Friday, September 18, 2026
spot_img
More
    spot_img
    HomeLatest newsಒಳಮೀಸಲಾತಿ ಜಾರಿಗೆ ಪ್ರಯತ್ನ ಆರಂಭಿಸಿದ್ದೇ ಬಿಜೆಪಿ ಸರ್ಕಾರ: ಎನ್ ಮಹೇಶ್‌

    ಒಳಮೀಸಲಾತಿ ಜಾರಿಗೆ ಪ್ರಯತ್ನ ಆರಂಭಿಸಿದ್ದೇ ಬಿಜೆಪಿ ಸರ್ಕಾರ: ಎನ್ ಮಹೇಶ್‌

    ಮೈಸೂರು: ಒಳಮೀಸಲಾತಿ ವಿಚಾರದಲ್ಲಿ ಅಟ್ಟಿಕ್ಕಿದವಳಿಗಿಂತ ಬೊಟ್ಟು ಇಕ್ಕಿದವಳು ಮೇಲು‌ ಎಂಬಂತಾಗಿದೆ ಎಂದು ಮಾಜಿ ಸಚಿವ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್.ಮಹೇಶ್ ಹೇಳಿದ್ದಾರೆ.

    Advertisement

    ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿಗೆ ಪ್ರಯತ್ನಗಳನ್ನು ಆರಂಭಿಸಿದ್ದೇ ಬಿಜೆಪಿ ಸರ್ಕಾರ. ರಾಜ್ಯದಲ್ಲಿ ಬಿಜೆಪಿ ಮೊದಲ ಬಾರಿ ಅಧಿಕಾರಕ್ಕೆ ಬಂದಾಗಲೇ ಒಳ‌ಮೀಸಲಾತಿ ಜಾರಿಗಾಗಿ ಅಧ್ಯಯನ ಮಾಡಲು ಸಮಿತಿಯನ್ನು ರಚಿಸಲಾಗಿತ್ತು. ಆದರೆ ಜಾರಿಯಾಗುವಷ್ಟರಲ್ಲಿ‌ ಚುನಾವಣೆ ಸಮೀಪಿಸಿತ್ತು. ಆ ಬಳಿಕ ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿ ಆಗಿದ್ದರೂ ಒಳ ಮೀಸಲಾತಿ ಜಾರಿಗೆ ಮುಂದಾಗಲಿಲ್ಲ. ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಒಳ‌ಮೀಸಲಾತಿ ಜಾರಿಗೆ ಹೆಚ್ಚಿನ ಆದ್ಯತೆ ನೀಡಲಾಗಿತ್ತು. ಆದರೂ ಅನುಷ್ಠಾನಕ್ಕೆ ತರಲು ಸಾಧ್ಯವಾಗಲಿಲ್ಲ. ಬಿಜೆಪಿಯ ಹೋರಾಟದ ಫಲವಾಗಿ ಇದೀಗ ಒಳಮೀಸಲಾತಿ ಜಾರಿಗೆ ರಾಜ್ಯ ಸರ್ಕಾರ ಮುಂದಾಗಿದೆ. ಬಿಜೆಪಿ ನಡೆಸಿದ ಹೋರಾಟದ ಫಲವನ್ನು ಕಾಂಗ್ರೆಸ್ ಪಡೆದುಕೊಳ್ಳುತ್ತಿದೆ. ಇದನ್ನು ಕಾಂಗ್ರೆಸ್ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದೆ. ಇದರ ಹೊರತಾಗಿಯೂ ಅಧಿಕೃತ ಆದೇಶ ಹೊರಬಿದ್ದ ನಂತರ ಏನಾಗಲಿದೆ ಎಂದು ಕಾದು ನೋಡಬೇಕಿದೆ. ಏಕೆಂದರೆ ಅಲೆಮಾರಿ, ಅರೆ ಅಲೆಮಾರಿ ಜನಾಂಗಗಳಿಗೆ ಅನ್ಯಾಯ ಆಗಿದೆ ಎಂಬ ಬಲವಾದ ಕೂಗು ಕೇಳಿಬಂದಿದೆ. ಪರಿಣಾಮ ಆ ಸಮುದಾಯಗಳು ಈಗಾಗಲೇ ಹೋರಾಟ ಆರಂಭಿಸಿವೆ. ಹಾಗಾಗಿ ಅಧಿಕೃತ ಆದೇಶ ಹೊರಬಿದ್ದ ನಂತರ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ ಎಂದರು.

    ಇನ್ನು ಒಳಮೀಸಲಾತಿ ಜಾರಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಫುಲ್ ಸ್ಟಾಪ್ ಇಡುವ ಬದಲು ಕಾಮಾ ಇಟ್ಟಿದ್ದಾರೆ. ಒಳ ಮೀಸಲಾತಿ ಜಾರಿಗಾಗಿ ಕಳೆದ 30 ವರ್ಷಗಳಿಂದ ಹೋರಾಟ ನಡೆಯುತ್ತಿತ್ತು. ಇದಕ್ಕೆ ಸಿಎಂ ಸಿದ್ದರಾಮಯ್ಯ ಫುಲ್ ಸ್ಟಾಪ್‌ ಇಡುತ್ತಾರೆ ಎಂದು ನಂಬಿದ್ದೆವು. ಆದರೆ ಸಿದ್ದರಾಮಯ್ಯನವರು ಒಳ ಮೀಸಲಾತಿ ಹಂಚಿಕೆ ಮಾಡುವಾಗ ಫುಲ್ ಸ್ಟಾಪ್ ಇಡುವ ಬದಲು ಕಾಮಾ ಹಾಕಿ ಬಿಟ್ಟಿದ್ದಾರೆ ಎಂದು ವಿಶ್ಲೇಷಿಸಿದರು.

    ಇನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಸುತ್ತಿರುವುದನ್ನು‌ ಖಂಡಿಸಿ ನಾಳೆ ರಾಜ್ಯದಾದ್ಯಂತ ಧರ್ಮಸ್ಥಳ ಚಲೋ ಆಂದೋಲನಕ್ಕೆ ಕರೆ ನೀಡಲಾಗಿದೆ, ಪವಿತ್ರ ಕ್ಷೇತ್ರವಾಗಿರುವ ಧರ್ಮಸ್ಥಳದ ಬಗ್ಗೆ ಇಲ್ಲ ಸಲ್ಲದ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಧರ್ಮಸ್ಥಳ‌ ಚಲೋ ಆಂದೋಲನಕ್ಕೆ ಕರೆ ಕೊಡಲಾಗಿದೆ. ಮೈಸೂರು ಸೇರಿದಂತೆ ರಾಜ್ಯದಾದ್ಯಂತ ಧರ್ಮಸ್ಥಳ ಚಲೋ ಆಂದೋಲನ ನಡೆಯಲಿದೆ. ರಾಜ್ಯದ ಎಲ್ಲಾ 224 ವಿಧಾನಸಭೆ ಕ್ಷೇತ್ರಗಳಲ್ಲೂ ಧರ್ಮಸ್ಥಳ ಚಲೋ ಆಂದೋಲನ ನಡೆಯಲಿದೆ ಎಂದು ಮಾಹಿತಿ ನೀಡಿದರು.

    ಸಭಾಧ್ಯಕ್ಷರ ವಿರುದ್ಧ ಮುನಿಸು; ಕಲಾಪದಿಂದ ಹೊರ ನಡೆಯಲು ಮುಂದಾದ ಜೆಡಿಎಸ್‌ ಶಾಸಕ ಶರಣುಗೌಡ ಕಂದಕೂರು

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading