ಬೆಳಗಾವಿ: ಐತಿಹಾಸಿಕ ಕಾರ್ಯಕ್ರಮಕ್ಕೆ ಬೆಳಗಾವಿಯಲ್ಲಿಂದು ನಡೆದಿದ್ದು, ಮಹಾತ್ಮ ಗಾಂಧೀಜಿ, ಅಂಬೇಡ್ಕರ್ ವಿಚಾರಧಾರೆಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಮತ್ತೊಮ್ಮೆ ತಮ್ಮ ಬಲ ಪ್ರದರ್ಶನ ಮಾಡಿದೆ.
ಇಂದು ಜೈ ಬಾಪು, ಜೈ ಭೀಮ್ ಮತ್ತು ಜೈ ಸಂವಿಧಾನ ಸಮಾವೇಶ ಹಲವು ನಿರೀಕ್ಷೆ ಮತ್ತು ಕುತೂಹಲಗಳಿಗೆ ಎಡೆಮಾಡಿಕೊಟ್ಟಿದೆ.
ಕುಂದಾನಗರಿ ಬೆಳಗಾವಿಯ ಸಿಪಿಇಡಿ ಮೈದಾನದಲ್ಲಿ ಜೈ ಬಾಪು, ಜೈ ಭೀಮ್ ಮತ್ತು ಜೈ ಸಂವಿಧಾನ ಸಮಾವೇಶ ನಡೆದಿದೆ.
1924ರಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶಕ್ಕೆ ಬೆಳಗಾವಿ ಸಾಕ್ಷಿಯಾಗಿತ್ತು. ಈಗ ಅಧಿವೇಶನದ ಶತಮಾನೋತ್ಸವದ ಭಾಗವಾಗಿ ಸಮಾವೇಶ ನಡೆಯುತ್ತಿದೆ.
ಕಾಂಗ್ರೆಸ್ ಪಕ್ಷದ ನಾಯಕರ ದಂಡೇ ಬೆಳಗಾವಿಯತ್ತ ಮುಖ ಮಾಡಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಮಾವೇಶದ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.
ಇನ್ನು ಈ ಸಮಾವೇಶಕ್ಕೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಅನಾರೋಗ್ಯದ ಕಾರಣ ಗೈರಾಗಿದ್ದಾರೆ. ಸಮಾವೇಶದಲ್ಲಿ ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಇತರ ನಾಯಕರು ಪಾಲ್ಗೊಂಡಿದ್ದಾರೆ.
ಇನ್ನು ಬೆಳಗಾವಿಯಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ 3500ಕ್ಕೂ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


