Tuesday, November 3, 2026
spot_img
More
    spot_img
    HomeTop StoryChampions Trophy 2025: ಬಾಂಗ್ಲಾ ವಿರುದ್ದ ಗೆದ್ದರೂ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿಲ್ಲ ಭಾರತ! ಕಾರಣವೇನು?

    Champions Trophy 2025: ಬಾಂಗ್ಲಾ ವಿರುದ್ದ ಗೆದ್ದರೂ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿಲ್ಲ ಭಾರತ! ಕಾರಣವೇನು?

    ದುಬೈ: ಇಲ್ಲಿನ ದುಬೈ ಅಂತರ್‌ರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಿನ್ನೆ (ಫೆಬ್ರವರಿ 20) ನಡೆದ ಐಸಿಸಿ ಚಾಂಪಿಯನ್ಸ್‌ ಟ್ರೋಫಿ 2025ರ ಗ್ರೂಪ್‌ ಹಂತದ ಎರಡನೇ ಪಂದ್ಯದಲ್ಲಿ ಭಾರತ ಬಾಂಗ್ಲಾದೇಶದ ವಿರುದ್ಧ 6 ವಿಕೆಟ್‌ಗಳ ಗೆಲುವನ್ನು ದಾಖಲಿಸಿತು.

    ಟಾಸ್‌ ಗೆದ್ದು ಬ್ಯಾಟಿಂಗ್‌ ಆರಿಸಿಕೊಂಡ ಬಾಂಗ್ಲಾದೇಶ 49.4 ಓವರ್‌ಗಳಲ್ಲಿ ವಿಕೆಟ್‌ ನಷ್ಟಕ್ಕೆ 228 ರನ್‌ ಕಲೆಹಾಕಿ 229 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ಭಾರತ 46.3 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 231 ರನ್‌ ಕಲೆಹಾಕಿತು.

    ಹೀಗೆ ಟೂರ್ನಿಯ ಮೊದಲನೇ ಪಂದ್ಯದಲ್ಲಿ ಗೆದ್ದು ಬೀಗಿರುವ ಭಾರತ ಅಂಕಪಟ್ಟಿಯಲ್ಲೇ ಎರಡನೇ ಸ್ಥಾನದಲ್ಲಿದೆ. ಮೊನ್ನೆ (ಫೆಬ್ರವರಿ 19) ನಡೆದ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಗೆದ್ದಿದ್ದ ನ್ಯೂಜಿಲೆಂಡ್‌ ಅಗ್ರಸ್ಥಾನದಲ್ಲಿದೆ.

    ಎರಡೂ ತಂಡಗಳು ಸಮನಾಗಿ 2 ಅಂಕ ಪಡೆದರೂ ಸಹ ಭಾರತಕ್ಕಿಂತ ನ್ಯೂಜಿಲೆಂಡ್‌ ತಂಡದ ನೆಟ್‌ ರನ್‌ ರೇಟ್‌ ಹೆಚ್ಚಿರುವ ಕಾರಣ ನ್ಯೂಜಿಲೆಂಡ್‌ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ.

    ನ್ಯೂಜಿಲೆಂಡ್‌ +1.200 ನೆಟ್‌ ರನ್‌ ರೇಟ್‌ ಪಡೆದುಕೊಂಡಿದ್ದು, ಭಾರತ +0.408 ನೆಟ್‌ ರನ್‌ ರೇಟ್‌ ಪಡೆದುಕೊಂಡಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search