Friday, August 7, 2026
spot_img
More
    spot_img
    HomeEntertainmentʼಮಫ್ತಿ 2ʼ ಬರೋದು ನಿಜ ಎಂದ ಶಿವರಾಜಕುಮಾರ್

    ʼಮಫ್ತಿ 2ʼ ಬರೋದು ನಿಜ ಎಂದ ಶಿವರಾಜಕುಮಾರ್

    ಶಿವರಾಜಕುಮಾರ್ ಅಭಿನಯದ ‘ಭೈರತಿ ರಣಗಲ್’ ಚಿತ್ರ ಕಳೆದ ನವೆಂಬರ್ 15 ರಂದು ರಾಜ್ಯಾದ್ಯಂತ ಬಿಡುಗಡೆಯಾಗಿತ್ತು. ʼಮಫ್ತಿʼ ಚಿತ್ರದ ಪ್ರೀಕ್ವೆಲ್ ಆಗಿರುವ ಈ ಚಿತ್ರವು, ಬಿಡುಗಡೆಯಾದ ಆರು ದಿನಗಳಲ್ಲಿ ೧೨ ಕೋಟಿ ರೂ.ಗಳಿಗೆ ಹೆಚ್ಚು ಗಳಿಕೆ ಕಂಡಿದೆ. ಈ ನಡುವೆ ಚಿತ್ರದ ಸೀಕ್ವೆಲ್ ಬರಲಿದೆ ಎಂದು ಶಿವರಾಜಕುಮಾರ್ ಘೋಷಣೆ ಮಾಡಿದ್ದಾರೆ.

    Advertisement

    ಇತ್ತೀಚೆಗೆ ನಡೆದ ಸಂತೋಷ ಕೂಟದಲ್ಲಿ ಮಾತನಾಡಿರುವ ಶಿವರಾಜಕುಮಾರ್, ʼʼಮಫ್ತಿʼ ಚಿತ್ರದ ನನ್ನ ಭೈರತಿ ರಣಗಲ್ ಪಾತ್ರವನ್ನು ಪ್ರೇಕ್ಷಕರು ಇಷ್ಟಪಟ್ಟಿದ್ದರು ಎಂದು ಮಾತು ಶುರು ಮಾಡಿದ ಶಿವಣ್ಣ, ʼʼಭೈರತಿ ರಣಗಲ್ʼ ಚಿತ್ರದ ರಣಗಲ್ ಪಾತ್ರವನ್ನು ಹೃದಯಕ್ಕೆ ತೆಗೆದುಕೊಂಡಿದ್ದಾರೆ. ನಮ್ಮ ಸಂಸ್ಥೆಯಿಂದ ನಿರ್ಮಾಣವಾದ ಎರಡನೇ ಚಿತ್ರವಿದು. ಒಳ್ಳೆಯ ಚಿತ್ರಗಳನ್ನು ನೀಡಿದಾಗ ಜನರು ಚಿತ್ರಮಂದಿರಕ್ಕೆ ಬರುತ್ತಾರೆ ಎಂಬುದಕ್ಕೆ ಈ ಚಿತ್ರ ಉದಾಹರಣೆ. ಈ ಯಶಸ್ಸು ನನ್ನೊಬ್ಬನದಲ್ಲ. ಇಡೀ ತಂಡದು. ಮುಂದೆ ʼಮಫ್ತಿ ೨ʼ ಮಾಡಬೇಕೆಂಬುದು ಅಭಿಮಾನಿಗಳ ಆಸೆ. ಖಂಡಿತಾ ಮಾಡುತ್ತೇನೆ. ಆದರೆ, ಶೀರ್ಷಿಕೆ ʼಮಫ್ತಿ ೨ʼ ಎಂದಿರುವುದಿಲ್ಲ. ಸದ್ಯದಲ್ಲೇ ಆ ಚಿತ್ರದ ಶೀರ್ಷಿಕೆಯನ್ನು ತಿಳಿಸುತ್ತೇನೆʼ ಎಂದರು.

    ಇನ್ನು, ಚಿತ್ರದ ಕಲೆಕ್ಷನ್ ಎಷ್ಟಾಗಿದೆ ಎಂಬ ವಿಷಯವನ್ನು ಚಿತ್ರತಂಡದವರಾಗಲೀ, ಚಿತ್ರವನ್ನು ವಿತರಣೆ ಮಾಡಿರುವ ಜಗದೀಶ್ ಫಿಲಂಸ್ನವರಾಗಲೀ ಘೋಷಣೆ ಮಾಡಿಲ್ಲ. ಆದರೆ, ವಿತರಕರ ಮುಖದಲ್ಲಿ ಸಂತೋಷ ಕಂಡೆ ಸಿನಿಮಾ ಗೆದ್ದ ಹಾಗೆ ಎಂದಿರುವ ವಿತರಕ ಜಗದೀಶ್, ʼಕನ್ನಡ ಚಿತ್ರಗಳು ಓಡುತ್ತಿಲ್ಲ ಎಂಬುದು ಸುಳ್ಳು. ಉತ್ತಮ ಚಿತ್ರಗಳನ್ನು ಬಂದರೆ ಜನ ಖಂಡಿತವಾಗಿ ಜನ ನೋಡುತ್ತಾರೆ. ಅದಕ್ಕೆ ಈ ಚಿತ್ರವೇ ಉದಾಹರಣೆ. ಎರಡನೇ ವಾರದಲ್ಲಿ ಶೋಗಳ ಸಂಖ್ಯೆ ಹೆಚ್ಚಳವಾಗಲಿದೆ. ವಿತರಕರ ಮುಖದಲ್ಲಿ ಸಂತೋಷ ಕಂಡರೆ ಆ ಸಿನಿಮಾ ಗೆದ್ದ ಹಾಗೆʼ ಎಂದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading