾಕಾರಿ ಮೈಲ್ಲುಲಾಗಿದೆ.

    ಸುಮಾರು 1.4 ಲಕ್ಷ ಚದರ ಮೀಟರ್ ಪ್ರದೇಶದಲ್ಲಿ ವಿಸ್ತಾರಗೊಂಡಿರುವ, ಹೊಸ ಟರ್ಮಿನಲ್ ಕಟ್ಟಡವನ್ನು ವಾರ್ಷಿಕವಾಗಿ 1.3 ಕೋಟಿ ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯದೊಂದಿಗೆ ವಿನ್ಯಾಸಗೊಳಿಸಲಾಗಿದೆ. ರನ್ ವೇ, ಏರ್ಫೀಲ್ಡ್ ವ್ಯವಸ್ಥೆಗಳು, ಏಪ್ರನ್‌ಗಳು ಮತ್ತು ಟ್ಯಾಕ್ಸಿವೇಗಳನ್ನು ನೂತನ ಟರ್ಮಿನಲ್ ಒಳಗೊಂಡಿದೆ.

    ಭಾರತದ ಮೊದಲ ಪ್ರಕೃತಿ-ಆಧಾರಿತ (nature-themed) ವಿಮಾನ ನಿಲ್ದಾಣದ ಟರ್ಮಿನಲ್ ಇದಾಗಿದೆ. ಇದರ ವಿನ್ಯಾಸ ಬ್ಯಾಂಬೂ ಆರ್ಕಿಡ್ಸ್ (Bamboo Orchids) ಎಂಬ ಪರಿಕಲ್ಪನೆಯ ಅಡಿಯಲ್ಲಿ ಅಸ್ಸಾಂನ ಜೀವವೈವಿಧ್ಯ ಮತ್ತು ಸಾಂಸ್ಕೃತಿಕ ಪರಂಪರೆಯಿಂದ ಸ್ಫೂರ್ತಿ ಪಡೆದಿದೆ.

    ಈ ಟರ್ಮಿನಲ್ ನಿರ್ಮಾಣಕ್ಕೆ ಈಶಾನ್ಯ ಭಾರತದ ಸ್ಥಳೀಯ ಸುಮಾರು 140 ಮೆಟ್ರಿಕ್ ಟನ್ ಬಿದಿರನ್ನು ಪ್ರಥಮ ಬಾರಿಗೆ ಬಳಸಲಾಗಿದೆ. ಇದರೊಂದಿಗೆ ಕಾಜಿರಂಗದಿಂದ ಸ್ಫೂರ್ತಿ ಪಡೆದ ಹಸಿರು ಭೂದೃಶ್ಯಗಳು, ಅಸ್ಸಾಂನ ಸಾಂಪ್ರದಾಯಿಕ ‘ಜಾಪಿ’ ಕಲೆಗಳು, ಪ್ರಖ್ಯಾತ ಖಡ್ಗಮೃಗದ ಚಿಹ್ನೆ ಹಾಗೂ ‘ಕೊಪೌ’ ಹೂವನ್ನು ಪ್ರತಿಬಿಂಬಿಸುವ 57 ಆರ್ಕಿಡ್ ಮಾದರಿಯ ಸ್ತಂಭಗಳು ಟರ್ಮಿನಲ್ ಸೌಂದರ್ಯ ಹೆಚ್ಚಿಸಿವೆ.

    ಇಲ್ಲಿನ ವಿಶಿಷ್ಟ ಆಕರ್ಷಣೆ “ಸ್ಕೈ ಫಾರೆಸ್ಟ್”. ಸುಮಾರು ಒಂದು ಲಕ್ಷ ಸ್ಥಳೀಯ ತಳಿಗಳ ಸಸ್ಯಗಳನ್ನು ಹೊಂದಿದ್ದು, ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರಿಗೆ ದಟ್ಟವಾದ ಕಾಡಿನ ಒಳಗಿರುವಂತಹ ಅದ್ಭುತ ಅನುಭವವನ್ನು ನೀಡುತ್ತದೆ.

    ಈ ಟರ್ಮಿನಲ್ ಪ್ರಯಾಣಿಕರ ಸೌಕರ್ಯ ಮತ್ತು ಡಿಜಿಟಲ್ ಆವಿಷ್ಕಾರದಲ್ಲಿ ಹೊಸ ತಂತ್ರಜ್ಞಾನವನ್ನು ಒಳಗೊಂಡಿದೆ. ವೇಗವಾದ ಮತ್ತು ಅಡೆತಡೆಯಿಲ್ಲದ ಭದ್ರತಾ ತಪಾಸಣೆಗಾಗಿ ಪೂರ್ಣ ದೇಹದ ಸ್ಕ್ಯಾನರ್, ಡಿಜಿಯಾತ್ರೆ-ಆಧಾರಿತ ಸಂಪರ್ಕ ರಹಿತ ಪ್ರಯಾಣ, ಸ್ವಯಂಚಾಲಿತ ಲಗೇಜ್ ನಿರ್ವಹಣೆ, ಫಾಸ್ಟ್ ಟ್ರ್ಯಾಕ್ ಇಮಿಗ್ರೇಷನ್ ಮತ್ತು ಕೃತಕ ಬುದ್ಧಿಮತ್ತೆ ಆಧಾರಿತ ವಿಮಾನ ನಿಲ್ದಾಣದ ಕಾರ್ಯಾಚರಣೆಗಳಂತಹ ವೈಶಿಷ್ಟ್ಯಗಳಿವೆ.

    ಸುಮಾರು 4,000 ಕೋಟಿ ರೂ. ವೆಚ್ಚದಲ್ಲಿ ಗುವಾಹಟಿ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ನಿರ್ಮಾಣ ಮಾಡಲಾಗಿದೆ. ಈಗ ಗುವಾಹಟಿ ವಿಮಾನ ನಿಲ್ದಾಣ ಎರಡು ಟರ್ಮಿನಲ್‌ಗಳನ್ನು ಒಳಗೊಂಡಿದೆ. ಟರ್ಮಿನಲ್ ಉದ್ಘಾಟಿಸಿದ ಮೋದಿ ಬ್ಯಾಂಬೂ ಆರ್ಕಿಡ್ಸ್ ಪರಿಕಲ್ಪನೆಯ ನಿರ್ಮಾಣವನ್ನು ವೀಕ್ಷಿಸಿದರು, ಟರ್ಮಿನಲ್‌ನಲ್ಲಿ ಒಂದು ಸುತ್ತು ವಾಕ್ ಮಾಡಿದರು.

    ಗುವಾಹಟಿ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಅನ್ನು ಕಾರ್ಯಾಚರಣೆ ಮತ್ತು ನಿರ್ವಹಣೆ ಎಂಬ ಷರತ್ತಿನ ಒಪ್ಪಂದದ ಮೂಲಕ ನಿರ್ಮಾಣ ಮಾಡಲಾಗಿದೆ. 1000 ಕೋಟಿ ರೂ.ವನ್ನು ನಿರ್ವಹಣೆಗಾಗಿಯೇ ಮೀಸಲಿಡಲಾಗಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಗರ್ಭಧಾರಣೆ ಘೋಷಿಸಿದ ತಿಂಗಳಲ್ಲೇ ಯೂಟ್ಯೂಬರ್ ಪತ್ನಿ ಹತ್ಯೆ—ಪತಿಯ ಭೀಕರ ಕೃತ್ಯ!

    ತೆಲಂಗಾಣದಲ್ಲಿ ನಡೆದ ಈ ದಾರುಣ ಘಟನೆ ದೇಶದಾದ್ಯಂತ ಆತಂಕ ಮೂಡಿಸಿದೆ. “ಯೂಟ್ಯೂಬರ್ ಪತ್ನಿ ಹತ್ಯೆ” ಪ್ರಕರಣ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ತನ್ನ ಗರ್ಭಧಾರಣೆಯನ್ನು ಸ್ವತಃ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ...

    ಐಪಿಎಲ್ 2026: ಇಶಾನ್ ಕಿಶನ್ ಕೈಗೆ SRH ನಾಯಕತ್ವ—ಅಭಿಷೇಕ್ ಶರ್ಮಾಗೆ ಹೊಸ ಜವಾಬ್ದಾರಿ!

    ಐಪಿಎಲ್ 2026 ಕುರಿತು ದೊಡ್ಡ ಅಪ್‌ಡೇಟ್ ಹೊರಬಿದ್ದಿದೆ! “ಐಪಿಎಲ್ 2026 ಇಶಾನ್ ಕಿಶನ್ SRH ನಾಯಕ” ಎಂಬ ಸುದ್ದಿ ಈಗ ಕ್ರಿಕೆಟ್ ವಲಯದಲ್ಲಿ ಸದ್ದು ಮಾಡುತ್ತಿದೆ. ಸನ್‌ರೈಸರ್ಸ್ ಹೈದರಾಬಾದ್ ತಂಡದಲ್ಲಿ ಮಹತ್ವದ ಬದಲಾವಣೆಗಳಾಗಿದ್ದು,...

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading