ಕುಶಾಲನಗರ: ಹಣ ಹಾಗೂ ಆಸ್ತಿಗಾಗಿ ಕಳೆದ ನಾಲ್ಕು ತಿಂಗಳ ಹಿಂದೆ ತನ್ನ ತಂದೆಯನ್ನು ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಸಿಯನ್ನು ಪೊಲೀಸರು ಬಂಧಿದ್ದಾರೆ.
ಕೂಡುಮಂಗಳೂರು ಗ್ರಾಮದ ನಿವಾಸಿ ಚಂದ್ರಶೇಖರ್ ಬಂಧಿತ ಆರೋಪಿ, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಬೆಟ್ಟಗೇರಿ ಗ್ರಾಮದ ಕಾವೇರಿ ಹಳೆಯ ದಡದಲ್ಲಿ ಮಾ.16ರಂದು ವ್ಯಕ್ತಿಯ ಮೃತದೇಹ ಸಿಕ್ಕಿತ್ತು. ವಿಚಾರಣೆ ಸಂದರ್ಭದಲ್ಲಿ ಈ ಮೃತ ವ್ಯಕ್ತಿ ಕೂಡುಮಂಗಳೂರು ಗ್ರಾಮದ ನಿವಾಸಿ ಮಂಜಣ್ಣ ಎಂಬುದಾಗಿ ತಿಳಿದು ಬಂದಿತ್ತು.
ಚಿಕ್ಕಬೆಟ್ಟಗೇರಿಗೆ ತೆರಳಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಬಗ್ಗೆ ಮಂಜಣ್ಣ ಎಂಬವರ ಪತ್ನಿ ಅನುಮಾನ ವ್ಯಕ್ತಪಡಿಸಿ, ಕುಶಾಲ ನಗರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಕುರಿತುದೂರುದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸಿದಾಗ ಮಂಜಣ್ಣ ಅವರ ಮಗ ಚಂದ್ರಶೇಖರ್ ಆಸ್ತಿ ಮತ್ತು ಹಣಕ್ಕಾಗಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಮಂಜಣ್ಣರವರು ಕೌಟುಂಬಿಕ ಸಮಸ್ಯೆಯಿಂದ ಪತ್ನಿ ಮತ್ತು ಮಕ್ಕಳಿಂದ ಬೇರೆಯಾಗಿ ಒಬ್ಬರೇ ಕೂಡುಮಂಗಳೂರಿನ ಮನೆಯಲ್ಲಿ ವಾಸವಿದ್ದರು. ಸುಮಾರು 14 ವರ್ಷಗಳ ಹಿಂದೆ ಕಾಫಿ ಕ್ಯೂರಿಂಗ್ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಮೆಷಿನ್‌ಗೆ ಎಡಗಾಲು ಸಿಲುಕಿ ತುಂಡಾಗಿದ್ದು, ನಡೆಯಲು ಕಷ್ಟವಾಗಿತ್ತು.
ಆಸ್ತಿಯ ಸಲುವಾಗಿ ಮಗ ಚಂದ್ರಶೇಖರ್ ತನ್ನ ಸ್ನೇಹಿತರೊಂದಿಗೆ ಮಾ.14 ರಂದು ಕೂಡುಮಂಗಳೂರು ಗ್ರಾಮದಲ್ಲಿನ ಮನೆಯಿಂದ ಮಂಜಣ್ಣ ಅವರನ್ನು ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಂಡು ಹೋಗುವಾಗ ಮಂಜಣ್ಣ ಕೂಗಿಕೊಂಡಿದ್ದಾರೆ. ಆಗ ಚಂದ್ರಶೇಖರ್ ಮತ್ತು ಸ್ನೇಹಿತರು ಹಲ್ಲೆ ನಡೆಸಿದ್ದು, ಪ್ರಜ್ಞೆ ತಪ್ಪಿದ್ದ ಮಂಜಣ್ಣ ಮೃತಪಟ್ಟಿದ್ದಾರೆ ಎಂಬುದಾಗಿ ಭಾವಿಸಿ ದೇಹವನ್ನು ಚಿಕ್ಕಬೆಟ್ಟಗೇರಿ ಬಳಿ ಕಾವೇರಿ ಹೊಳೆಯಲ್ಲಿ ಎಸೆದು ಸಾಕ್ಷ್ಯ ನಾಶಪಡಿಸಿರುವುದು ತನಿಖೆಯಲ್ಲಿ ತಿಳಿದು ಬಂದಿದೆ. ಈ ಅಪರಾಧ ಕೃತ್ಯದಲ್ಲಿ ಭಾಗಿಯಾಗಿರುವ ಇತರೆ ಆರೋಪಿಗಳ ಪತ್ತೆ ಕಾರ್ಯ ಪ್ರಗತಿಯಲ್ಲಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.
ಡಿವೈಎಸ್ಪಿ ಚಂದ್ರಶೇಖರ್ ಹಾಗೂ ಸಿಪಿಐ ದಿನೇಶ್‌ಕುಮಾ ನೇತೃತ್ವದಲ್ಲಿ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್‌ಐ ಎನ್.ರಾಮಚಂದ್ರ ಮತ್ತು ಸಿಬ್ಬಂದಿಗಳ ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ಜು.19ರಂದು ಚಂದ್ರಶೇಖರ್‌ನನ್ನು ದಸ್ತಗಿರಿ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಆರೋಪಿಯನ್ನು ಪತ್ತೆ ಮಾಡುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿ ಸಿದ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ. ರಾಮರಾಜನ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಬಿ.ಪಿ.ದಿನೇಶ್ ಕುಮಾರ್ ಶ್ಲಾಘಿಸಿದ್ದಾರೆ.
ಈ ದಿನದಂದು ಸಣ್ಣ ವ್ಯಾಪಾರಿಗಳ ಪ್ರತಿಭಟನೆ; ಬೇಕರಿ, ತರಕಾರಿ ಅನುಮಾನ
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


