ಕೋವಿಡ್ ಅವಧಿಯಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ತಪಾಸಣೆ ಹೆಸರಿನಲ್ಲಿ ₹258.80 ಕೋಟಿಯನ್ನು ಅಕ್ರಮವಾಗಿ ವೆಚ್ಚ ಮಾಡಿದೆ ಎಂದು ಭಾರತದ ಮಹಾಲೇಖಪಾಲರ (ಸಿಎಜಿ) ವರದಿ ಹೇಳಿದೆ.ವಿಧಾನ ಸಭೆಯಲ್ಲಿ ಬುಧವಾರ ಮಂಡಿಸಲಾದ ‘ಕಟ್ಟಡ ಮತ್ತು ಇತರ ಕಲ್ಯಾಣ ಕಾರ್ಮಿಕರ ಕಲ್ಯಾಣ ವರದಿ’ಯಲ್ಲಿ ಈ ಮಾಹಿತಿ ಇದೆ.
ನೋಂದಾಯಿತ ಕಾರ್ಮಿಕರಿಗೆ ಕೋವಿಡ್ ಪರೀಕ್ಷೆ ನಡೆಸುವ ಈ ಯೋಜನೆಯಲ್ಲಿ ಸಾಲು-ಸಾಲು ಅಕ್ರಮಗಳು ನಡೆದಿದ್ದು, ಸರ್ಕಾರವು ಅಗತ್ಯ ಪರಿಶೀಲನೆ ನಡೆಸಬೇಕು. ಅಕ್ರಮದ ಮೊತ್ತ ವಸೂಲಿಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಶಿಫಾರಸು ಮಾಡಿದೆ.
ಕೆಟಿಪಿಪಿ ಕಾಯ್ದೆಯ 4(ಜಿ) ಸೆಕ್ಷನ್ ಅನ್ನು ಉಲ್ಲಂಘಿಸಿ, ಏಜಿನ್ಸಿಗಳಿಂದ ಕೊಟೇಷನ್ ಆಹ್ವಾನಿಸಿತು. ಯೋಜನೆಯ ಒಟ್ಟು ವೆಚ್ಚದಲ್ಲಿ ಶೇ50ರಷ್ಟನ್ನು ನಿಯಮಬಾಹಿರವಾಗಿ ಮುಂಗಡ ನೀಡಿತು. ಏಜೆನ್ಸಿಗಳು ಸಲ್ಲಿಸಿದ ಬಿಲ್ಗಳನ್ನು ಪರಿಶೀಲಿಸದೆಯೇ ಹಣವನ್ನು ಬಿಡುಗಡೆ ಮಾಡಿತು ಎಂದು ಆರೋಪಿಸಲಾಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


