Monday, November 2, 2026
spot_img
More
    spot_img
    HomeLatest newsಮುಂದಿನ 3 ದಿನಗಳಲ್ಲಿ ಡಿಕೆಶಿ ಸಿಎಂ ಆಗಬೇಕು ಇಲ್ಲದಿದ್ದರೆ ರಾಜ್ಯದಲ್ಲಿ ಕಾಂಗ್ರೆಸ್‌ ಇರಲ್ಲ: ಬೆಳಗಾವಿ ಸಮಾವೇಶದಲ್ಲಿ...

    ಮುಂದಿನ 3 ದಿನಗಳಲ್ಲಿ ಡಿಕೆಶಿ ಸಿಎಂ ಆಗಬೇಕು ಇಲ್ಲದಿದ್ದರೆ ರಾಜ್ಯದಲ್ಲಿ ಕಾಂಗ್ರೆಸ್‌ ಇರಲ್ಲ: ಬೆಳಗಾವಿ ಸಮಾವೇಶದಲ್ಲಿ ಕಾರ್ಯಕರ್ತರ ಆಕ್ರೋಶ

    ಬೆಳಗಾವಿ: ಮುಂದಿನ ಮೂರು ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು, ಇಲ್ಲವಾದರೆ ರಾಜ್ಯದಲ್ಲಿ ಕಾಂಗ್ರೆಸ್ ಇರುವುದಿಲ್ಲ ಎಂದು ಕೆಲವು ಕಾರ್ಯಕರ್ತರು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

    ಬೆಳಗಾವಿಯಲ್ಲಿಂದು ಕಾಂಗ್ರೆಸ್ ಸಮಾವೇಶದ ಸಂದರ್ಭದಲ್ಲಿ ಕೆಲ ಕಾರ್ಯಕರ್ತರು ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ಘೋಷಣೆ ಕೂಗಿದ್ದಾರೆ. ಕೆಲವರು ಡಿ.ಕೆ.ಶಿವಕುಮಾರ್‌ ಅವರ ಭಾವಚಿತ್ರ ಹಿಡಿದು ಪಕ್ಷಕ್ಕಾಗಿ ಕಷ್ಟಪಟ್ಟು ಕೆಲಸ ಮಾಡಿ ಹಗಲಿರುಳು ಶ್ರಮಿಸಿ 138 ಸ್ಥಾನಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ. ಅವರು ಮಾಡಿದ ಕೆಲಸಕ್ಕೆ ಕೂಲಿ ಸಿಗಬೇಕು ಎಂದು ಪ್ರತಿಪಾದಿಸಿದ್ದಾರೆ.

    ಕೊಪ್ಪಳ ಜಿಲ್ಲೆಯ ಯಲಬುರ್ಗದ ಡಿ.ಕೆ.ಶಿವಕುಮಾರ್ ಅಭಿಮಾನಿ ಬಳಗದ ಮುಖಂಡ ವೀರೇಶ್‍ಕುಮಾರ್‍ರವರು ಸುದ್ದಿಗಾರರೊಂದಿಗೆ ಮಾತನಾಡಿ, ಕೆಪಿಸಿಸಿ ಅಧ್ಯಕ್ಷರಾಗಿದ್ದವರು ಮೊದಲು ಮುಖ್ಯಮಂತ್ರಿಯಾಗಬೇಕಿತ್ತು. ಹೈಕಮಾಂಡ್ ಹೇಳಿದ್ದಕ್ಕಾಗಿ ಡಿ.ಕೆ.ಶಿವಕುಮಾರ್ ಸೋತಿದ್ದಾರೆ. ಸಿದ್ದರಾಮಯ್ಯನವರಿಗೆ ತಲೆಬಾಗಿದ್ದಲ್ಲ. ಕಾರ್ಯಕರ್ತರೂ ಕೂಡ ತಾಳೆಯಿಂದಿದ್ದಾರೆ. ಮುಂದಿನ ದಿನಗಳಲ್ಲಿ ಅವರು ಸಿಎಂ ಆಗದೇ ಇದ್ದರೆ ರಾಜ್ಯದಲ್ಲಿ ಕಾಂಗ್ರೆಸ್ ಅಲ್ಲೋಲಕಲ್ಲೋಲವಾಗುತ್ತದೆ ಎಂದು ಎಚ್ಚರಿಸಿದರು.

    ಕಟ್ಟಕಡೆಯ ಕಾರ್ಯಕರ್ತರನ್ನು ತಲುಪುವ ಏಕೈಕ ನಾಯಕ ಡಿ.ಕೆ.ಶಿವಕುಮಾರ್. ಕಾಂಗ್ರೆಸ್ ಪಕ್ಷಕ್ಕೆ ಕಷ್ಟ ಬಂದಾಗ ಅದನ್ನು ಜವಾಬ್ದಾರಿಯಿಂದ ನಿಭಾಯಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಹಲವಾರು ಮಂದಿ ಪೈಪೋಟಿ ಇರಬಹುದು. ಆದರೆ ಕಷ್ಟಪಟ್ಟು ಕೆಲಸ ಮಾಡಿದ ಡಿ.ಕೆ.ಶಿವಕುಮಾರ್ ಅವರಿಗೆ ಪ್ರತಿಫಲ ಸಿಗಬೇಕು ಎಂದು ಹೇಳಿದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search