ಬಿಗ್ ಬಾಸ್ ಖ್ಯಾತಿಯ ಲಾಯರ್ ಜಗದೀಶ್ ರಾಜಕೀಯ ಪ್ರವೇಶ ಮಾಡಲಿದ್ದಾರೆ. ರಾಜಕೀಯ ಪ್ರವೇಶ ಕುರಿತು ಆಸಕ್ತಿ ಇದೆ ಎಂದು ಹಲವು ಸಂದರ್ಶನಗಳಲ್ಲಿ ಲಾಯರ್ ಜಗದೀಶ್
ಇದೀಗ ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡೋದು ಖಚಿತವಾಗಿದೆ. ಲಾಯರ್ ಜಗದೀಶ್ ತಮ್ಮ ರಾಜಕೀಯ ಪ್ರವೇಶದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
ನಮಸ್ಕಾರ ಯಲಹಂಕ, ನಾನು ಕೆ.ಎನ್. ಜಗದೀಶ್ ಕುಮಾರ್ ಗೌಡ. ನಾನು ನಾಡಪ್ರಭು ಕೆಂಪೇಗೌಡರ ವಂಶಸ್ಥ. 2028ರ ವಿಧಾನಸಭಾ ಚುನಾವಣೆಯಲ್ಲಿ ನಿಮ್ಮ ಆಶೀರ್ವಾದದೊಂದಿಗೆ ಯಲಹಂಕ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದೇನೆ. ಭ್ರಷ್ಟಾಚಾರ ನಿರ್ಮೂಲನೆಪ್ರಾಮಾಣಿಕತೆ ಮತ್ತು ಅಭಿವೃದ್ಧಿಜನಪರ ಸೇವೆ – ಇದೇ ನನ್ನ ಪ್ರತಿಜ್ಞೆ ಎಂದಿದ್ದಾರೆ. “ಇದು ಕೆಂಪೇಗೌಡರ ವಾಣಿ, ಇದು ಜನರ ವಾಣಿ!” ಎಂದು ಲಾಯರ್ ಜಗದೀಶ್ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


