Wednesday, November 11, 2026
spot_img
More
    spot_img
    HomeNational/ Internationalದೆಹಲಿಯಲ್ಲಿ ನಂದಿನಿ ಉತ್ಪನ್ನಗಳ ಮಾರಾಟ ಆರಂಭ

    ದೆಹಲಿಯಲ್ಲಿ ನಂದಿನಿ ಉತ್ಪನ್ನಗಳ ಮಾರಾಟ ಆರಂಭ

    ನವದೆಹಲಿ-ಕರ್ನಾಟಕದ ಕೆಎಂಎಫ್ ಸಂಸ್ಥೆಯ ನಂದಿನಿ ಬ್ರ್ಯಾಂಡ್ ಉತ್ಪನ್ನಗಳ ಅಧಿಕೃತ ಮಾರಾಟ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆರಂಭಗೊಂಡಿದೆ. ನಂದಿನಿ ಉತ್ಪನ್ನಗಳನ್ನು ಬಿಡುಗಡೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ, ದೆಹಲಿಯಲ್ಲಿ ಕೆಎಂಎಫ್ ಉತ್ಪನ್ನಗಳ ಮಾರಾಟಕ್ಕೆ ಚಾಲನೆ ನೀಡಿದರು.

    ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಒಕ್ಕೂಟದ (KMF) ನಂದಿನಿ ಬ್ರ್ಯಾಂಡ್ ಉತ್ಪನ್ನಗಳ ಅಧಿಕೃತ ಮಾರಾಟಕ್ಕೆ ಸಿಎಂ ಸಿದ್ದರಾಮಯ್ಯ ಗುರುವಾರ ಚಾಲನೆ ನೀಡಿದರು. ಇದರೊಂದಿಗೆ, ದೇಶದ ರಾಜಧಾನಿಯಲ್ಲೂ ನಂದಿನಿ ಉತ್ಪನ್ನಗಳ ಹವಾ ಆರಂಭವಾಗಲಿದೆ. ಈ ಮೂಲಕ ಅಮುಲ್‌ ಮತ್ತು ಮದರ್‌ ಡೇರಿಯಂತಹ ಪ್ರಮುಖ ಬ್ರ್ಯಾಂಡ್ಗಳ ಜತೆ ಕರ್ನಾಟಕದ ನಂದಿನಿ ಕೂಡ ಪೈಪೋಟಿ ಒಡ್ಡಲಿದೆ.

    ದೆಹಲಿಯ ಅಶೋಕ ಹೊಟೇಲ್ನಲ್ಲಿ ನಂದಿನಿ ಬ್ರ್ಯಾಂಡ್ ಉತ್ಪನ್ನಗಳ ಬಿಡುಗಡೆ ಮಾಡುವ ಮೂಲಕ ಅಧಿಕೃತ ಮಾರಾಟಕ್ಕೆ ಚಾಲನೆ ನೀಡಲಾಯಿತು. ಇದಕ್ಕೂ ಮುನ್ನ ದೆಹಲಿಯ ಅಶೋಕ್ ಹೊಟೇಲ್ಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯಗೆ ಕನ್ನಡಿಗರಿಂದ ಪೂರ್ಣಕುಂಭ ಸ್ವಾಗತ ದೊರೆಯಿತು.

    ಸಚಿವರಾದ ಭೈರತಿ ಸುರೇಶ್, ವೆಂಕಟೇಶ್, ಚಲುವರಾಯಸ್ವಾಮಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಿಎಂಗೆ ಸಾಥ್ ನೀಡಿದರು.

    3-4 ಲಕ್ಷ ಲೀಟರ್ ಹಾಲು ಮಾರಾಟ ಗುರಿ
    ದೆಹಲಿಯಲ್ಲಿ 3 ರಿಂದ 4 ಲಕ್ಷ ಲೀಟರ್ ಹಾಲನ್ನು ಮಾರಾಟ ಮಾಡಬೇಕು ಎಂಬ ಗುರಿ ಹಾಕಿಕೊಂಡಿದ್ದೇವೆ. ಇನ್ನು ಮುಂದೆ ದೆಹಲಿಯಲ್ಲಿ ಶೇ 100 ರಷ್ಟು ಪರಿಶುದ್ಧ ಹಾಲು ಸಿಗಲಿದೆ. ಶುದ್ಧ ಹಸುವಿನ ಹಾಲನ್ನು ದೆಹಲಿ ಜನರಿಗೆ ನೀಡುತ್ತೇವೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯಕ್ ಹೇಳಿದರು.

    ವಿಶ್ವಮಟ್ಟದಲ್ಲಿ ನಂದಿನಿ ಹವಾ
    ಕೆಲವು ತಿಂಗಳ ಹಿಂದೆ ಅಮೆರಿಕ ಹಾಗೂ ವೆಸ್ಟ್ ಇಂಡೀಸ್ನಲ್ಲಿ ನಡೆದಿದ್ದ ಟಿ20 ವಿಶ್ವಕಪ್ ವೇಳೆ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವವನ್ನು ಕೆಎಂಎಫ್ ವಹಿಸಿತ್ತು. ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಜೆರ್ಸಿ ಮೇಲೆ ಪ್ರಾಯೋಜಕರಾಗಿ ‘ನಂದಿನಿ’ ಬ್ರ್ಯಾಂಡ್ ಹೆಸರು ನಮೂದಿಸಲಾಗಿತ್ತು. ಅಷ್ಟೇ ಅಲ್ಲದೆ, ವಿಶ್ವಕಪ್ ವೇಳೆ ನಂದಿನಿ ಉತ್ಪನ್ನಗಳನ್ನೂ ಪೂರೈಸಲಾಗಿತ್ತು. ಆ ಮೂಲಕ ವಿಶ್ವಮಟ್ಟದಲ್ಲಿ ನಂದಿನಿ ಬ್ರ್ಯಾಂಡ್ ಉತ್ಪನ್ನಗಳು ಗಮನ ಸೆಳೆದಿದ್ದವು. ವಿಶ್ವಕಪ್ ವೇಳೆ ನಂದಿನಿ ಬ್ರ್ಯಾಂಡ್ನ ಫ್ರೋಝನ್ ಸಿಹಿತಿಂಡಿಗಳು, ಹಾಲಿನಿಂದ ಕೂಡಿದ ಎನರ್ಜಿ ಡ್ರಿಂಕ್ ನಂದಿನಿ ಸ್ಪ್ಲಾಶ್ ಅನ್ನು ಕೆಎಂಎಫ್ ಅಮೆರಿಕಕ್ಕೆ ಪೂರೈಕೆ ಮಾಡಿತ್ತು.

    ಅಮುಲ್‌, ಮದರ್‌ ಡೈರಿಗೆ ಪೈಪೋಟಿ ನೀಡಲು ದೆಹಲಿ ಮಾರುಕಟ್ಟೆಗೂ ಲಗ್ಗೆಯಿಡಲಿದೆ ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನ ಕರ್ನಾಟಕ ಹಾಲು ಒಕ್ಕೂಟ ಕೆಎಂಎಫ್ ಈಗ 50 ವರ್ಷದ ಮೈಲಿಗಲ್ಲು ಸಾಧಿಸಿದ್ದು, ಈ ಸಂದರ್ಭದಲ್ಲೇ ಸಂಸ್ಥೆಯ ಉತ್ಪನ್ನಗಳು ದೇಶ ವಿದೇಶಗಳಲ್ಲಿ ಸದ್ದು ಮಾಡುತ್ತಿವೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಯೂ ಉತ್ಪನ್ನಗಳ ಅಧಿಕೃತ ಮಾರಾಟ ಆರಂಭವಾಗಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search