ಬೆಂಗಳೂರು;ಯಲಹಂಕದ ಕೋಗಿಲು ಕ್ರಾಸ್ ಬಳಿ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಿಎಂಟಿಸಿ ಬಸ್ ಚಕ್ರಕ್ಕೆ ಸಿಲುಕಿ 10 ವರ್ಷದ ಬಾಲಕಿ ತನ್ವಿ ಕೃಷ್ಣ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಈ ದುರ್ಘಟನೆಯು ಆಕೆಯ ತಾಯಿಯ ಕಣ್ಣೆದುರೇ ನಡೆದಿದ್ದು, ತೀವ್ರ ಆಘಾತಕ್ಕೆ ಕಾರಣವಾಗಿದೆ.
ಮಿಲಿಯನಿಯಂ ಶಾಲೆಯ 5ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದ ತನ್ವಿ, ಇಂದು ಬೆಳಿಗ್ಗೆ ತನ್ನ ತಾಯಿ ಹರ್ಷಿತಾ ಅವರೊಂದಿಗೆ ದ್ವಿಚಕ್ರ ವಾಹನದಲ್ಲಿ ಶಾಲೆಗೆ ತೆರಳುತ್ತಿದ್ದರು. ಯಲಹಂಕದ ಮಾರುತಿನಗರ ಬಳಿ ದ್ವಿಚಕ್ರ ವಾಹನವು ರಸ್ತೆಯಲ್ಲಿ ಸ್ಕಿಡ್ ಆಗಿ ಬಿದ್ದಿದೆ. ಈ ವೇಳೆ ಹಿಂದಿನಿಂದ ಬರುತ್ತಿದ್ದ ಬಿಎಂಟಿಸಿ ಬಸ್ (ನೋಂದಣಿ ಸಂಖ್ಯೆ: KA57 F:5375) ಚಕ್ರವು ತನ್ವಿ ತಲೆ ಮೇಲೆ ಹರಿದಿದೆ. ತೀವ್ರ ಗಾಯಗಳಾದ ಕಾರಣ ತನ್ವಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ಚಾಲಕನ ನಿರ್ಲಕ್ಷ್ಯದ ಆರೋಪ: ದ್ವಿಚಕ್ರ ವಾಹನ ಸ್ಕಿಡ್ ಆಗಿ ಬಿದ್ದಾಗ, ತಾಯಿ ಹರ್ಷಿತಾ ಜೋರಾಗಿ ಕೂಗಿದರೂ ಚಾಲಕ ಬಸ್ ನಿಲ್ಲಿಸಿಲ್ಲ ಎಂದು ಆರೋಪಿಸಲಾಗಿದೆ. ಬಸ್ ಅಪಘಾತವಾದ ಸ್ಥಳದಿಂದ ನೂರಾರು ಮೀಟರ್ ಮುಂದಕ್ಕೆ ಹೋಗಿ ನಿಂತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಈ ಘಟನೆ ಸಂಬಂಧ ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಬಸ್ ಅನ್ನು ವಶಕ್ಕೆ ಪಡೆದು ಚಾಲಕನ ವಿರುದ್ಧ ತನಿಖೆ ಆರಂಭಿಸಿದ್ದಾರೆ.
ಚಿನ್ನದ ದರದಲ್ಲಿ ಮತ್ತೆ ಏರಿಕೆ: ಇಂದಿನ ಬೆಲೆ ಎಷ್ಟು?
ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


