ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಮೂರು ವಿಧಾನಸಭಾ ಉಪಚುನಾವಣೆ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿದೆ.
ಕಳೆದ ಬಾರಿ ಶಿಗ್ಗಾಂವಿ ಕ್ಷೇತ್ರದಲ್ಲಿ ಬಸವರಾಜ ಬೊಮ್ಮಾಯಿ ಅವರು 36 ಸಾವಿರ ಮತಗಳ ಅಂತರದಿಂದ ಗೆದ್ದಿದ್ದರು. ಆದರೆ ಈ ಬಾರಿ ಗೆಲುವಿನ ಅಂತರ 10 ಸಾವಿರಕ್ಕೆ ಕುಸಿತ ಕಂಡಿದೆ.
ಈ ಹಿನ್ನೆಲೆಯಲ್ಲಿ ಶಿಗ್ಗಾಂವಿ ಕ್ಷೇತ್ರದಲ್ಲೂ ಕೂಡ ಕಾಂಗ್ರೆಸ್ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


