Wednesday, November 4, 2026
spot_img
More
    spot_img
    HomeLatest newsನಮ್ಮ ರಾಜ್ಯ ದರೋಡೆಕೋರರು ಹಾಗೂ ಅತ್ಯಾಚಾರಿಗಳ ತಾಣವಾಗಿದೆ: ಬಿ.ವೈ.ವಿಜಯೇಂದ್ರ ಆಕ್ರೋಶ

    ನಮ್ಮ ರಾಜ್ಯ ದರೋಡೆಕೋರರು ಹಾಗೂ ಅತ್ಯಾಚಾರಿಗಳ ತಾಣವಾಗಿದೆ: ಬಿ.ವೈ.ವಿಜಯೇಂದ್ರ ಆಕ್ರೋಶ

    ಬೆಂಗಳೂರು: ಸಂಸ್ಕೃತಿ, ಸಂಸ್ಕಾರ, ಸುರಕ್ಷತೆ ಎಂದರೆ ಕರ್ನಾಟಕ ಎಂಬ ಖ್ಯಾತಿ ಪಡೆದಿದ್ದ ನಮ್ಮ ರಾಜ್ಯ ದರೋಡೆಕೋರರು ಹಾಗೂ ಅತ್ಯಾಚಾರಿಗಳ ತಾಣ ಎಂಬ ಕುಖ್ಯಾತಿಗೆ ಒಳಗಾಗುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

    ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ರಾಜಧಾನಿ ಬೆಂಗಳೂರಿನ ಕೆ.ಆರ್.ಮಾರುಕಟ್ಟೆ ಬಳಿ ಬಸ್ಸಿಗಾಗಿ ಕಾಯುತ್ತಿದ್ದ ಒಬ್ಬಂಟಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಹಾಗೂ ದರೋಡೆ ನಡೆದಿರುವ ವರದಿ ಅತ್ಯಂತ ಹೇಯ ಹಾಗೂ ಅಮಾನವೀಯ ಘಟನೆಯಾಗಿದ್ದು, ಸ್ತ್ರೀ ಕುಲಕ್ಕೆ ರಕ್ಷಣೆ ನೀಡಲು ಸಾಧ್ಯವಾಗದ ಪರಿಸ್ಥಿತಿಗೆ ರಾಜ್ಯದ ಕಾನೂನು ಸುವ್ಯವಸ್ಥೆ ಬಂದು ತಲುಪಿದೆ.

    ಕೇವಲ ರಾಜ್ಯ ಸರ್ಕಾರದಲ್ಲೀಗ ನಡೆಯುತ್ತಿರುವುದು ಗುಂಪುಗಾರಿಕೆಯ ರಾಜಕಾರಣ ಹಾಗೂ ಕಾಂಗ್ರೆಸ್ ಉತ್ಸವಗಳು ಮಾತ್ರ. ಜನಹಿತ ಹಾಗೂ ಸಮಾಜ ಸುರಕ್ಷತೆಯನ್ನು ಮರೆತಿರುವ ಈ ಸರ್ಕಾರದ ವ್ಯವಸ್ಥೆಯಲ್ಲಿ ನಾಗರೀಕರು ಅಸುರಕ್ಷತೆಯ ವಾತಾವರಣ ಎದುರಿಸುತ್ತಿದ್ದಾರೆ. ಈ ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಇದೆಯೇ? ಗೃಹ ಇಲಾಖೆ ಇದೆಯೇ? ಒಂದು ಸರ್ಕಾರ ಈ ರಾಜ್ಯವನ್ನು ಆಳುತ್ತಿದೆಯೇ? ಎಂಬ ಪ್ರಶ್ನೆ ಜನಸಾಮಾನ್ಯರಿಂದ ಕೇಳಿ ಬರುತ್ತಿದೆ.

    ಒಂದು ಕಡೆ ಅಭಿವೃದ್ಧಿಯೂ ಇಲ್ಲ. ಮತ್ತೊಂದು ಕಡೆ ಆಡಳಿತ ನಿರ್ವಹಣೆಯಲ್ಲಿಯೂ ಸಂಪೂರ್ಣ ವಿಫಲ. ಕನಿಷ್ಠ ಕಾನೂನು ಸುರಕ್ಷಣೆಯನ್ನಾದರೂ ಒದಗಿಸಲಾಗದ ಈ ಸರ್ಕಾರ ಯಾವ ಮುಖ ಹೊತ್ತುಕೊಂಡು ಅಧಿಕಾರದಲ್ಲಿದೆ ಎಂದು ಜನ ಪ್ರಶ್ನಿಸುತ್ತಿದ್ದಾರೆ.

    ಸರಣಿ ರೂಪದಲ್ಲಿ ನಡೆಯುತ್ತಿರುವ ಕೊಲೆ, ದರೋಡೆ ಪ್ರಕರಣಗಳು, ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳಿಂದ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದ್ದು, ರಾಜ್ಯದಲ್ಲಿ ಅರಾಜಕತೆ ಪರಿಸ್ಥಿತಿ ಉಂಟಾಗಿರುವುದನ್ನು ಸಾಕ್ಷೀಕರಿಸುತ್ತಿದೆ. ಇಂತಹ ಘಟನೆಗಳು ಮರುಕಳಿಸುತ್ತಿದ್ದರೆ ಈ ಸರ್ಕಾರಕ್ಕೆ ಜನರೇ ತಕ್ಕಪಾಠ ಕಲಿಸುವ ಪರಿಸ್ಥಿತಿ ಉದ್ಭವಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಕಿಡಿಕಾರಿದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search