Sunday, September 20, 2026
spot_img
More
    spot_img
    HomeLatest newsವಿಧಾನಸಭೆಯ ಆಯ್ಕೆ ಸಮಿತಿಗೆ ಕರ್ನಾಟಕ ಭೂಕಂದಾಯ ತಿದ್ದುಪಡಿ ವಿಧೇಯಕ ನಿರ್ಣಯ

    ವಿಧಾನಸಭೆಯ ಆಯ್ಕೆ ಸಮಿತಿಗೆ ಕರ್ನಾಟಕ ಭೂಕಂದಾಯ ತಿದ್ದುಪಡಿ ವಿಧೇಯಕ ನಿರ್ಣಯ

    ಬೆಂಗಳೂರು: ಆಡಳಿತ ಪಕ್ಷದ ಸದಸ್ಯರ ವಿರೋಧದಿಂದಾಗಿ ಕರ್ನಾಟಕ ಭೂಕಂದಾಯ ತಿದ್ದುಪಡಿ ವಿಧೇಯಕವನ್ನು ಅಂಗೀಕರಿಸುವ ಬದಲಾಗಿ, ವಿಧಾನಸಭೆಯ ಆಯ್ಕೆ ಸಮಿತಿಗೆ ವಹಿಸುವ ನಿರ್ಣಯ ಕೈಗೊಳ್ಳಲಾಯಿತು.

    Advertisement

    ವಿಧಾನಸಭೆಯ ಶಾಸನ ರಚನಾ ಕಲಾಪದಲ್ಲಿ ಕಂದಾಯ ಸಚಿವರ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, ಕರ್ನಾಟಕ ಭೂ ಕಂದಾಯ ಎರಡನೇ ತಿದ್ದುಪಡಿ ವಿಧೇಯಕ 2025 ಅನ್ನು ಮಂಡಿಸಿ ಪರ್ಯಾಲೋಚನೆಗೆ ಮನವಿ ಮಾಡಿದರು.

    ಕೊಡಗು ಭಾಗದಲ್ಲಿನ ಜಮ, ಬಾಣೆ ಹಿಡುವಳಿ ವ್ಯವಸ್ಥೆಗಳಿಗೆ ಸಂಬಂಧಪಟ್ಟಂತ ವಿಧೇಯಕ ಇದಾಗಿದ್ದು, ಅಂಗೀಕಾರ ನೀಡಬೇಕು ಎಂದು ಮನವಿ ಮಾಡಿದರು.

    ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರೂ ಆಗಿರುವ ಶಾಸಕ ಎ.ಎಸ್. ಪೊನ್ನಣ್ಣ, ಕೊಡಗಿನಲ್ಲಿ ಹಲವಾರು ವರ್ಷಗಳಿಂದ ಸಮಸ್ಯೆಗೆ ಕಾರಣವಾಗಿರುವ ಭೂ ದಾಖಲಾತಿಗಳ ಲೋಪಗಳನ್ನು ಸರಿಪಡಿಸುವ ಉದ್ದೇಶದಿಂದ ಕಾಯ್ದೆ ರೂಪಿಸಬೇಕಿತ್ತು. ಆದರೆ ಅದಕ್ಕೆ ವ್ಯತಿರಿಕ್ತವಾಗಿ ಈ ಮಸೂದೆ ಇದೆ. ಜಮೀನು ಸ್ವಾಧೀನದಲ್ಲಿ ಇರುವವರು ಬೇರೆ, ದಾಖಲಾತಿಗಳಲ್ಲಿ ನಮೂದಾಗಿರುವ ಹೆಸರುಗಳು ಬೇರೆ ಬೇರೆ ಎಂಬ ವ್ಯವಸ್ಥೆ ಇದೆ. ಅದನ್ನು ಸರಿಪಡಿಸಲು ಈ ಕಾಯ್ದೆ ಸಮರ್ಥವಾಗಿಲ್ಲ ಎಂದರು.

    ಶಾಸಕ ಮಂಥರ ಗೌಡ ಕೂಡ ಕಾಯ್ದೆಗೆ ವಿರೋಧ ವ್ಯಕ್ತಪಡಿಸಿ, ದಾಖಲಾತಿಗಳ ತಿದ್ದುಪಡಿಯಾಗಬೇಕು ಎಂದು ಮನವಿ ಮಾಡಿದರು. ಈ ವಿಧೇಯಕವನ್ನು ಆಯ್ಕೆ ಸಮಿತಿಗೆ ಒಪ್ಪಿಸುವಂತೆ ಒತ್ತಾಯಿಸಿದರು.

    ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಇದಕ್ಕೆ ಧ್ವನಿಗೂಡಿಸಿದರು. ಒತ್ತಾಯಕ್ಕೆ ಮಣಿದ ಸಚಿವ ಎಚ್.ಕೆ.ಪಾಟೀಲ್ ವಿಧೇಯಕವನ್ನು ಆಯ್ಕೆ ಸಮಿತಿಗೆ ವಹಿಸುವುದಾಗಿ ತಿಳಿಸಿದರು.

    ಸದನದ ಅಭಿಪ್ರಾಯದಂತೆ ವಿಧಾನಸಭೆಯ ಆಯ್ಕೆ ಸಮಿತಿ ರಚಿಸುವುದಾಗಿ ಸಭಾಧ್ಯಕ್ಷ ಯು.ಟಿ.ಖಾದರ್ ಪ್ರಕಟಿಸಿದರು.

    ಧರ್ಮಸ್ಥಳ ಸಂಘದಲ್ಲಿ ಕಡಿಮೆ ಬಡ್ಡಿಗೆ ಸಾಲ ಕೊಟ್ಟಿದ್ದಕ್ಕೆ ಶುರುವಾಯ್ತಾ ಧರ್ಮಸ್ಥಳ ಕೊಲೆ, ಅತ್ಯಾಚಾರ ಆರೋಪ?

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading