ಹಜಾರಿಬಾಗ್: ಜಾರ್ಖಂಡ್ನ ಹಜಾರಿಬಾಗ್ ಜಿಲ್ಲೆಯಲ್ಲಿ ಪ್ರಯಾಣಿಕರೊಂದಿಗೆ ಪಾಟ್ನಾಗೆ ತೆರಳುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿಮೀ ದೂರದಲ್ಲಿರುವ ಗೋರ್ಹರ್ ಪೊಲೀಸ್ ಠಾಣೆಯ ಬಳಿ ಈ ಅಪಘಾತ ಸಂಭವಿಸಿದ್ದು, ತಿರುವು ತೆಗೆದುಕೊಳ್ಳುವಾಗ ಬಸ್ ಪಲ್ಟಿಯಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದುವರೆಗೆ ಏಳು ಸಾವುಗಳು ದಢಪಟ್ಟಿವೆ. ಇನ್ನೂ ಕೆಲವರು ಬಸ್ಸಿನಲ್ಲಿ ಸಿಲುಕಿರುವ ಸಾಧ್ಯತೆಯಿದೆ ಎಂದು ಹಜಾರಿಬಾಗ್ ಎಸ್ಪಿ ಅರವಿಂದ್ ಕುಮಾರ್ ಸಿಂಗ್ ಪಿಟಿಐಗೆ ತಿಳಿಸಿದ್ದಾರೆ. ಅಪಘಾತದ ವೇಳೆ ಕೋಲ್ಕತ್ತಾದಿಂದ ಪಾಟ್ನಾಗೆ ತೆರಳುತ್ತಿದ್ದ ಬಸ್ನಲ್ಲಿ ಸುಮಾರು 50 ಮಂದಿ ಪ್ರಯಾಣಿಕರಿದ್ದರು.
ಸಾವು-ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


