Friday, August 7, 2026
spot_img
More
    spot_img
    HomeTop StoryIPL 2025: ಚೆನ್ನಾಗಿ ಆಡಿದವನಿಗೆ ಪ್ರಶಸ್ತಿ ಕೊಡಲಿಲ್ಲ; ಪಂದ್ಯಶ್ರೇಷ್ಟ ಪ್ರಶಸ್ತಿ ಕುರಿತು ಬೇಸರ ಹೊರಹಾಕಿದ ವಿರಾಟ್‌...

    IPL 2025: ಚೆನ್ನಾಗಿ ಆಡಿದವನಿಗೆ ಪ್ರಶಸ್ತಿ ಕೊಡಲಿಲ್ಲ; ಪಂದ್ಯಶ್ರೇಷ್ಟ ಪ್ರಶಸ್ತಿ ಕುರಿತು ಬೇಸರ ಹೊರಹಾಕಿದ ವಿರಾಟ್‌ ಕೊಹ್ಲಿ!

    ನ್ಯೂ ಚಂಡೀಗಢ್:‌ ಮುಲ್ಲಾನ್‌ಪುರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಿನ್ನೆ ( ಏಪ್ರಿಲ್ 20 ) ನಡೆದ ಐಪಿಎಲ್‌ನ 37ನೇ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು 7 ವಿಕೆಟ್‌ಗಳ ಗೆಲುವು ದಾಖಲಿಸುವ ಮೂಲಕ ಗೆಲುವಿನ ಟ್ರ್ಯಾಕ್‌ಗೆ ಮರಳಿತು.

    Advertisement

    ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 157 ರನ್ ಕಲೆಹಾಕಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 158 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು 18.5 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 159 ರನ್‌ ಬಾರಿಸಿತು.

    ಪಂಜಾಬ್‌ ಕಿಂಗ್ಸ್‌ ನೀಡಿದ ಸಾಮಾನ್ಯ ಗುರಿಯನ್ನು ಬೆನ್ನಟ್ಟಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಪರ ಆರಂಭಿಕನಾಗಿ ಕಣಕ್ಕಿಳಿದ ಫಿಲ್‌ ಸಾಲ್ಟ್‌ ಕಳೆದ ಪಂದ್ಯದ ಹಾಗೆ ಈ ಪಂದ್ಯದಲ್ಲೂ ಒಂದಂಕಿಗೆ ವಿಕೆಟ್‌ ಒಪ್ಪಿಸಿದರು. ಬಳಿಕ ಜತೆಯಾದ ವಿರಾಟ್‌ ಕೊಹ್ಲಿ ಹಾಗೂ ದೇವದತ್‌ ಪಡಿಕ್ಕಲ್‌ ಜೋಡಿ 103 ರನ್‌ಗಳ ಜತೆಯಾಟವನ್ನಾಡಿ ತಂಡವನ್ನು ಗೆಲುವಿನತ್ತ ಸಾಗಿಸಿದರು. ಕೊಹ್ಲಿ 54 ಎಸೆತಗಳಲ್ಲಿ 7 ಬೌಂಡರಿ ಹಾಗೂ 1 ಸಿಕ್ಸರ್‌ ಸಹಿತ ಅಜೇಯ 73 ರನ್‌ ಬಾರಿಸಿದರೆ, ಪಡಿಕ್ಕಲ್‌ 35 ಎಸೆತಗಳಲ್ಲಿ 5 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 61 ರನ್‌ ಬಾರಿಸಿ ಔಟ್‌ ಆದರು.

    ಹೀಗೆ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಕೊಹ್ಲಿಗೆ ಪಂದ್ಯಶ್ರೇಷ್ಟ ಪ್ರಶಸ್ತಿಯನ್ನು ನೀಡಲಾಗಿದೆ. ಆದರೆ ವಿರಾಟ್‌ ಕೊಹ್ಲಿ ಪ್ರಶಸ್ತಿ ಸ್ವೀಕರಿಸಿದ ಬಳಿಕ ತನಗಿಂತ ಚೆನ್ನಾಗಿ ಆಡಿದ ದೇವದತ್‌ ಪಡಿಕ್ಕಲ್‌ಗೆ ಈ ಪ್ರಶಸ್ತಿಯನ್ನು ನೀಡಬೇಕಿತ್ತು, ಇಂದು ಬದಲಾವಣೆ ತಂದದ್ದೇ ಆತ ಆತನನ್ನು ಬಿಟ್ಟು ನನಗೆ ಹೇಗೆ ಕೊಟ್ಟರೂ ಗೊತ್ತಾಗುತ್ತಿಲ್ಲ ಎಂದು ಬೇಸರ ಹೊರಹಾಕಿದರು.

    ಇನ್ನು ಗೆಲುವಿನ ಬಗ್ಗೆ ಸಂತಸ ವ್ಯಕ್ತಪಡಿಸಿದ ಕೊಹ್ಲಿ ಒಂದು ಗೆಲುವು ಅಂಕಪಟ್ಟಿಯಲ್ಲಿ ದೊಡ್ಡ ಬದಲಾವಣೆಯನ್ನು ತರಲಿದೆ ಎಂದರು. ಅಲ್ಲದೇ ಎರಡು ಅಂಕಗಳು ಮಹತ್ವವಾದದ್ದು ಎಂದ ಕೊಹ್ಲಿ ಎಂಟರಿಂದ ಹತ್ತು ಅಂಕಗಳಾಗುವುದು ಪ್ಲೇಆಫ್‌ ಅರ್ಹತೆ ಗಿಟ್ಟಿಸಿಕೊಳ್ಳುವತ್ತ ಹೆಜ್ಜೆ ಇಡಲು ಬೇಕಾದ ಮೈಲಿಗಲ್ಲು ಎಂದರು. ತಂಡದಲ್ಲಿ ಎಲ್ಲರೂ ಒಳ್ಳೆಯ ಪ್ರದರ್ಶನ ನೀಡುತ್ತಿದ್ದಾರೆ ಎಂದ ಕೊಹ್ಲಿ ಎಲ್ಲರಲ್ಲಿಯೂ ಗೆಲುವಿನ ಹಸಿವು ಕಾಣಿಸುತ್ತಿದೆ, ಮೈದಾನದಲ್ಲಿ ಅವರು ರನ್‌ ಉಳಿಸಲು ಡೈವ್‌ ಮಾಡುವುದನ್ನು ನೋಡಿದರೇ ನಿಮಗೆ ತಿಳಿಯಲಿದೆ ಎಂದು ತಂಡ ವಿಶ್ವಾಸದಿಂದ ಮುನ್ನುಗಲು ಸಿದ್ಧವಿದೆ ಎಂದು ತಿಳಿಸಿದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading